ಅರಣ್ಯಕಾಂಡ 32:23 - ಕನ್ನಡ ಸಮಕಾಲಿಕ ಅನುವಾದ23 “ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಯೆಹೋವ ದೇವರ ವಿರೋಧವಾಗಿ ಪಾಪಮಾಡಿದವರಾಗುವಿರಿ, ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವುದೆಂದು ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 “ಆದರೆ ನೀವು ಹಾಗೆ ಮಾಡದೆ ಹೋದರೆ, ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನೀವು ಹಾಗೇನಾದರೂ ಮಾಡದೆ ಹೋದರೆ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದವರಾಗುವಿರಿ. ನಿಮ್ಮನ್ನು ದಂಡಿಸುವ ತನಕ ನಿಮ್ಮ ಪಾಪ ನಿಮ್ಮ ಬೆನ್ನತ್ತಿಬರುವುದೆಂದು ತಿಳಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆದರೆ ನೀವು ಹಾಗೆ ಮಾಡದೆಹೋದರೆ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ; ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವದು ಎಂದು ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆದರೆ ನೀವು ಈ ಸಂಗತಿಗಳನ್ನು ಮಾಡದಿದ್ದರೆ, ಯೆಹೋವನಿಗೆ ವಿರೋಧವಾಗಿ ಪಾಪ ಮಾಡಿದವರಾಗಿರುವಿರಿ. ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ಖಚಿತವಾಗಿ ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿ |