Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:31 - ಕನ್ನಡ ಸಮಕಾಲಿಕ ಅನುವಾದ

31 “ ‘ಸಾಯತಕ್ಕ ಕೊಲೆಪಾತಕನ ಪ್ರಾಣಕ್ಕೋಸ್ಕರ ಈಡನ್ನು ತೆಗೆದುಕೊಳ್ಳಬೇಡಿರಿ. ಏಕೆಂದರೆ ಅವನು ನಿಜವಾಗಿಯೂ ಸಾಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 “‘ಮರಣಶಿಕ್ಷೆಗೆ ಪಾತ್ರನಾದ ಕೊಲೆಪಾತಕನನ್ನು ಉಳಿಸುವುದಕ್ಕೆ ಈಡನ್ನು ತೆಗೆದುಕೊಳ್ಳಬಾರದು. ಅವನಿಗೆ ಮರಣಶಿಕ್ಷೆಯೇ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಮರಣಶಿಕ್ಷೆಗೆ ಪಾತ್ರನಾದ ಕೊಲೆಗಡುಕನನ್ನು ಉಳಿಸುವುದಕ್ಕೆ ಈಡನ್ನು ತೆಗೆದುಕೊಳ್ಳಕೂಡದು. ಅವನಿಗೆ ಮರಣಶಿಕ್ಷೆ ಆಗಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಮರಣಶಿಕ್ಷೆಗೆ ಪಾತ್ರನಾದ ಕೊಲೆಪಾತಕನನ್ನು ಉಳಿಸುವದಕ್ಕೆ ಈಡನ್ನು ತೆಗೆದುಕೊಳ್ಳಕೂಡದು; ಅವನಿಗೆ ಮರಣಶಿಕ್ಷೆಯೇ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಮರಣಶಿಕ್ಷೆಗೆ ಒಳಗಾಗಿರುವ ಕೊಲೆಪಾತಕನನ್ನು ಉಳಿಸಲು ನೀವು ಯಾವ ಈಡನ್ನೂ ತೆಗೆದುಕೊಳ್ಳಕೂಡದು. ಅವನಿಗೆ ಮರಣಶಿಕ್ಷೆಯೇ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:31
13 ತಿಳಿವುಗಳ ಹೋಲಿಕೆ  

ದೇವರೇ, ನನ್ನ ರಕ್ಷಣೆಯ ದೇವರೇ, ರಕ್ತಾಪರಾಧದಿಂದ ನನ್ನನ್ನು ಬಿಡಿಸಿರಿ, ನನ್ನ ನಾಲಿಗೆಯು ನಿಮ್ಮ ನೀತಿಯನ್ನು ಹಾಡುವುದು.


ಆಗ ದಾವೀದನು ನಾತಾನನಿಗೆ, “ನಾನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇನೆ,” ಎಂದನು. ನಾತಾನನು ದಾವೀದನಿಗೆ, “ನೀನು ಸಾಯದ ಹಾಗೆ ಯೆಹೋವ ದೇವರು ನಿನ್ನ ಪಾಪವನ್ನು ಪರಿಹರಿಸಿದರು.


ಆದರೆ ಒಬ್ಬನು ಮತ್ತೊಬ್ಬನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸದಿಂದ ಕೊಂದರೆ, ಅವನು ಸಾಯುವಂತೆ ನೀನು ಅವನನ್ನು ನನ್ನ ಬಲಿಪೀಠದಿಂದ ದೂರ ತೆಗೆದುಕೊಂಡುಹೋಗಿ ಕೊಂದುಹಾಕಬೇಕು.


“ ‘ಯಾರಾದರೂ ಮನುಷ್ಯನನ್ನು ಕೊಂದರೆ, ನಿಶ್ಚಯವಾಗಿ ಮರಣಕ್ಕೆ ಒಳಪಡಬೇಕು.


ಒಬ್ಬನು ಸಾಯುವಂತೆ ಕಲ್ಲನ್ನು ಎಸೆದು ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ, ಅವನು ಕೊಲೆಪಾತಕನು. ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.


“ ‘ಪ್ರಾಣಹತ್ಯೆ ಮಾಡಿದ ಕೊಲೆಪಾತಕನನ್ನು ಸಾಕ್ಷಿಗಳನ್ನು ವಿಚಾರಿಸಿಕೊಂಡೇ ಅವನಿಗೆ ಮರಣಶಿಕ್ಷೆಯನ್ನು ವಿಧಿಸಬೇಕು. ಒಬ್ಬನೇ ಸಾಕ್ಷಿಯು ಒಂದು ಪ್ರಾಣಕ್ಕೆ ವಿರೋಧವಾಗಿ ಸಾಯುವ ಹಾಗೆ ಸಾಕ್ಷಿ ಕೊಡಬಾರದು.


“ ‘ತನ್ನ ಆಶ್ರಯದ ಪಟ್ಟಣಕ್ಕೆ ಓಡಿಹೋದವನಿಗೋಸ್ಕರ ಅವನು ತಿರುಗಿಬಂದು ಮಹಾಯಾಜಕನು ಸಾಯುವವರೆಗೂ ಸ್ವದೇಶದಲ್ಲಿ ವಾಸಮಾಡುವ ಹಾಗೆ ಈಡನ್ನು ತೆಗೆದುಕೊಳ್ಳಬೇಡಿರಿ.


ಅವರು, “ತನ್ನ ನೆರೆಯವನನ್ನು ರಹಸ್ಯವಾಗಿ ಕೊಲೆಮಾಡಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ಆಗ ಗಿಬ್ಯೋನ್ಯರು ಅವನಿಗೆ, “ಸೌಲನ ಕೈಯಿಂದಲಾದರೂ, ಅವನ ಮನೆಯವರ ಕೈಯಿಂದಲಾದರೂ, ನಮಗೆ ಬೆಳ್ಳಿಯಾದರೂ, ಬಂಗಾರವಾದರೂ ಬೇಡ. ನೀನು ಈ ಕಾರ್ಯಕ್ಕೋಸ್ಕರ ಇಸ್ರಾಯೇಲಿನಲ್ಲಿ ಒಬ್ಬನನ್ನಾದರೂ ಕೊಂದುಹಾಕಬೇಕೆಂಬುದು ನಮಗೆ ಅಗತ್ಯವಿಲ್ಲ,” ಎಂದರು. ಆಗ ಅವನು, “ನೀವು ನನಗೆ ಏನು ಹೇಳುತ್ತೀರೋ, ನಾನು ನಿಮಗೆ ಮಾಡುವೆನು,” ಎಂದನು.


ವ್ಯಭಿಚಾರ ಮಾಡಿದ ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ನಿನ್ನ ಮೇಲೆ ರಕ್ತ ಸುರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು