Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 34:3 - ಕನ್ನಡ ಸಮಕಾಲಿಕ ಅನುವಾದ

3 “ ‘ನಿಮ್ಮ ದಕ್ಷಿಣ ಕಡೆಯು ಚಿನ್ ಮರುಭೂಮಿಯಿಂದ ಎದೋಮಿಗೆ ಅನುಸಾರವಾಗಿರಬೇಕು. ನಿಮ್ಮ ದಕ್ಷಿಣ ಮೇರೆಯು, ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀವು ಅಲ್ಲಿ ಸೇರಿದಾಗ ಎದೋಮ್ಯರ ಗಡಿಗಳ ಬಳಿಯಲ್ಲಿರುವ ಚಿನ್ ಅರಣ್ಯವು ನಿಮ್ಮ ದಕ್ಷಿಣದ ಮೇರೆಯಾಗಿರಬೇಕು. ಆ ಮೇರೆಯ ಪೂರ್ವದಿಕ್ಕಿನಲ್ಲಿರುವ ಲವಣಸಮುದ್ರದ ಕೊನೆಯಿಂದ ಪ್ರಾರಂಭಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನೀವು ಅಲ್ಲಿ ಸೇರಿದಾಗ ಎದೋಮ್ಯರ ಸರಹದ್ದಿನ ಬಳಿಯಿರುವ ಚಿನ್ ಮರುಭೂಮಿಯೇ ನಿಮ್ಮ ದಕ್ಷಿಣ ಮೇರೆಯಾಗಿರಬೇಕು. ಆ ಮೇರೆ ಮೂಡಣ ದಿಕ್ಕಿನಲ್ಲಿ ಲವಣಸಮುದ್ರದ ಕೊನೆಯಿಂದ ತೊಡಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀವು ಅಲ್ಲಿ ಸೇರಿದಾಗ ಎದೋಮ್ಯರ ಸರಹದ್ದಿನ ಬಳಿಯಲ್ಲಿರುವ ಚಿನ್ ಅರಣ್ಯವೇ ನಿಮ್ಮ ದಕ್ಷಿಣ ಮೇರೆಯಾಗಿರಬೇಕು. ಆ ಮೇರೆಯು ಮೂಡಣದಿಕ್ಕಿನಲ್ಲಿ ಲವಣ ಸಮುದ್ರದ ಕೊನೆಯಿಂದ ತೊಡಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದಕ್ಷಿಣಭಾಗವು ಎದೋಮಿನ ಗಡಿಯಲ್ಲಿರುವ ಚಿನ್ ಮರುಭೂಮಿಯನ್ನು ಒಳಗೊಂಡಿದೆ. ಪೂರ್ವದ ಕಡೆಯಿರುವ ದಕ್ಷಿಣ ಗಡಿಯು ಉಪ್ಪುಸಮುದ್ರದ ದಕ್ಷಿಣಭಾಗದಿಂದ ಆರಂಭವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 34:3
9 ತಿಳಿವುಗಳ ಹೋಲಿಕೆ  

ಇವರೆಲ್ಲರು ಉಪ್ಪಿನ ಸಮುದ್ರವಾಗಿರುವ ಸಿದ್ದೀಮ್ ತಗ್ಗಿನಲ್ಲಿ ಒಟ್ಟಾಗಿ ಕೂಡಿಬಂದರು.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀವು ಇಸ್ರಾಯೇಲಿನ ಹನ್ನೆರಡು ಗೋತ್ರಗಳ ಪ್ರಕಾರ ದೇಶವನ್ನು ಬಾಧ್ಯವಾಗಿ ಹೊಂದುವ ಹಾಗೆ ಇದು ಮೇರೆಯಾಗಿದೆ. ಯೋಸೇಫನಿಗೆ ಎರಡು ಪಾಲುಗಳು ಕೊಡಲಾಗಿದೆ.


ಆಗ ಅವನು, “ಈ ನೀರು ಪೂರ್ವಸೀಮೆಗೆ ಹೋಗಿ ಅರಾಬಾ ಎಂಬ ಒಣಭೂಮಿಗೆ ಇಳಿದು ಲವಣ ಸಮುದ್ರ ಸೇರುವುದು. ಲವಣ ಸಮುದ್ರ ಸೇರಿದ ಮೇಲೆ ಅಲ್ಲಿಯ ನೀರು ಸಿಹಿಯಾಗುವುದು.


ಮೇಲಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಸಮೀಪವಾಗಿದ್ದ ಆದಾಮ್ ಪಟ್ಟಣಕ್ಕೆ ಬಂದು ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ಎಂಬ ಲವಣ ಸಮುದ್ರಕ್ಕೆ ಹರಿದುಹೋಯಿತು. ಆಗ ಜನರು ಯೆರಿಕೋವಿನ ಎದುರಾಗಿ ನದಿ ದಾಟಿದರು.


“ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದವರೆಗೆ ಮರುಭೂಮಿಯಿಂದ ನದಿಯವರೆಗೂ ನಿಮ್ಮ ಮೇರೆಗಳನ್ನು ನೇಮಿಸುವೆನು. ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವಿರಿ.


ಮರುಭೂಮಿಯೂ ಈ ಲೆಬನೋನ್ ಮೊದಲುಗೊಂಡು ಯೂಫ್ರೇಟೀಸ್ ಮಹಾ ನದಿಯವರೆಗೆ ಇರುವ ಹಿತ್ತಿಯರ ದೇಶವೆಲ್ಲಾ ನಿಮ್ಮದಾಗುವುದು. ನಿಮ್ಮ ಸೀಮೆ ಸೂರ್ಯನು ಅಸ್ತಮಿಸುವ ಮಹಾಸಾಗರದವರೆಗೂ ವಿಸ್ತರಿಸಿಕೊಳ್ಳುವುದು.


ಆಗ ಅವರು ಏರಿಹೋಗಿ ಚಿನ್ ಎಂಬ ಮರುಭೂಮಿಯಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನವರೆಗೂ ದೇಶವನ್ನು ಸಂಚರಿಸಿ ನೋಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು