Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:38 - ಕನ್ನಡ ಸಮಕಾಲಿಕ ಅನುವಾದ

38 ನೆಬೋ, ಬಾಳ್ ಮೆಯೋನ್ ಎಂದು ಬೇರೆ ಈ ಹೆಸರು ಹೊಂದಿದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ, ತಾವು ಕಟ್ಟಿದ ಪಟ್ಟಣಗಳಿಗೆ ಬೇರೆ ಹೆಸರುಗಳನ್ನು ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಸಿಬ್ಮಾ ಎಂಬ ಊರುಗಳನ್ನೂ, ಬೇರೆ ಹೆಸರಿನಿಂದ ಉಚ್ಚರಿಸತಕ್ಕ ನೆಬೋ, ಬಾಳ್ಮೆಯೋನ್ ಎಂಬವುಗಳನ್ನೂ ಹೊಸದಾಗಿ ಕಟ್ಟಿ ಅವುಗಳಿಗೆ ಬೇರೆ ಹೆಸರುಗಳನ್ನು ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಬೇರೆ ಹೆಸರಿನಿಂದ ಉಚ್ಚರಿಸತಕ್ಕ ನೆಬೋ, ಬಾಳ್ಮೆಯೋನ್ ಊರುಗಳನ್ನು ಹೊಸದಾಗಿ ಕಟ್ಟಿ ಅವುಗಳಿಗೆ ಬೇರೆ ಹೆಸರುಗಳನ್ನು ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:38
15 ತಿಳಿವುಗಳ ಹೋಲಿಕೆ  

ಬೇಲ್ ದೇವತೆಯು ತಗ್ಗಿದೆ, ನೆಬೋ ದೇವತೆಯು ಕುಗ್ಗಿದೆ. ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು. ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.


“ಅಟಾರೋತ್, ದೀಬೋನ್, ಯಜ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳು,


ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರಿಕೊಳ್ಳಬೇಡಿರಿ. ಅವರ ದೇವರುಗಳ ಹೆಸರುಗಳನ್ನು ಸ್ಮರಿಸಲೂ ಬೇಡಿರಿ. ಅವುಗಳ ಮೇಲೆ ಆಣೆಯೂ ಇಡಬೇಡಿರಿ. ಅವುಗಳಿಗೆ ಆರಾಧನೆ ಮಾಡಬಾರದು. ಅಡ್ಡಬೀಳಲೂಬಾರದು.


“ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಜಾಗರೂಕತೆಯಿಂದ ಕೈಗೊಳ್ಳಬೇಕು. ಬೇರೆ ದೇವರುಗಳ ಹೆಸರನ್ನು ಎತ್ತಬೇಡ. ಅದನ್ನು ಉಚ್ಚರಿಸಲೂ ಬೇಡ.


ಇತರ ದೇವರುಗಳನ್ನು ಅವಲಂಬಿಸಿರುವವರಿಗೆ ವ್ಯಥೆಗಳು ಹೆಚ್ಚೆಚ್ಚಾಗುವವು. ಅವರಂತೆ ರಕ್ತ ಬಲಿಗಳನ್ನು ನಾನು ಅರ್ಪಿಸುವುದಿಲ್ಲ. ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಉಚ್ಚರಿಸುವುದಿಲ್ಲ.


ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ಕರೆದುಕೊಂಡು ಬಾಮೋತ್ ಬಾಳ್ ದೇವತೆಯ ಎತ್ತರವಾದ ಸ್ಥಳಕ್ಕೆ ಹತ್ತಿ, ಅಲ್ಲಿಂದ ಅವನು ಇಸ್ರಾಯೇಲ್ ಜನರ ಒಂದು ಭಾಗವನ್ನು ತೋರಿಸಿದನು.


ಇದಲ್ಲದೆ ಇಸಾಕನು ತನ್ನ ತಂದೆ ಅಬ್ರಹಾಮನ ದಿನಗಳಲ್ಲಿ ಅಗೆದಂಥ ಬಾವಿಗಳನ್ನು ತಿರುಗಿ ಅಗೆದನು. ಏಕೆಂದರೆ ಅಬ್ರಹಾಮನು ಮರಣದ ನಂತರ ಫಿಲಿಷ್ಟಿಯರು ಅವುಗಳನ್ನು ಮುಚ್ಚಿದ್ದರು. ಅವುಗಳಿಗೆ ತನ್ನ ತಂದೆಯು ಕೊಟ್ಟ ಹೆಸರುಗಳ ಪ್ರಕಾರವೇ ಅವನು ಅವುಗಳಿಗೆ ಹೆಸರುಕೊಟ್ಟನು.


ರೂಬೇನನ ಮಕ್ಕಳು ಹೆಷ್ಬೋನ್, ಎಲೆಯಾಲೆ, ಕಿರ್ಯಾತಯಿಮ್,


ನೆಬೋ ವಂಶಜರಲ್ಲಿ: ಯೆಹಿಯೇಲ್, ಮತ್ತಿತ್ಯ, ಜಾಬಾದ್, ಜೆಬೀನ, ಯದ್ದೈ, ಯೋಯೇಲ್ ಮತ್ತು ಬೆನಾಯ.


ಹೆಷ್ಬೋನ್ ಊರಿನ ಹೊಲ ಮತ್ತು ಸಿಬ್ಮ ಊರಿನ ದ್ರಾಕ್ಷಿ ಸಹ ನಿಸ್ಸಾರವಾಗಿವೆ. ಇತರ ಜನರ ಪ್ರಭುಗಳು ವಿಶಾಲವಾದ ದ್ರಾಕ್ಷಿಗಿಡಗಳನ್ನು ತುಳಿದು ಹಾಕಿದ್ದಾರೆ, ಆ ದ್ರಾಕ್ಷಿಗಿಡಗಳು ಯಜ್ಜೇರ್ ಊರಿನವರೆಗೂ ವ್ಯಾಪಿಸಿ, ಮರುಭೂಮಿಯಲ್ಲಿ ಹರಡಿತ್ತು. ಅದರ ಕೊಂಬೆಗಳು ಹಬ್ಬಿ, ಸಮುದ್ರದವರೆಗೆ ವಿಶಾಲವಾಗಿತ್ತು.


ಮೋವಾಬನ್ನು ಕುರಿತದ್ದು: ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೆಬೋ ಊರಿನವರಿಗೆ ಕಷ್ಟ! ಆ ಊರು ಸೂರೆಯಾಯಿತು; ಕಿರ್ಯಾತಯಿಮು ಶತ್ರುವಿನ ಕೈವಶವಾಗಿ ಅವಮಾನಕ್ಕೆ ಗುರಿಯಾಗಿದೆ; ಬಲವಾದ ಕೋಟೆಯು ಸಹ ಚದರಿ ನಾಚಿಕೆಗೆ ಈಡಾಗಿದೆ.


ಆದ್ದರಿಂದ ಇಗೋ, ದೇಶದ ವೈಭವಗಳಾದ ಮೋವಾಬಿನ ಗಡಿಯ ಪಟ್ಟಣಗಳಾದ ಬೇತ್ ಯೆಷೀಮೋತ್, ಬಾಳ್ ಮೆಯೋನ್, ಕಿರ್ಯಾತಯಿಮ್ ಎಂಬ ಪಟ್ಟಣಗಳು ಇರುವ ಕಡೆಯಲ್ಲಿ ನಾನು ಮೋವಾಬಿನ ಮೇರೆಯನ್ನು ಒಡೆದುಬಿಡುವೆನು.


ನಿನ್ನ ಸಹೋದರನಾದ ಆರೋನನು ಹೋರ್ ಬೆಟ್ಟದಲ್ಲಿ ಸತ್ತು, ತನ್ನ ಜನರ ಬಳಿಗೆ ಸೇರಿದ ಹಾಗೆ, ನೀನು ಏರಿಹೋಗುವ ಬೆಟ್ಟದಲ್ಲಿ ಸತ್ತು, ನಿನ್ನ ಜನರ ಬಳಿಗೆ ಸೇರಬೇಕು.


ಇದಲ್ಲದೆ ಬಯಲುಸೀಮೆಯ ಮೇಲೆ ನ್ಯಾಯ ತೀರ್ವಿಕೆ ಬಂತು; ಹೋಲೋನ್, ಯಹಚ, ಮೇಫಾತ್,


ಕಿರ್ಯಾತಯಿಮ್, ಬೇತ್ ಗಾಮುಲ್, ಬೇತ್ ಮೆಯೋನ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು