Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 33:4 - ಕನ್ನಡ ಸಮಕಾಲಿಕ ಅನುವಾದ

4 ಹೇಗೆಂದರೆ ಆ ಕಾಲದಲ್ಲಿ ಯೆಹೋವ ದೇವರು ಈಜಿಪ್ಟಿನವರ ಸಮಸ್ತ ಚೊಚ್ಚಲಿನವರನ್ನು ಹೊಡೆದು ಆ ಮಕ್ಕಳ ಶವಗಳನ್ನು ಹೂಣಿಟ್ಟರು, ಯೆಹೋವ ದೇವರು ಅವರ ದೇವರುಗಳಿಗೂ ಶಿಕ್ಷೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಕಾಲದಲ್ಲಿ ಯೆಹೋವನು ಐಗುಪ್ತ್ಯರ ದೇವತೆಗಳನ್ನು ಶಿಕ್ಷಿಸಿ, ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದ್ದರಿಂದ ಅವರು ಆ ಮಕ್ಕಳ ಶವಗಳನ್ನು ಸಮಾಧಿಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ಈಜಿಪ್ಟರ ದೇವತೆಗಳನ್ನು ದಂಡಿಸಿ ಈಜಿಪ್ಟರ ಚೊಚ್ಚಲು ಮಕ್ಕಳನ್ನು ಸಂಹರಿಸಿದ್ದರು. ಆ ಮಕ್ಕಳ ಶವಗಳನ್ನು ಸಮಾಧಿ ಮಾಡಲಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ಕಾಲದಲ್ಲಿ ಯೆಹೋವನು ಐಗುಪ್ತ್ಯರ ದೇವತೆಗಳನ್ನು ಶಿಕ್ಷಿಸಿ ಐಗುಪ್ತ್ಯರ ಚೊಚ್ಚಲುಮಕ್ಕಳನ್ನು ಸಂಹರಿಸಿದದರಿಂದ ಅವರು ಆ ಮಕ್ಕಳ ಶವಗಳನ್ನು ಸಮಾಧಿಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಈಜಿಪ್ಟಿನವರು ಯೆಹೋವನು ಕೊಂದುಹಾಕಿದ ತಮ್ಮ ಚೊಚ್ಚಲು ಮಕ್ಕಳನ್ನು ಹೂಳಿಡುತ್ತಿದ್ದರು. ಯೆಹೋವನು ಈಜಿಪ್ಟಿನ ದೇವರುಗಳನ್ನು ಶಿಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 33:4
8 ತಿಳಿವುಗಳ ಹೋಲಿಕೆ  

“ಏಕೆಂದರೆ ನಾನು ಈ ರಾತ್ರಿ ಈಜಿಪ್ಟ್ ದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ, ಪಶುಗಳಲ್ಲಿಯೂ ಇರುವ ಚೊಚ್ಚಲಾದವುಗಳನ್ನು ಸಂಹರಿಸುವೆನು. ಈಜಿಪ್ಟಿನ ದೇವರುಗಳಿಗೆಲ್ಲಾ ನಾನು ನ್ಯಾಯತೀರಿಸುವೆನು. ನಾನೇ ಯೆಹೋವ ದೇವರು.


ಈಜಿಪ್ಟಿನವರ ವಿಷಯವಾದ ಪ್ರವಾದನೆ: ಇಗೋ, ಯೆಹೋವ ದೇವರು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಈಜಿಪ್ಟಿಗೆ ಬರುತ್ತಾರೆ. ಅವರು ಸಮ್ಮುಖರಾದಾಗ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯಗಳು ಅದರ ಮಧ್ಯೆ ಭಯದಿಂದ ಕರಗುವುವು.


ಅವರು ಭೂಮಿಯ ಎಲ್ಲಾ ದೇವರುಗಳನ್ನು ನಾಶಮಾಡುವಾಗ, ಯೆಹೋವ ದೇವರು ಅವರಿಗೆ ಭಯಂಕರವಾಗಿರುವರು. ಇತರ ಜನಾಂಗಗಳ ದ್ವೀಪಗಳವರೆಲ್ಲರು ತಮ್ಮ ತಮ್ಮ ಸ್ಥಳಗಳಲ್ಲಿ ಅವರನ್ನು ಆರಾಧಿಸುವರು.


ಎಲ್ಲಾ ದೇವರುಗಳಿಗಿಂತ ಯೆಹೋವ ದೇವರೇ ದೊಡ್ಡವರೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಏಕೆಂದರೆ ಈಜಿಪ್ಟಿನವರು ಗರ್ವಪಟ್ಟಿದ್ದರಿಂದ ಯೆಹೋವ ದೇವರು ಅವರನ್ನು ತಗ್ಗಿಸಿದರು,” ಎಂದನು.


ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲ ಮಕ್ಕಳೂ ಅವರ ಎಲ್ಲಾ ಪ್ರಮುಖರೂ ದೇವರ ಬಾಧೆಗೆ ಒಳಗಾದರು.


ಏಕೆಂದರೆ ಜೇಷ್ಠರಾದವರೆಲ್ಲರೂ ನನ್ನವರೇ. ನಾನು ಈಜಿಪ್ಟ್ ದೇಶದಲ್ಲಿ ಜೇಷ್ಠರಾದವುಗಳನ್ನೆಲ್ಲಾ ಹೊಡೆದ ದಿವಸದಲ್ಲಿ ನಾನು ಇಸ್ರಾಯೇಲರಲ್ಲಿ ಪುರುಷರಾಗಲಿ, ಪಶುಗಳಾಗಲಿ ಚೊಚ್ಚಲಾದ ಪ್ರತಿಯೊಂದನ್ನು ನನಗಾಗಿ ಪ್ರತ್ಯೇಕಿಸಿದ್ದೇನೆ. ಅವರು ನನ್ನವರಾಗಿರಬೇಕು. ನಾನೇ ಯೆಹೋವ ದೇವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು