ಅರಣ್ಯಕಾಂಡ 34:14 - ಕನ್ನಡ ಸಮಕಾಲಿಕ ಅನುವಾದ14 ಏಕೆಂದರೆ ರೂಬೇನ್ಯರ ಮಕ್ಕಳ ಗೋತ್ರವೂ, ಗಾದನ ಮಕ್ಕಳ ಗೋತ್ರವೂ, ಮನಸ್ಸೆಯ ಅರ್ಧ ಗೋತ್ರವೂ ತಮ್ಮ ಪಿತೃಗಳ ಮನೆಯ ಪ್ರಕಾರವಾಗಿ ತಮ್ಮ ಸೊತ್ತನ್ನು ಪಡೆದುಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ರೂಬೇನ್ಯರ ಮಕ್ಕಳ ಗೋತ್ರವೂ, ಗಾದ್ಯರ ಮಕ್ಕಳ ಗೋತ್ರವೂ, ಮನಸ್ಸೆ ಕುಲದವರಲ್ಲಿ ಅರ್ಧಗೋತ್ರವೂ ತಮ್ಮ ಪೂರ್ವಿಕರ ಗೋತ್ರಗಳ ಪ್ರಕಾರವಾಗಿ ತಮ್ಮ ಸ್ವತ್ತನ್ನು ಹೊಂದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14-15 ಬೇರೆ ಎರಡುವರೆ ಕುಲಗಳವರು, ಅಂದರೆ ರೂಬೇನ್ಯರ ಕುಟುಂಬಗಳು, ಗಾದ್ಯರ ಕುಟುಂಬಗಳು ಹಾಗು ಮನಸ್ಸೆಕುಲದವರಲ್ಲಿ ಅರ್ಧಜನರು ಜೋರ್ಡನ್ ನದಿಯ ಈಚೆ ಜೆರಿಕೊ ಪಟ್ಟಣಕ್ಕೆ ಪೂರ್ವದಿಕ್ಕಿನಲ್ಲಿ ಸೊತ್ತನ್ನು ಹೊಂದಿದ್ದಾರೆ,” ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14-15 ಬೇರೆ ಎರಡುವರೆ ಕುಲಗಳವರು ಅಂದರೆ ರೂಬೇನ್ಯರ ಕುಟುಂಬಗಳೂ ಗಾದ್ಯರ ಕುಟುಂಬಗಳೂ ಮನಸ್ಸೆ ಕುಲದವರಲ್ಲಿ ಅರ್ಧಜನರೂ ಯೊರ್ದನ್ ಹೊಳೆಯ ಈಚೆ ಯೆರಿಕೋ ಪಟ್ಟಣಕ್ಕೆ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವನ್ನು ಹೊಂದಿದ್ದಾರಷ್ಟೆ ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14-15 ಬೇರೆ ಎರಡೂವರೆ ಕುಲಗಳವರು ಅಂದರೆ ರೂಬೇನ್ ಕುಲ ಮತ್ತು ಗಾದ್ ಕುಲ ಮತ್ತು ಮನಸ್ಸೆಯ ಅರ್ಧಕುಲವು ಜೆರಿಕೊ ಪಟ್ಟಣದ ಆಚೆಯಲ್ಲಿರುವ ಜೋರ್ಡನ್ ನದಿಯ ಪೂರ್ವಭಾಗದಲ್ಲಿ ಈಗಾಗಲೇ ಸ್ವಾಸ್ತ್ಯವನ್ನು ಹೊಂದಿ ತಮ್ಮ ಕುಟುಂಬಗಳ ಪ್ರಕಾರ ಹಂಚಿಕೊಂಡಿದ್ದಾರೆ.” ಅಧ್ಯಾಯವನ್ನು ನೋಡಿ |