ಅರಣ್ಯಕಾಂಡ 32:29 - ಕನ್ನಡ ಸಮಕಾಲಿಕ ಅನುವಾದ29 ಮೋಶೆಯು ಅವರಿಗೆ, “ಗಾದನ ಮಕ್ಕಳೂ, ರೂಬೇನನ ಮಕ್ಕಳೂ ಎಲ್ಲರೂ ಯುದ್ಧಕ್ಕೆ ಸಿದ್ಧವಾಗಿದ್ದು, ನಿಮ್ಮ ಸಂಗಡ ಯೊರ್ದನ್ ನದಿಯನ್ನು ಯೆಹೋವ ದೇವರ ಮುಂದೆ ದಾಟಿದರೆ, ದೇಶವು ನಿಮ್ಮ ಮುಂದೆ ವಶವಾಗಿದ್ದಾಗ ನೀವು ಅವರಿಗೆ ಗಿಲ್ಯಾದ್ ದೇಶವನ್ನು ಸೊತ್ತಾಗಿ ಕೊಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಮೋಶೆಯು ಅವರಿಗೆ, “ಗಾದ್ಯರಲ್ಲಿಯೂ, ರೂಬೇನ್ಯರಲ್ಲಿಯೂ ಯುದ್ಧಸನ್ನದ್ಧರಾದವರೆಲ್ಲರೂ ನಿಮ್ಮೊಡನೆ ಯೊರ್ದನ್ ನದಿಯನ್ನು ದಾಟಿ ಯೆಹೋವನ ಮುಂದೆ ಯುದ್ಧಮಾಡಿದರೆ ಕಾನಾನ್ ದೇಶವನ್ನು ನೀವು ಸ್ವಾಧೀನಮಾಡಿಕೊಂಡಾಗ ನೀವು ಗಿಲ್ಯಾದ್ ಪ್ರದೇಶವನ್ನು ಅವರಿಗೆ ಸ್ವಾಸ್ತ್ಯವಾಗುವುದಕ್ಕೆ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 “ಗಾದ್ಯರಲ್ಲೂ ರೂಬೇನ್ಯರಲ್ಲೂ ಯುದ್ಧಸನ್ನದ್ಧರಾದವರೆಲ್ಲರು ನಿಮ್ಮೊಡನೆ ಜೋರ್ಡನ್ ನದಿಯನ್ನು ದಾಟಿ ಸರ್ವೇಶ್ವರನ ಸಮ್ಮುಖದಲ್ಲಿ ಯುದ್ಧಮಾಡಿದ್ದೇ ಆದರೆ ಕಾನಾನ್ ನಾಡು ನಿಮ್ಮ ಸ್ವಾಧೀನಕ್ಕೆ ಬಂದಾಗ ನೀವು ಗಿಲ್ಯಾದ್ ಪ್ರದೇಶವನ್ನು ಅವರಿಗೆ ಸೊತ್ತಾಗಿ ಕೊಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಗಾದ್ಯರಲ್ಲಿಯೂ ರೂಬೇನ್ಯರಲ್ಲಿಯೂ ಯುದ್ಧಸನ್ನದ್ಧರಾದವರೆಲ್ಲರೂ ನಿಮ್ಮೊಡನೆ ಯೊರ್ದನ್ ಹೊಳೆಯನ್ನು ದಾಟಿ ಯೆಹೋವನ ಮುಂದೆ ಯುದ್ಧಮಾಡಿದರೆ ಕಾನಾನ್ ದೇಶವು ನಿಮ್ಮ ಸ್ವಾಧೀನಕ್ಕೆ ಬಂದಾಗ ನೀವು ಗಿಲ್ಯಾದ್ ಪ್ರದೇಶವನ್ನು ಅವರಿಗೆ ಸ್ವಾಸ್ತ್ಯವಾಗುವದಕ್ಕೆ ಕೊಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಮೋಶೆ ಅವರಿಗೆ, “ಗಾದ್ ಮತ್ತು ರೂಬೇನ್ ಕುಲಗಳಿಂದ ಯುದ್ಧಕ್ಕಾಗಿ ಆರಿಸಲ್ಪಟ್ಟವರು ಜೋರ್ಡನ್ ನದಿಯನ್ನು ಯೆಹೋವನ ಮುಂದೆ ದಾಟಿ ಆ ದೇಶವನ್ನು ಗೆದ್ದುಕೊಂಡರೆ, ನೀವು ಅವರಿಗೆ ಗಿಲ್ಯಾದ್ ಪ್ರಾಂತ್ಯವನ್ನು ಸ್ವಾಸ್ತ್ಯವಾಗಿ ಕೊಡಬೇಕು. ಅಧ್ಯಾಯವನ್ನು ನೋಡಿ |