Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:18 - ಕನ್ನಡ ಸಮಕಾಲಿಕ ಅನುವಾದ

18 “ನೀವು ಲೇವಿಯರೊಳಗಿಂದ ಕೊಹಾತ್ಯರ ಗೋತ್ರದ ಕಟುಂಬಗಳು ನಾಶವಾಗಿ ಹೋಗದಂತೆ ನೋಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಕೆಹಾತ್ಯರ ಗೋತ್ರಕುಟುಂಬಗಳವರು ಲೇವಿಯರೊಡನೆ ಉಳಿಯದೆ ನಾಶವಾಗುವುದಕ್ಕೆ ಆಸ್ಪದಕೊಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಕೆಹಾತ್ಯರ ಗೋತ್ರಕುಟುಂಬಗಳವರು ಲೇವಿಯರೊಳಗೆ ಉಳಿಯದೆ ನಾಶವಾಗುವುದಕ್ಕೆ ಆಸ್ಪದಕೊಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಕೆಹಾತ್ಯರ ಗೋತ್ರ ಕುಟುಂಬಗಳವರು ಲೇವಿಯರೊಳಗೆ ಉಳಿಯದೆ ನಾಶವಾಗುವದಕ್ಕೆ ಆಸ್ಪದಕೊಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಕೆಹಾತ್ಯರು ಲೇವಿಯರ ಮಧ್ಯದಿಂದ ಇಲ್ಲವಾಗದಂತೆ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:18
13 ತಿಳಿವುಗಳ ಹೋಲಿಕೆ  

“ಹಾಗೆ ನಿನ್ನ ಹೆಂಡತಿಯರನ್ನೂ, ನಿನ್ನ ಮಕ್ಕಳನ್ನೂ ಕಸ್ದೀಯರ ಬಳಿಗೆ ಹೊರಗೆ ತರುವರು. ನೀನು ಅವರ ಕೈಗೆ ತಪ್ಪಿಸಿಕೊಳ್ಳುವುದಿಲ್ಲ. ಬಾಬಿಲೋನಿನ ಅರಸನ ಕೈಯಿಂದ ಸೆರೆಯಾಗುವೆ. ಈ ಪಟ್ಟಣವು ಬೆಂಕಿಯಿಂದ ಸುಟ್ಟುಹೋಗುವುದು,” ಎಂದನು.


ಬೇತ್ ಷೆಮೆಷ್ ಊರಿನ ಜನರು ಯೆಹೋವ ದೇವರ ಮಂಜೂಷದೊಳಗೆ ಇಣಿಕಿ ನೋಡಿದ್ದರಿಂದ, ಯೆಹೋವ ದೇವರು ಅವರೊಳಗೆ ಎಪ್ಪತ್ತು ಮಂದಿಯನ್ನು ಕಠಿಣವಾಗಿ ದಂಡಿಸಿದರು.


“ಇಸ್ರಾಯೇಲರ ಮೇಲೆ ಇನ್ನು ಮುಂದೆ ಎಂದಿಗೂ ನನ್ನ ಕೋಪಾಗ್ನಿಯು ಬಾರದ ಹಾಗೆ ಪರಿಶುದ್ಧ ಸ್ಥಳವನ್ನು ಮತ್ತು ಬಲಿಪೀಠವನ್ನು ನೀವೇ ನೋಡಿಕೊಳ್ಳಬೇಕು.


ಯೆಹೋವ ದೇವರು ಮೋಶೆಗೆ, “ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಇಟ್ಟುಕೊಳ್ಳುವುದಕ್ಕೆ ಒಡಂಬಡಿಕೆಯ ಮಂಜೂಷದ ಮುಂದೆ ತಿರುಗಿ ಇಡು. ಗೊಣಗುಟ್ಟುವುದನ್ನು ನೀನು ಸಂಪೂರ್ಣವಾಗಿ ತೆಗೆದುಬಿಡಬೇಕು,” ಎಂದರು.


ಭೂಮಿಯು ತನ್ನ ಬಾಯಿತೆರೆದು, ಅವರನ್ನೂ, ಅವರ ಮನೆಗಳನ್ನೂ, ಕೋರಹನಿಗೆ ಸಂಬಂಧಪಟ್ಟ ಸಕಲ ಜನರನ್ನೂ, ಅವರಿಗಿದ್ದದ್ದನ್ನೆಲ್ಲಾ ನುಂಗಿಬಿಟ್ಟಿತು.


ಯೆಹೋವ ದೇವರು ಮೋಶೆಗೆ, “ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ಯೆಹೋವ ದೇವರನ್ನು ನೋಡುವದಕ್ಕಾಗಿ ಮುಂದೆ ಬಂದರೆ, ಅವರಲ್ಲಿ ಬಹಳ ಜನರು ಸಾಯುವರು.


ಅಮ್ರಾಮಿಯರು, ಇಚ್ಹಾರರು, ಹೆಬ್ರೋನಿಯರು, ಉಜ್ಜೀಯೇಲರು; ಇವು ಕೊಹಾತನ ಕುಟುಂಬಗಳು.


ಇದಲ್ಲದೆ ಯೆಹೋವ ದೇವರು ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,


ಅವರು ಮಹಾಪರಿಶುದ್ಧ ವಸ್ತುಗಳ ಸಮೀಪಕ್ಕೆ ಬರುವಾಗ, ಅವರು ಸಾಯದೆ ಬದುಕುವ ಹಾಗೆ ಹೀಗೆ ಎಚ್ಚರಿಕೆ ವಹಿಸಬೇಕು: ಆರೋನನೂ ಅವನ ಪುತ್ರರೂ ಒಳಗೆ ಪ್ರವೇಶಿಸಿ, ಅವರಲ್ಲಿ ಒಬ್ಬೊಬ್ಬನನ್ನು ಅವನ ಕೆಲಸಕ್ಕೂ ಅವನ ಹೊರೆಯನ್ನೂ ನೇಮಿಸಬೇಕು.


ಇದರ ಹಾಗೆ ತೈಲ ಮಾಡುವವನೂ ಯಾಜಕನಲ್ಲದವನ ಮೇಲೆ ಇದನ್ನು ಹಚ್ಚುವವನನ್ನು ಸ್ವಜನರೊಳಗಿಂದ ತೆಗೆದುಹಾಕಬೇಕು,’ ಎಂದು ಹೇಳು,” ಎಂದರು.


ಸುವಾಸನೆಗಾಗಿ ಅದನ್ನು ಮಾಡಿಕೊಳ್ಳುವವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು