Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 36:4 - ಕನ್ನಡ ಸಮಕಾಲಿಕ ಅನುವಾದ

4 ಇಸ್ರಾಯೇಲರಿಗೆ ಜೂಬಿಲಿ ವರ್ಷ ಬಂದಾಗ ಅವರ ಸೊತ್ತು ಅವರು ಸೇರಿಕೊಳ್ಳುವ ಗೋತ್ರಕ್ಕೆ ಸೇರಿಕೊಳ್ಳುತ್ತದೆ. ಹೀಗೆ ಅವರ ಸೊತ್ತು ಅಂದರೆ, ನಮ್ಮ ಪಿತೃಗಳ ಗೋತ್ರದ ಸೊತ್ತಿನಿಂದ ತೆಗೆಯಲಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇಸ್ರಾಯೇಲರ ಜೂಬಿಲಿ ಸಂವತ್ಸರವು ಬಂದಾಗ ಅವರ ಸ್ವತ್ತು ಅವರು ಸೇರಿಕೊಳ್ಳುವ ಕುಲದ ಸ್ವತ್ತಿಗೆ ಕೂಡಿಕೊಳ್ಳುವುದರಿಂದ ನಮ್ಮ ಕುಲದಿಂದ ತೆಗೆಯಲ್ಪಡುವುದು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇಸ್ರಯೇಲರ ಜೂಬಿಲಿ ವರ್ಷವು ಬಂದಾಗ ಅವರ ಸೊತ್ತು ಅವರು ಸೇರಿಕೊಳ್ಳುವ ಕುಲದ ಸೊತ್ತಿಗೆ ಸೇರಿಕೊಳ್ಳುತ್ತದೆ; ನಮ್ಮ ಕುಲದ ಸೊತ್ತಿನಿಂದ ವರ್ಗಾಯಿಸಲ್ಪಡುತ್ತದೆ,” ಎಂದು ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇಸ್ರಾಯೇಲ್ಯರ ಜೂಬಿಲಿ ಸಂವತ್ಸರವು ಬಂದಾಗ ಅವರ ಸ್ವಾಸ್ತ್ಯವು ಅವರು ಸೇರಿಕೊಳ್ಳುವ ಕುಲದ ಸ್ವಾಸ್ತ್ಯಕ್ಕೆ ಕೂಡಿಕೊಳ್ಳುವದರಿಂದ ನಮ್ಮ ಕುಲದಿಂದ ತೆಗೆಯಲ್ಪಡುವದು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇಸ್ರೇಲರ ಜೂಬಿಲಿ ಸಂವತ್ಸರವು ಬಂದಾಗ ಅವರ ಸ್ವಾಸ್ತ್ಯವು ಅವರು ಸೇರಿಕೊಳ್ಳುವ ಕುಲದ ಸ್ವಾಸ್ತ್ಯಕ್ಕೆ ಕೂಡಿಕೊಳ್ಳುವುದರಿಂದ ನಮ್ಮ ಕುಲದಿಂದ ತೆಗೆಯಲ್ಪಡುವುದು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 36:4
7 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಮೆಚ್ಚುಗೆಯ ವರ್ಷವನ್ನು ಸಾರಿ ಹೇಳುವುದಕ್ಕೂ, ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧ ಮಾಡುವುದಕ್ಕೂ, ದುಃಖವುಳ್ಳವರೆಲ್ಲರನ್ನು ಆದರಿಸುವುದಕ್ಕೂ,


“ ‘ಇದಲ್ಲದೆ ಭೂಮಿಯನ್ನು ಎಂದಿಗೂ ಮಾರಬಾರದು. ಏಕೆಂದರೆ ಭೂಮಿಯು ನನ್ನದು. ನನ್ನೊಂದಿಗೆ ನೀವು ಪರಕೀಯರೂ, ಪ್ರವಾಸಿಗಳೂ ಆಗಿದ್ದೀರಿ.


ಆದರೆ ಅವರು ಇಸ್ರಾಯೇಲರ ಬೇರೆ ಗೋತ್ರದವರಿಗೆ ಮದುವೆಯಾದರೆ, ಅವರ ಸೊತ್ತು ಅಂದರೆ, ನಮ್ಮ ಪಿತೃಗಳ ಸೊತ್ತಿನಿಂದ ಅವರನ್ನು ಮದುವೆಮಾಡಿಕೊಂಡ ಗೋತ್ರದವರಿಗೆ ಸೊತ್ತು ಹೋಗುತ್ತದೆ. ಇದರಿಂದ ನಮ್ಮ ಸೊತ್ತಿನ ಭಾಗ ಕಡಿಮೆಯಾಗಿ ಹೋಗುವುದು.


ಆಗ ಮೋಶೆಯು ಯೆಹೋವ ದೇವರ ಆಜ್ಞೆಯಂತೆ ಇಸ್ರಾಯೇಲರಿಗೆ ಆಜ್ಞಾಪಿಸಿ, “ಯೋಸೇಫನ ಪುತ್ರರ ಗೋತ್ರದವರು ಸರಿಯಾಗಿ ಮಾತನಾಡುತ್ತಾರೆ.


“ ‘ಇದಲ್ಲದೆ ಏಳು ವರ್ಷಕ್ಕೆ ಒಂದರಂತೆ ಏಳು ಸಬ್ಬತ್ ವರ್ಷಗಳನ್ನು ಎಣಿಸಬೇಕು. ಆ ಏಳು ಸಬ್ಬತ್ ವರ್ಷಗಳ ಕಾಲವು ಒಟ್ಟು ನಾಲ್ವತ್ತೊಂಬತ್ತು ವರ್ಷಗಳಾಗಿರುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು