Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:16 - ಕನ್ನಡ ಸಮಕಾಲಿಕ ಅನುವಾದ

16 “ಯಾಜಕನಾದ ಆರೋನನ ಮಗ ಎಲಿಯಾಜರನ ಕೆಲಸ ಯಾವುದೆಂದರೆ, ದೀಪದ ಎಣ್ಣೆಯೂ, ಸುಗಂಧ ಧೂಪವೂ, ನಿತ್ಯದ ಧಾನ್ಯ ಸಮರ್ಪಣೆಯೂ, ಅಭಿಷೇಕದ ತೈಲವೂ, ಸಮಸ್ತ ಗುಡಾರವೂ, ಅದರಲ್ಲಿರುವ ಸಕಲವೂ, ಪರಿಶುದ್ಧ ಸ್ಥಳದಲ್ಲಿರುವ ಅದರ ಸಾಮಗ್ರಿಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ದೀಪದ ಎಣ್ಣೆಯನ್ನೂ, ಪರಿಮಳಧೂಪವನ್ನೂ, ನಿತ್ಯವಾಗಿ ನೈವೇದ್ಯಮಾಡುವ ಧಾನ್ಯದ್ರವ್ಯವನ್ನೂ, ಅಭಿಷೇಕತೈಲವನ್ನೂ ತನ್ನ ವಶದಲ್ಲಿ ಇಟ್ಟುಕೊಳ್ಳಬೇಕು. ಅದಲ್ಲದೆ ದೇವದರ್ಶನದ ಗುಡಾರದ ಎಲ್ಲಾ ಭಾಗಗಳೂ ಅದರಲ್ಲಿಯೂ ಅದರ ಪಾತ್ರೆಗಳಲ್ಲಿಯೂ ಇರುವ ಸಮಸ್ತ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮಹಾಯಾಜಕ ಆರೋನನ ಮಗ ಎಲ್ಲಾಜಾರನು ದೀಪದ ಎಣ್ಣೆಯನ್ನು, ಪರಿಮಳ ಧೂಪವನ್ನು, ಅನುದಿನ ನೈವೇದ್ಯ ಮಾಡುವ ಧಾನ್ಯದ್ರವ್ಯಗಳನ್ನು ಹಾಗೂ ಅಭಿಷೇಕ ತೈಲವನ್ನು ತನ್ನ ವಶದಲ್ಲೇ ಇಟ್ಟುಕೊಳ್ಳಬೇಕು. ದೇವದರ್ಶನದ ಗುಡಾರದ ಎಲ್ಲ ಭಾಗಗಳು, ಅದರಲ್ಲಿರುವ ಸಮಸ್ತ ವಸ್ತುಗಳು ಪಾತ್ರೆಪರಿಕರಗಳು ಹಾಗೂ ಅವುಗಳಲ್ಲಿರುವುದೆಲ್ಲವೂ ಅವನ ಮೇಲ್ವಿಚಾರಣೆಯಲ್ಲಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ದೀಪದ ಎಣ್ಣೆಯನ್ನೂ ಪರಿಮಳಧೂಪವನ್ನೂ ನಿತ್ಯವಾಗಿ ನೈವೇದ್ಯ ಮಾಡುವ ಧಾನ್ಯದ್ರವ್ಯವನ್ನೂ ಅಭೀಷೇಕ ತೈಲವನ್ನೂ ತನ್ನ ವಶದಲ್ಲಿ ಇಟ್ಟುಕೊಳ್ಳಬೇಕು. ಅದಲ್ಲದೆ ದೇವದರ್ಶನದ ಗುಡಾರದ ಎಲ್ಲಾ ಭಾಗಗಳೂ ಅದರಲ್ಲಿಯೂ ಅದರ ಪಾತ್ರೆಗಳಲ್ಲಿಯೂ ಇರುವ ಸಮಸ್ತ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಮಹಾಯಾಜಕನಾದ ಆರೋನನ ಮಗನಾದ ಎಲ್ಲಾಜಾರನು ಇಡೀ ಪವಿತ್ರ ಗುಡಾರವನ್ನು ಮತ್ತು ಎಲ್ಲಾ ಪವಿತ್ರಸ್ಥಳವನ್ನು ಮತ್ತು ಅದರೊಳಗಿರುವ ಎಲ್ಲಾ ಪಾತ್ರೆಗಳನ್ನು ನೋಡಿಕೊಳ್ಳುವ ಜವಾಬ್ದಾರಿ ಹೊಂದಿದ್ದಾನೆ. ದೀಪದ ಎಣ್ಣೆಗೂ ಪರಿಮಳಧೂಪಕ್ಕೂ ದೈನಂದಿನ ಧಾನ್ಯಸಮರ್ಪಣೆಗೂ ಅಭಿಷೇಕತೈಲಕ್ಕೂ ಅವನು ಜವಾಬ್ದಾರನಾಗಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:16
20 ತಿಳಿವುಗಳ ಹೋಲಿಕೆ  

ದೀಪಕ್ಕಾಗಿ ಓಲಿವ್ ಎಣ್ಣೆ ಮತ್ತು ಅಭಿಷೇಕಿಸುವ ಎಣ್ಣೆಗೋಸ್ಕರ ಪರಿಮಳ ಧೂಪಕ್ಕೋಸ್ಕರ ಸುಗಂಧ ದ್ರವ್ಯಗಳು,


“ಬೆಳಕಿಗೋಸ್ಕರ ದೀಪಗಳು ಯಾವಾಗಲೂ ಉರಿಯುತ್ತಿರುವಂತೆ ಅವರು ಕುಟ್ಟಿದ ಶುದ್ಧವಾದ ಓಲಿವ್ ಎಣ್ಣೆಯನ್ನು ನನ್ನ ಬಳಿಗೆ ತರುವಂತೆ ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕು.


ಏಕೆಂದರೆ, “ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ.” ಆದರೆ ಈಗ ನೀವು ತಿರುಗಿ ನಿಮ್ಮ ಆತ್ಮಗಳ ಕುರುಬ ಹಾಗೂ ಸಭಾಧ್ಯಕ್ಷರೂ ಆಗಿರುವ ಕ್ರಿಸ್ತ ಯೇಸುವಿನ ಬಳಿಗೆ ಬಂದಿದ್ದೀರಿ.


ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲಾತ್ಕಾರದಿಂದಲ್ಲ, ಆದರೆ ದೇವರ ಪ್ರಕಾರ ಇಷ್ಟಪೂರ್ವಕವಾಗಿಯೂ ನೀಚ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿಚಾರಣೆ ಮಾಡಿರಿ.


ಕ್ರಿಸ್ತ ಯೇಸುವಾದರೋ ಮಗನಾಗಿ ದೇವರ ಮನೆಯ ಮೇಲೆ ನಂಬಿಗಸ್ತರಾಗಿದ್ದಾರೆ. ಆದುದರಿಂದ ನಾವು ನಮ್ಮ ಧೈರ್ಯವನ್ನೂ ನಾವು ಹೊಗಳಿಕೊಳ್ಳುವ ನಿರೀಕ್ಷೆಯನ್ನೂ ಕಡೆಯತನಕ ದೃಢವಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.


ಆದ್ದರಿಂದ ಪರಿಶುದ್ಧರಾದ ಪ್ರಿಯರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಅರಿಕೆಮಾಡುವ ಅಪೊಸ್ತಲರೂ ಮಹಾಯಾಜಕರೂ ಆಗಿರುವ ಯೇಸುವನ್ನೇ ಆಲೋಚಿಸಿರಿ.


ದೇವರು ಒಬ್ಬರೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥ ಒಬ್ಬರೇ. ಅವರು ಮನುಷ್ಯರಾಗಿ ಬಂದ ಕ್ರಿಸ್ತ ಯೇಸುವೇ.


ಆದ್ದರಿಂದ ನೀವು ಈ ರೀತಿಯಾಗಿ ನಮ್ಮನ್ನು ಪರಿಗಣಿಸಬೇಕು: ನಾವು ಕ್ರಿಸ್ತ ಯೇಸುವಿನ ದಾಸರೆಂತಲೂ ದೇವರ ರಹಸ್ಯಗಳ ನಂಬಿಗಸ್ತ ನಿರ್ವಾಹಕರೆಂದೂ ಪರಿಗಣಿಸಿರಿ.


ದೇವರು ತಮ್ಮ ರಕ್ತದಿಂದ ಕೊಂಡುಕೊಂಡ ಸಭೆಗೆ ನೀವು ಕುರುಬರಾಗಿರುವುದಕ್ಕಾಗಿ ಪವಿತ್ರಾತ್ಮರು ನಿಮ್ಮನ್ನೇ ಮಂದೆಯಲ್ಲಿ ಮೇಲ್ವಿಚಾರಕರನ್ನಾಗಿ ಇಟ್ಟಿರುವುದರಿಂದ, ನಿಮ್ಮ ವಿಷಯದಲ್ಲಿಯೂ ಇಡೀ ಮಂದೆಯ ವಿಷಯದಲ್ಲಿಯೂ ಎಚ್ಚರವಾಗಿರಿ.


“ಕರ್ತದೇವರ ಆತ್ಮರು ನನ್ನ ಮೇಲೆ ಇದ್ದಾರೆ, ಅವರು ನನ್ನನ್ನು ಬಡವರಿಗೆ ಸುವಾರ್ತೆ ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವುದಕ್ಕೂ, ಕುರುಡರಿಗೆ ದೃಷ್ಟಿ ಕೊಡುವುದಕ್ಕೂ, ಜಜ್ಜಿ ಹೋದವರನ್ನು ಬಿಡಿಸಿ ಕಳುಹಿಸುವುದಕ್ಕೂ,


ಇದಲ್ಲದೆ ಯಾಜಕನಾಗಿರುವ ಆರೋನನ ಮಗ ಎಲಿಯಾಜರನು ಲೇವಿಯರ ಮತ್ತೊಬ್ಬ ನಾಯಕನಾಗಿದ್ದನು. ಪರಿಶುದ್ಧಸ್ಥಳದ ಜವಾಬ್ದಾರಿಕೆಯುಳ್ಳವನ ಮೇಲೆ ವಿಚಾರಕನು ಅವನೇ.


“ಆರೋನನೂ, ಅವನ ಪುತ್ರರೂ ಅಭಿಷಿಕ್ತರಾದ ದಿನದಲ್ಲಿ, ಅವರು ಯೆಹೋವ ದೇವರಿಗೆ ಸಮರ್ಪಿಸಬೇಕಾದ ಬಲಿಯು ಇದೇ. ಮೂರು ಸೇರು ಗೋಧಿ ಹಿಟ್ಟಿನಲ್ಲಿ ನಿರಂತರವಾಗಿರುವ ಧಾನ್ಯ ಸಮರ್ಪಣೆಗಾಗಿ ಮುಂಜಾನೆ ಅದರಲ್ಲಿ ಅರ್ಧಭಾಗವನ್ನು ಮತ್ತು ರಾತ್ರಿ ಅದರಲ್ಲಿ ಅರ್ಧಭಾಗವನ್ನು ಸಮರ್ಪಿಸಬೇಕು.


ಅನಂತರ ಅವರು ಸುಗಂಧಕಾರನ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮತ್ತು ಪರಿಮಳ ದ್ರವ್ಯದಿಂದ ಶುದ್ಧವಾದ ಧೂಪವನ್ನು ತಯಾರಿಸಿದರು.


ಅಭಿಷೇಕಿಸುವ ತೈಲ, ಪರಿಶುದ್ಧ ಸ್ಥಳಕ್ಕೋಸ್ಕರವಿರುವ ಪರಿಮಳ ಧೂಪ. “ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು,” ಎಂದರು.


ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,


ಇದಲ್ಲದೆ ಯೆಹೋವ ದೇವರು ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು