Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:33 - ಕನ್ನಡ ಸಮಕಾಲಿಕ ಅನುವಾದ

33 “ ‘ಹೀಗೆ ನೀವು ವಾಸಿಸುವ ದೇಶವನ್ನು ನೀವು ಅಪವಿತ್ರ ಮಾಡಬೇಡಿರಿ. ಏಕೆಂದರೆ ದೇಶವನ್ನು ಅಪವಿತ್ರ ಮಾಡುವಂಥಾದ್ದು ರಕ್ತವೇ. ಹತರಾದವರ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 “‘ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇಶವು ಅಪವಿತ್ರವಾಗುವುದಿಲ್ಲ. ರಕ್ತವು ದೇಶವನ್ನು ಅಪವಿತ್ರ ಮಾಡುವುದು. ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 “ನೀವು ಈ ಪ್ರಕಾರ ನಡೆದುಕೊಂಡರೆ ನಿಮ್ಮ ನಾಡು ಅಪವಿತ್ರವಾಗುವುದಿಲ್ಲ. ರಕ್ತಪಾತವು ನಾಡನ್ನು ಅಪವಿತ್ರಗೊಳಿಸುತ್ತದೆ. ಅದಕ್ಕೆ ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇಶವು ಅಪವಿತ್ರವಾಗುವದಿಲ್ಲ. ರಕ್ತವು ದೇಶವನ್ನು ಅಪವಿತ್ರ ಮಾಡುವದಷ್ಟೆ. ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 “ನೀವು ವಾಸವಾಗಿರುವ ದೇಶವನ್ನು ಕೆಡಿಸಬಾರದು. ಕೊಲೆಯು ದೇಶವನ್ನು ಕೆಡಿಸುತ್ತದೆ. ಕೊಲೆಯು ನಡೆಯಲ್ಪಟ್ಟಿರುವ ದೇಶಕ್ಕೆ ಕೊಲೆಗಾರನ ರಕ್ತವೇ ಹೊರತು ಬೇರೆ ಯಾವ ಈಡೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:33
26 ತಿಳಿವುಗಳ ಹೋಲಿಕೆ  

ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ, ದೇಶವನ್ನು ರಕ್ತದಿಂದ ಅಶುದ್ಧ ಮಾಡಿದರು.


ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ. ಅವರು, “ಯೆರೂಸಲೇಮನ್ನು ಕೆಡಿಸೋಣ. ಚೀಯೋನಿನ ನಾಶನವನ್ನು ಕಣ್ಣಾರೆ ನೋಡೋಣ,” ಎಂದು ಹೇಳುತ್ತಾರೆ.


ಭೂನಿವಾಸಿಗಳ ದುಷ್ಕೃತ್ಯಕ್ಕೆ ಶಿಕ್ಷಿಸುವುದಕ್ಕೆ ಯೆಹೋವ ದೇವರು ತಮ್ಮ ಸ್ಥಳದಿಂದ ಹೊರಟಿದ್ದಾರೆ. ಭೂಮಿಯು ಸಹ ತನ್ನಲ್ಲಿ ಕೊಂದುಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ, ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟ ಮಾಡುವುದು.


ಇದಲ್ಲದೆ ಮನಸ್ಸೆಯು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಯೆಹೋವ ದೇವರು ಅದನ್ನು ಕ್ಷಮಿಸಲು ಸಿದ್ಧವಾಗಿರಲಿಲ್ಲ.


ಆದರೂ ಮನಸ್ಸೆಯು ಮಾಡಿದ ದುಷ್ಕೃತ್ಯಗಳ ನಿಮಿತ್ತ ಯೆಹೂದ್ಯರ ಮೇಲೆ ಯೆಹೋವ ದೇವರ ಕೋಪವು ಇನ್ನೂ ನೆಲೆಯಾಗಿತ್ತು.


ದೇಶವೂ ಅಶುದ್ಧವಾಗಿದೆ. ಆದ್ದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು. ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವುದು.


“ಯಾರಾದರೂ ಮನುಷ್ಯರ ರಕ್ತವನ್ನು ಸುರಿಸುತ್ತಾರೋ, ಅವರ ರಕ್ತವನ್ನು ಮನುಷ್ಯರೇ ಸುರಿಸುವರು. ಏಕೆಂದರೆ ದೇವರು ತಮ್ಮ ಸ್ವರೂಪದಲ್ಲಿಯೇ ಮನುಷ್ಯರನ್ನು ಸೃಷ್ಟಿಸಿದರು.


ಇಸ್ರಾಯೇಲರು ಬಾಳ್ ಪೆಯೋರನ ದೇವತೆಗೆ ತಮ್ಮನ್ನು ಒಪ್ಪಿಸಿಕೊಟ್ಟರು; ಜೀವವಿಲ್ಲದ ದೇವರುಗಳಿಗೆ ಅರ್ಪಿಸಿದ ಯಜ್ಞಗಳನ್ನು ತಿಂದರು.


ಅವನ ಶವ ರಾತ್ರಿಯಲ್ಲಿ ಮರದ ಮೇಲಿರಬಾರದು. ಅವನನ್ನು ಅದೇ ದಿವಸದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.


ಅದಕ್ಕೆ ಯೆಹೋವ ದೇವರು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯಿಂದ ನನ್ನನ್ನು ಕೂಗುತ್ತಿದೆ.


