Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:4 - ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ಇಸ್ರಾಯೇಲರ ಸಮೂಹಕ್ಕೆ ಅಧೀನಪಡಿಸಿದ ಪ್ರದೇಶವು ಪಶುಗಳ ಮೇವಿಗೆ ಸೂಕ್ತವಾಗಿದೆ. ನಿಮ್ಮ ಸೇವಕರಿಗೂ ಪಶುಗಳು ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇವು ಯೆಹೋವನು ಇಸ್ರಾಯೇಲರ ಸಮೂಹಕ್ಕೆ ಅಧೀನಪಡಿಸಿದ ಪಟ್ಟಣಗಳು. ದನಕುರಿಗಳ ಮೇವಿಗೆ ತಕ್ಕ ಪ್ರದೇಶವಾಗಿದೆ. ನಿಮ್ಮ ದಾಸರಾದ ನಮಗೆ ಬಹಳ ದನ ಕುರಿಗಳುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿಮ್ಮ ದಾಸರಾದ ನಮಗೆ ಬಹಳ ದನಕುರಿಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿಮ್ಮ ದಾಸರಾದ ನಮಗೆ ಬಹಳ ದನಕುರಿಗಳುಂಟಷ್ಟೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:4
9 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಅವನಿಗೆ ಭಯಪಡಬೇಡ, ಏಕೆಂದರೆ ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಇವನಿಗೂ ಮಾಡಬೇಕು,” ಎಂದರು.


ಆದರೆ ಇಸ್ರಾಯೇಲರು ಅವನನ್ನು ಖಡ್ಗದಿಂದ ಹೊಡೆದು, ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯವರೆಗೆ ಅಮ್ಮೋನನ ಮಕ್ಕಳ ಮೇರೆಯವರೆಗೂ ಸ್ವಾಧೀನಪಡಿಸಿಕೊಂಡರು. ಏಕೆಂದರೆ ಅಮ್ಮೋನನ ಮಕ್ಕಳ ಮೇರೆಯು ಬಲಿಷ್ಠವಾಗಿತ್ತು.


ಆದ್ದರಿಂದ ನಮಗೆ ನಿಮ್ಮ ದೃಷ್ಟಿಯಲ್ಲಿ ದಯೆಯು ಸಿಕ್ಕಿದ್ದಾದರೆ, ಈ ದೇಶವನ್ನು ನಿಮ್ಮ ಸೇವಕರಿಗೆ ಸ್ವಾಸ್ತ್ಯಕ್ಕಾಗಿ ಕೊಡಬೇಕು. ನಮ್ಮನ್ನು ಯೊರ್ದನ್ ನದಿಯ ಆಚೆಗೆ ತೆಗೆದುಕೊಂಡು ಹೋಗಬೇಡಿರಿ,” ಎಂದರು.


ದೇವರು ನಿಮಗಿಂತ ದೊಡ್ಡದಾದ, ನಿಮಗಿಂತ ಬಲಿಷ್ಠವಾದ ಜನಾಂಗಗಳನ್ನು ನಿಮ್ಮ ಮುಂದೆ ಓಡಿಸಿ, ನಿಮ್ಮನ್ನು ಅವರ ದೇಶದೊಳಗೆ ಬರಮಾಡಿ, ಈ ದಿನ ನೀವು ಇರುವಂತೆ ನಿಮಗೆ ಅವರ ದೇಶವನ್ನು ಬಳುವಳಿಯಾಗಿ ಕೊಟ್ಟಿದ್ದಾರೆ.


ಈ ಪ್ರಕಾರ ಅವರು ಅವನನ್ನೂ ಅವನ ಮಕ್ಕಳನ್ನೂ ಅವನ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು, ಅವನ ದೇಶವನ್ನು ವಶಮಾಡಿಕೊಂಡರು.


ಹೆಸರು ಹೆಸರಾಗಿ ಬರೆದಿರುವವರಾದ ಇವರು ಯೆಹೂದದ ಅರಸನಾದ ಹಿಜ್ಕೀಯನ ದಿವಸಗಳಲ್ಲಿ ಅಲ್ಲಿಗೆ ಹೋಗಿ ಹಾಮ್ಯರ ಡೇರೆಗಳನ್ನೂ ಅಲ್ಲಿ ಸಿಕ್ಕಿದ ಮೆಗೂನ್ಯರನ್ನೂ ಸಂಪೂರ್ಣವಾಗಿ ನಾಶಮಾಡಿದರು. ಅಲ್ಲಿ ತಮ್ಮ ಮಂದೆಗಳಿಗೆ ಮೇವು ಇರುವುದರಿಂದ ಇಂದಿನವರೆಗೂ ಅವರ ಸ್ಥಳದಲ್ಲಿ ವಾಸಿಸಿದರು.


ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರುಗಿ ಬರಮಾಡುತ್ತೇನೆ; ಅವನು ಕರ್ಮೆಲಿನಲ್ಲಿಯೂ, ಬಾಷಾನಿನಲ್ಲಿಯೂ ಮೇಯುವನು; ಅವನ ಪ್ರಾಣವು ಎಫ್ರಾಯೀಮ್ ಬೆಟ್ಟದಲ್ಲಿಯೂ, ಗಿಲ್ಯಾದಿನಲ್ಲಿಯೂ ತೃಪ್ತಿ ಹೊಂದುವುದು.”


ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆಯನ್ನೂ ನಿನ್ನ ಕೋಲಿನಿಂದ ಮೇಯಿಸು. ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು