Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 34:12 - ಕನ್ನಡ ಸಮಕಾಲಿಕ ಅನುವಾದ

12 ಅಲ್ಲಿಂದ ಮೇರೆಯು ಯೊರ್ದನ್ ನದಿಗೆ ಅನುಸಾರವಾಗಿ ಇಳಿದು, ಉಪ್ಪಿನ ಸಮುದ್ರದಲ್ಲಿ ಮುಗಿಯುವುದು. “ ‘ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅಲ್ಲಿಂದ ಅದು ಯೊರ್ದನ್ ನದಿಗೆ ಇಳಿದು ಅದನ್ನು ಅನುಸರಿಸಿ ಲವಣಸಮುದ್ರದ ಬಳಿಯಲ್ಲಿ ಮುಗಿಯಬೇಕು. ಇವೇ ನಿಮ್ಮ ದೇಶದ ಮೇರೆಗಳು’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದೂ ಅಲ್ಲಿಂದ ಜೋರ್ಡನ್ ನದಿಗೆ ಇಳಿದು, ಅದನ್ನು ಅನುಸರಿಸುತ್ತಾ ಲವಣ ಸಮುದ್ರದ ಬಳಿಯಲ್ಲಿ ಮುಗಿಯಬೇಕು.’ ಇವೇ ನಿಮ್ಮ ನಾಡಿನ ಮೇರೆಗಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅಲ್ಲಿಂದ ಅದು ಯೊರ್ದನ್ ಹೊಳೆಗೆ ಇಳಿದು [ಅದನ್ನು ಅನುಸರಿಸಿ] ಲವಣ ಸಮುದ್ರದ ಬಳಿಯಲ್ಲಿ ಮುಗಿಯಬೇಕು. ಇವೇ ನಿಮ್ಮ ದೇಶದ ಮೇರೆಗಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಬಳಿಕ ಈ ಮೇರೆಯು ಜೋರ್ಡನ್ ನದಿಯ ಉದ್ದಕ್ಕೂ ಮುಂದುವರೆಯುವುದು. ಅದು ಉಪ್ಪು ಸಮುದ್ರದಲ್ಲಿ ಕೊನೆಗೊಳ್ಳುವುದು. ಇವುಗಳೇ ನಿಮ್ಮ ದೇಶದ ಸುತ್ತಲಿನ ಮೇರೆಗಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 34:12
10 ತಿಳಿವುಗಳ ಹೋಲಿಕೆ  

“ ‘ನಿಮ್ಮ ದಕ್ಷಿಣ ಕಡೆಯು ಚಿನ್ ಮರುಭೂಮಿಯಿಂದ ಎದೋಮಿಗೆ ಅನುಸಾರವಾಗಿರಬೇಕು. ನಿಮ್ಮ ದಕ್ಷಿಣ ಮೇರೆಯು, ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು.


ಇವರೆಲ್ಲರು ಉಪ್ಪಿನ ಸಮುದ್ರವಾಗಿರುವ ಸಿದ್ದೀಮ್ ತಗ್ಗಿನಲ್ಲಿ ಒಟ್ಟಾಗಿ ಕೂಡಿಬಂದರು.


ಲೋಟನು ತನ್ನ ಕಣ್ಣುಗಳನ್ನೆತ್ತಿ ನೋಡಿ ಯೊರ್ದನಿನ ಮೈದಾನವನ್ನೆಲ್ಲಾ ಕಂಡನು. ಏಕೆಂದರೆ ಯೆಹೋವ ದೇವರು ಸೊದೋಮನ್ನೂ ಗೊಮೋರವನ್ನೂ ನಾಶ ಮಾಡುವುದಕ್ಕಿಂತ ಮುಂಚೆ, ಅದೆಲ್ಲಾ ಚೋಗರಿನವರೆಗೆ ನೀರಾವರಿ ಪ್ರದೇಶವಾಗಿದ್ದು, ಯೆಹೋವ ದೇವರ ತೋಟದಂತೆಯೂ ಈಜಿಪ್ಟ್ ದೇಶದಂತೆಯೂ ಇತ್ತು.


ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಾಕ್ಕೆ ಇಳಿದು, ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ.


ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿ, “ನೀವು ಚೀಟುಹಾಕಿ ಸ್ವಾಧೀನಪಡಿಸಿಕೊಳ್ಳಬೇಕಾದ ದೇಶವು ಒಂಬತ್ತುವರೆ ಗೋತ್ರಗಳಿಗೆ ಕೊಡಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ ದೇಶವು ಇದೇ.


“ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದವರೆಗೆ ಮರುಭೂಮಿಯಿಂದ ನದಿಯವರೆಗೂ ನಿಮ್ಮ ಮೇರೆಗಳನ್ನು ನೇಮಿಸುವೆನು. ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವಿರಿ.


ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವ ದೇವರು ಅವನಿಗೆ, “ನೀನು ಈಗ ಮುದುಕನಾದಿ, ಸ್ವಾಧೀನ ಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇವೆ.


ಅದರ ಪೂರ್ವದ ಮೇರೆ, ಯೊರ್ದನ್ ನದಿ ಕೊನೆಯ ಮಟ್ಟಿಗಿರುವ ಲವಣ ಸಮುದ್ರವು. ಉತ್ತರ ಕಡೆಗೆ ಯೊರ್ದನ್ ನದಿ ಮೇರೆ ಕೊನೆ ಹತ್ತಿರ ಸಮುದ್ರದ ಮುಖದ್ವಾರದಿಂದ ಇತ್ತು;


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀವು ಇಸ್ರಾಯೇಲಿನ ಹನ್ನೆರಡು ಗೋತ್ರಗಳ ಪ್ರಕಾರ ದೇಶವನ್ನು ಬಾಧ್ಯವಾಗಿ ಹೊಂದುವ ಹಾಗೆ ಇದು ಮೇರೆಯಾಗಿದೆ. ಯೋಸೇಫನಿಗೆ ಎರಡು ಪಾಲುಗಳು ಕೊಡಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು