Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:7 - ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ಅವರಿಗೆ ಕೊಟ್ಟ ದೇಶಕ್ಕೆ ಹೋಗುವುದಕ್ಕೆ ನೀವು ಇಸ್ರಾಯೇಲರ ಹೃದಯಗಳನ್ನು ಅಧೈರ್ಯಪಡಿಸುವುದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನು ಇಸ್ರಾಯೇಲರಿಗೆ ಕೊಟ್ಟ ದೇಶಕ್ಕೆ ಅವರು ಹೋಗದಂತೆ ನೀವು ಏಕೆ ಅವರಿಗೆ ಅಧೈರ್ಯವನ್ನು ಹುಟ್ಟಿಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರ ಇಸ್ರಯೇಲರಿಗೆ ಕೊಟ್ಟ ನಾಡಿಗೆ ಅವರು ಹೋಗದಂತೆ ನೀವೇಕೆ ಅಧೈರ್ಯವನ್ನು ಹುಟ್ಟಿಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನು ಇಸ್ರಾಯೇಲ್ಯರಿಗೆ ಕೊಟ್ಟ ದೇಶಕ್ಕೆ ಅವರು ಹೋಗದಂತೆ ನೀವು ಯಾಕೆ ಅವರಿಗೆ ಅಧೈರ್ಯವನ್ನು ಹುಟ್ಟಿಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ಇಸ್ರೇಲರಿಗೆ ಕೊಟ್ಟ ದೇಶಕ್ಕೆ ಅವರು ಹೋಗದಂತೆ ನೀವು ಯಾಕೆ ಅವರಿಗೆ ಅಧೈರ್ಯವನ್ನು ಹುಟ್ಟಿಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:7
9 ತಿಳಿವುಗಳ ಹೋಲಿಕೆ  

ಆಗ ಪೌಲನು, “ನೀವೇಕೆ ಅತ್ತು ನನ್ನ ಹೃದಯ ಒಡೆಯುತ್ತೀರಿ? ಬಂಧಿತನಾಗಲಷ್ಟೇ ಅಲ್ಲ, ನಮ್ಮ ಕರ್ತ ಯೇಸುವಿನ ಹೆಸರಿನ ನಿಮಿತ್ತ ಯೆರೂಸಲೇಮಿನಲ್ಲಿ ನಾನು ಸಾಯಲಿಕ್ಕೂ ಸಿದ್ಧನಾಗಿದ್ದೇನೆ,” ಎಂದನು.


ನಾವು ಎಲ್ಲಿಗೆ ಏರಿಹೋಗೋಣ? ನಮ್ಮ ಸಹೋದರರು, ‘ಆ ಜನರು ನಮಗಿಂತ ಬಲಿಷ್ಠರೂ ಎತ್ತರವಾದವರೂ ಪಟ್ಟಣಗಳು ದೊಡ್ಡವೂ, ಆಕಾಶವನ್ನು ಮುಟ್ಟುವ ಗೋಡೆಯುಳ್ಳವುಗಳೂ ಆಗಿವೆ. ಇದಲ್ಲದೆ ರಾಕ್ಷಸಾಕಾರದ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು’ ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ,” ಎಂದು ಹೇಳಿದಿರಿ.


ಹೇಗೆಂದರೆ ಅವರು ಎಷ್ಕೋಲೆಂಬ ಹಳ್ಳದವರೆಗೆ ಬಂದು, ದೇಶವನ್ನು ನೋಡಿದಾಗ, ಇಸ್ರಾಯೇಲರ ಹೃದಯವನ್ನು ಯೆಹೋವ ದೇವರು ಅವರಿಗೆ ಕೊಟ್ಟ ದೇಶದ ಒಳಗೆ ಹೋಗದ ಹಾಗೆ ಅಧೈರ್ಯಪಡಿಸಿದನು.


ಅವರು ಹೋರ್ ಎಂಬ ಬೆಟ್ಟದಿಂದ ಹೊರಟು, ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣಮಾಡಿದರು. ಆದರೆ ಜನರು ಈ ಪ್ರಯಾಣದಿಂದ ಆಯಾಸವಾಗಿ ಬಹಳ ಕುಂದಿಹೋದರು.


ಅವರು ಮೋಶೆಗೆ, “ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು. ಅದು ನಿಜವಾಗಿಯೂ ಹಾಲೂ ಜೇನೂ ಹರಿಯುವ ದೇಶವೇ. ಅದರ ಫಲವು ಇವೇ.


ಅವರ ಹೆಸರುಗಳು ಯಾವುವೆಂದರೆ: ರೂಬೇನನ ಗೋತ್ರದ ಜಕ್ಕೂರನ ಮಗ ಶಮ್ಮೂವ,


ಆಗ ಮೋಶೆಯು ಗಾದನ ಮಕ್ಕಳಿಗೂ, ರೂಬೇನನ ಮಕ್ಕಳಿಗೂ, “ನಿಮ್ಮ ಸಹೋದರರು ಯುದ್ಧಕ್ಕೆ ಹೋಗುವಾಗ ನೀವು ಇಲ್ಲಿ ಕುಳಿತಿರಬೇಕೋ?


ಆದರೆ ಅವನ ಸಂಗಡ ಹೋದ ಜನರು, “ಆ ಜನರ ಬಳಿಗೆ ಹೋಗುವುದಕ್ಕೆ ನಮ್ಮಿಂದಾಗುವುದಿಲ್ಲ, ಅವರು ನಮಗಿಂತ ಬಲಿಷ್ಠರಾಗಿದ್ದಾರೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು