Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:15 - ಕನ್ನಡ ಸಮಕಾಲಿಕ ಅನುವಾದ

15 ಕೈತಪ್ಪಿ ಪ್ರಾಣಹತ್ಯೆ ಮಾಡುವವರೆಲ್ಲರೂ, ಅಲ್ಲಿಗೆ ಓಡಿಹೋಗುವುದಕ್ಕೆ ಈ ಆರು ಪಟ್ಟಣಗಳು ಇಸ್ರಾಯೇಲರಿಗೂ, ಪರಕೀಯರಿಗಾಗಿ ಅವರಲ್ಲಿ ವಾಸಮಾಡುವವರಿಗೂ ಆಶ್ರಯಕ್ಕಾಗಿ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಇಸ್ರಾಯೇಲನಾಗಲಿ, ಪರದೇಶದವನಾಗಲಿ ಮತ್ತು ನಿಮ್ಮಲ್ಲಿ ಇಳಿದುಕೊಂಡವನಾಗಲಿ ಆ ಆರು ಪಟ್ಟಣಗಳೊಳಗೆ ಒಂದಕ್ಕೆ ಓಡಿಹೋಗಿ ಆಶ್ರಯಹೊಂದಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಇಸ್ರಯೇಲನಾಗಿರಲಿ, ಪರದೇಶದವನಾಗಿರಲಿ ಅಥವಾ ನಿಮ್ಮ ಮಧ್ಯೆ ವಾಸಿಸುವವನಾಗಿರಲಿ, ಆ ಆರು ಪಟ್ಟಣಗಳೊಳಗೆ ಒಂದಕ್ಕೆ ಓಡಿಹೋಗಿ ಆಶ್ರಯಪಡೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಇಸ್ರಾಯೇಲ್ಯನಾಗಲಿ ಪರದೇಶದವನಾಗಲಿ ನಿಮ್ಮಲ್ಲಿ ಇಳಿದುಕೊಂಡವನಾಗಲಿ ಆ ಆರು ಪಟ್ಟಣಗಳೊಳಗೆ ಒಂದಕ್ಕೆ ಓಡಿಹೋಗಿ ಆಶ್ರಯಹೊಂದಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಇಸ್ರೇಲನಾಗಲಿ ಪರದೇಶದವನಾಗಲಿ ನಿಮ್ಮಲ್ಲಿ ಇಳಿದುಕೊಂಡವನಾಗಲಿ, ಆ ಆರು ಪಟ್ಟಣಗಳೊಳಗೆ ಒಂದಕ್ಕೆ ಓಡಿಹೋಗಿ ಆಶ್ರಯ ಹೊಂದಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:15
8 ತಿಳಿವುಗಳ ಹೋಲಿಕೆ  

ನಿಮಗೂ, ನಿಮ್ಮ ಕೂಡ ಪ್ರಯಾಣ ಮಾಡುವ ಪರಕೀಯನಿಗೂ ಒಂದೇ ಪ್ರಮಾಣವೂ ಒಂದೇ ನ್ಯಾಯವೂ ಇರಬೇಕು,’ ” ಎಂದರು.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ, ಯೆಹೂದ್ಯರು ಯೆಹೂದ್ಯರಲ್ಲದವರು ಎಂದೂ ದಾಸರು ಸ್ವತಂತ್ರರು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.


ದೇವರು ಯೆಹೂದ್ಯರಿಗೆ ಮಾತ್ರ ದೇವರೋ? ದೇವರು ಯೆಹೂದ್ಯರಲ್ಲದವರಿಗೂ ಸಹ ದೇವರಾಗಿರುವುದಿಲ್ಲವೋ? ಹೌದು, ಯೆಹೂದ್ಯರಲ್ಲದವರಿಗೂ ಸಹ ದೇವರಾಗಿದ್ದಾರೆ.


ನಿಮಗೆ ಒಂದೇ ವಿಧವಾದ ನಿಯಮವಿರಬೇಕು. ಸ್ವದೇಶಸ್ಥನಿಗೆ ಇರುವಂತೆಯೇ ಪರಕೀಯನಿಗೂ ಇರಬೇಕು. ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”


ಸ್ವದೇಶದಲ್ಲಿ ಹುಟ್ಟಿದವನಿಗೂ, ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯನಿಗೂ ಒಂದೇ ನಿಯಮವಿರಲಿ,” ಎಂದು ಹೇಳಿದರು.


“ಇಸ್ರಾಯೇಲರಿಗೆ ಹೀಗೆ ಹೇಳು: ‘ಯಾರಾದರೂ ಉದ್ದೇಶವಿಲ್ಲದೆ ಪಾಪಮಾಡಿದರೆ ಹಾಗೂ ಯೆಹೋವ ದೇವರ ಆಜ್ಞೆಗಳಲ್ಲಿ ನಿಷೇಧಿಸಿದ ಯಾವುದನ್ನಾದರೂ ಮಾಡಿದರೆ, ಅವರು ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಕೈಗೊಳ್ಳಬೇಕು:


ಕೈತಪ್ಪಿ ಒಬ್ಬನನ್ನು ಕೊಂದರೆ, ನೀವು ಓಡಿಹೋಗುವ ಹಾಗೆ ನಿಮಗೆ ಆಶ್ರಯಕ್ಕಾಗಿ ಪಟ್ಟಣಗಳನ್ನು ನೇಮಿಸಬೇಕು.


ನಾವೆಲ್ಲರೂ ಸಾಯುವುದು ಅವಶ್ಯವೇ. ನಾವು ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಹಾಗೆ ಯಾರ ಪ್ರಾಣವನ್ನೂ ತೆಗೆಯ ಬಯಸುವವರಲ್ಲ. ಅದಕ್ಕೆ ಬದಲಾಗಿ ಬಹಿಷ್ಕಾರವಾದವವರನ್ನು ತಿರುಗಿ ತಮ್ಮ ಬಳಿಗೆ ಬರುವಂತೆ ದೇವರು ಸದುಪಾಯಗಳನ್ನು ಕಲ್ಪಿಸುವವರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು