ಅರಣ್ಯಕಾಂಡ 32:9 - ಕನ್ನಡ ಸಮಕಾಲಿಕ ಅನುವಾದ9 ಹೇಗೆಂದರೆ ಅವರು ಎಷ್ಕೋಲೆಂಬ ಹಳ್ಳದವರೆಗೆ ಬಂದು, ದೇಶವನ್ನು ನೋಡಿದಾಗ, ಇಸ್ರಾಯೇಲರ ಹೃದಯವನ್ನು ಯೆಹೋವ ದೇವರು ಅವರಿಗೆ ಕೊಟ್ಟ ದೇಶದ ಒಳಗೆ ಹೋಗದ ಹಾಗೆ ಅಧೈರ್ಯಪಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವರು ಎಷ್ಕೋಲ್ ತಗ್ಗಿಗೆ ಬಂದು ಆ ದೇಶವನ್ನು ನೋಡಿ ಇಸ್ರಾಯೇಲರಿಗೆ ಅಧೈರ್ಯವನ್ನು ಹುಟ್ಟಿಸಿದ್ದರಿಂದ ಇಸ್ರಾಯೇಲರು ತಮಗೆ ಯೆಹೋವನು ವಾಗ್ದಾನಮಾಡಿದ ದೇಶಕ್ಕೆ ಹೋಗಲು ಆಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವರು ಎಷ್ಕೋಲ್ ಕಣಿವೆಗೆ ಬಂದು ಆ ನಾಡನ್ನು ನೋಡಿ ಇಸ್ರಯೇಲರಿಗೆ ಅಧೈರ್ಯವನ್ನು ಹುಟ್ಟಿಸಿದರು. ಆದ್ದರಿಂದ ಇಸ್ರಯೇಲರು ತಮಗೆ ಸರ್ವೇಶ್ವರ ವಾಗ್ದಾನಮಾಡಿದ ನಾಡಿಗೆ ಹೋಗಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವರು ಎಷ್ಕೋಲ್ ತಗ್ಗಿಗೆ ಬಂದು ಆ ದೇಶವನ್ನು ನೋಡಿ ಇಸ್ರಾಯೇಲ್ಯರಿಗೆ ಅಧೈರ್ಯವನ್ನು ಹುಟ್ಟಿಸಿದದರಿಂದ ಇಸ್ರಾಯೇಲ್ಯರು ತಮಗೆ ಯೆಹೋವನು ವಾಗ್ದಾನಮಾಡಿದ ದೇಶಕ್ಕೆ ಹೋಗಲೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅವರು ಎಷ್ಕೋಲ್ ತಗ್ಗಿಗೆ ಬಂದು ಆ ದೇಶವನ್ನು ನೋಡಿ ಇಸ್ರೇಲರಿಗೆ ಅಧೈರ್ಯವನ್ನು ಹುಟ್ಟಿಸಿದ್ದರಿಂದ ಇಸ್ರೇಲರು ತಮಗೆ ಯೆಹೋವನು ವಾಗ್ದಾನ ಮಾಡಿದ್ದ ದೇಶಕ್ಕೆ ಹೋಗಲೇ ಇಲ್ಲ. ಅಧ್ಯಾಯವನ್ನು ನೋಡಿ |