ಅರಣ್ಯಕಾಂಡ 35:8 - ಕನ್ನಡ ಸಮಕಾಲಿಕ ಅನುವಾದ8 ನೀವು ಇಸ್ರಾಯೇಲರ ಸ್ವಾಧೀನದಿಂದ ಕೊಡುವ ಪಟ್ಟಣಗಳನ್ನು ಹೆಚ್ಚಾದವರ ಕಡೆಯಿಂದ ಹೆಚ್ಚಾಗಿ, ಕಡಿಮೆಯಾದವರ ಕಡೆಯಿಂದ ಕಡಿಮೆಯಾಗಿ ತೆಗೆದುಕೊಳ್ಳಬೇಕು. ಒಬ್ಬೊಬ್ಬನು ತಾನು ಹೊಂದುವ ಸೊತ್ತಿಗನುಸಾರವಾಗಿ ತನ್ನ ಪಟ್ಟಣಗಳೊಳಗಿಂದ ಲೇವಿಯರಿಗೆ ಕೊಡಬೇಕು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇಸ್ರಾಯೇಲರ ಸ್ವತ್ತಿನಲ್ಲಿ ಆಯಾ ಕುಲದ ಸ್ವತ್ತಿನ ಪ್ರಮಾಣಕ್ಕೆ ತಕ್ಕ ಹಾಗೆ ಹೆಚ್ಚಾದ ಜನರುಳ್ಳವರಿಂದ ಹೆಚ್ಚಾಗಿಯೂ, ಕಡಿಮೆಯಾದ ಜನರಿಂದ ಕಡಿಮೆಯಾಗಿಯೂ ಲೇವಿಯರಿಗೋಸ್ಕರ ಊರುಗಳನ್ನು ಕೊಡಿಸಬೇಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇಸ್ರಯೇಲರ ಸೊತ್ತಿನಲ್ಲಿ ಆಯಾ ಕುಲದ ಸೊತ್ತಿನ ಅಳತೆಗೆ ತಕ್ಕಹಾಗೆ, ಅಂದರೆ ಹೆಚ್ಚು ಉಳ್ಳವರಿಂದ ಹೆಚ್ಚಾಗಿಯೂ ಕಡಿಮೆ ಉಳ್ಳವರಿಂದ ಕಡಿಮೆಯಾಗಿಯೂ ಲೇವಿಯರಿಗೆ ಊರುಗಳನ್ನು ಕೊಡಿಸಬೇಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇಸ್ರಾಯೇಲ್ಯರ ಸ್ವಾಸ್ತ್ಯದಲ್ಲಿ ಆಯಾ ಕುಲದ ಸ್ವಾಸ್ತ್ಯದ ಪ್ರಮಾಣಕ್ಕೆ ತಕ್ಕ ಹಾಗೆ ಅಂದರೆ ಹೆಚ್ಚಾದ ಮಂದಿಯುಳ್ಳವರಿಂದ ಹೆಚ್ಚಾಗಿಯೂ ಕಡಿಮೆಯಾದ ಮಂದಿಯುಳ್ಳವರಿಂದ ಕಡಿಮೆಯಾಗಿಯೂ ಲೇವಿಯರಿಗೋಸ್ಕರ ಊರುಗಳನ್ನು ಕೊಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನೀವು ಇತರ ಇಸ್ರೇಲರ ಆಸ್ತಿಯಿಂದ ಲೇವಿಯರಿಗೆ ಪಟ್ಟಣಗಳನ್ನು ಕೊಡುವಾಗ, ಪ್ರತಿಯೊಂದು ಕುಲವು ಹೊಂದಿರುವ ಭೂಮಿಗನುಸಾರವಾಗಿ ಕೊಡಬೇಕು. ದೊಡ್ಡಕುಲಗಳಿಂದ ಹೆಚ್ಚು ಪಟ್ಟಣಗಳನ್ನೂ ಚಿಕ್ಕಕುಲಗಳಿಂದ ಕೆಲವು ಪಟ್ಟಣಗಳನ್ನೂ ತೆಗೆದುಕೊಳ್ಳಿ.” ಅಧ್ಯಾಯವನ್ನು ನೋಡಿ |