“ ‘ತನ್ನ ಆಶ್ರಯದ ಪಟ್ಟಣಕ್ಕೆ ಓಡಿಹೋದವನಿಗೋಸ್ಕರ ಅವನು ತಿರುಗಿಬಂದು ಮಹಾಯಾಜಕನು ಸಾಯುವವರೆಗೂ ಸ್ವದೇಶದಲ್ಲಿ ವಾಸಮಾಡುವ ಹಾಗೆ ಈಡನ್ನು ತೆಗೆದುಕೊಳ್ಳಬೇಡಿರಿ.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದಲ್ಲಿ ನಿರಪರಾಧಿಗೆ ಮರಣಶಿಕ್ಷೆಯಾಗಬಾರದು, ಅಂಥವನಿಗೆ ಮರಣಶಿಕ್ಷೆಯಾದರೆ ಆ ರಕ್ತಾಪರಾಧ ನಿಮ್ಮದಾಗಿಯೇ ಇರುವುದು.


ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳಿಗೆ ಮಾಡಿದ್ದ ಕ್ರೂರತ್ವವು ಬಂದು ಪ್ರಾಪ್ತಿಸುವ ಹಾಗೆಯೂ, ಅವರ ರಕ್ತವು ಅವರನ್ನು ಕೊಂದ ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ, ಅವನ ಸಹೋದರರನ್ನು ಕೊಲ್ಲುವುದಕ್ಕೆ ಅವನ ಕೈಗಳನ್ನು ಬಲಪಡಿಸಿದ ಶೆಕೆಮಿನ ಮನುಷ್ಯರ ಮೇಲೆಯೂ ಬರುವ ಹಾಗೆ, ಶೆಕೆಮಿನ ಜನರು ಅಬೀಮೆಲೆಕನಿಗೆ ದ್ರೋಹಮಾಡಿದರು.


ಅರಸನು ಬೆನಾಯನಿಗೆ, “ಅವನು ಹೇಳಿದ ಪ್ರಕಾರ ಮಾಡು. ಯೋವಾಬನು ನಿನ್ನ ಹಾಗೂ ನನ್ನ ತಂದೆಯ ಮನೆಯವರ ನಿರಪರಾಧ ರಕ್ತವನ್ನು ಚೆಲ್ಲಿದ ದೋಷವನ್ನು ತೊಲಗಿಸುವ ಹಾಗೆ ಅವನನ್ನು ಕೊಂದು, ಅವನ ಶವವನ್ನು ಸಮಾಧಿಮಾಡು.


ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ದೈವನಿಯಮಗಳನ್ನು ಬದಲಾಯಿಸಿ, ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆಯಿಂದ ಅಪವಿತ್ರವಾಗುವುದು.


ಆದರೆ ಮೊದಲು ನಾನು ಅವರ ಅಕ್ರಮಕ್ಕೂ, ಅವರ ಪಾಪಕ್ಕೂ ಎರಡಷ್ಟು ಪ್ರತಿಫಲ ಕೊಡುತ್ತೇನೆ. ಅವರು ನನ್ನ ದೇಶವನ್ನು ತಮ್ಮ ದುಷ್ಕೃತ್ಯಗಳಿಂದ ಅಪವಿತ್ರ ಮಾಡಿ, ನನ್ನ ಸೊತ್ತನ್ನು ತಮ್ಮ ಅಸಹ್ಯ ವಿಗ್ರಹಗಳಿಂದ ತುಂಬಿಸಿದ್ದಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಆದರೂ ನೀವು ನನ್ನನ್ನು ಕೊಂದುಹಾಕಿದರೆ, ನಿಮ್ಮ ಮೇಲೆಯೂ, ಈ ಪಟ್ಟಣದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ನಿರ್ದೋಷಿಯ ರಕ್ತವನ್ನು ಬರಮಾಡುತ್ತೀರೆಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ವಾಕ್ಯಗಳನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,” ಎಂದನು.


ನೀವು ಅವನ ಮೇಲೆ ದಯೆ ತೋರಬಾರದು. ನಿಮಗೆ ಒಳ್ಳೆಯದಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನು ಇಸ್ರಾಯೇಲರಲ್ಲಿ ಉಳಿಯದಂತೆ ತೆಗೆದುಹಾಕಬೇಕು.


ಅದು ಯೋವಾಬನ ತಲೆಯ ಮೇಲೆಯೂ, ಅವನ ತಂದೆಯ ಮನೆತನದವರ ಮೇಲೆಯೂ ನಿಂತಿರಲಿ. ಯೋವಾಬನ ಮನೆಯಲ್ಲಿ ರಕ್ತಸ್ರಾವ ರೋಗದವರೂ, ಕುಷ್ಠರೋಗಿಯೂ, ಕೋಲು ಹಿಡಿದು ನಡೆಯುವವನೂ, ಖಡ್ಗದಿಂದ ಬೀಳುವವನೂ, ಆಹಾರದ ಕೊರತೆಯುಳ್ಳವನಾಗಿಯೂ ಇದ್ದೇ ಇರಲಿ,” ಎಂದನು.


ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಇವರನ್ನು ಕೊಂದು, ಯೆಹೋವ ದೇವರ ಮುಂದೆ ಬೆಟ್ಟದ ಮೇಲೆ ನೇತುಹಾಕಿದರು. ಈ ಏಳುಮಂದಿಯೂ ಒಂದೇ ಸಾರಿ ಹತರಾದರು. ಇವರನ್ನು ಕೊಂದಾಗ ಜವೆಗೋಧಿ ಸುಗ್ಗಿಯ ಆರಂಭವಾಗಿತ್ತು.


ಆಗ ಅವರು ಅವಳನ್ನು ಅಧೀನಕ್ಕೆ ತೆಗೆದುಕೊಂಡು, ಅರಮನೆಯ ಬಳಿಯಲ್ಲಿ ಕುದುರೆ ಬಾಗಿಲಿನ ಪ್ರವೇಶದಲ್ಲಿ ಬಂದಾಗ ಅಲ್ಲಿ ಅವಳನ್ನು ಕೊಂದುಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು