Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:22 - ಕನ್ನಡ ಸಮಕಾಲಿಕ ಅನುವಾದ

22 “ಗೇರ್ಷೋನನ ಪುತ್ರರ ಲೆಕ್ಕವನ್ನು ಸಹ ಅವರ ತಂದೆಗಳ ಮನೆಗಳ ಪ್ರಕಾರವಾಗಿಯೂ, ಅವರ ಕುಲಗಳ ಪ್ರಕಾರವಾಗಿಯೂ ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ನೀನು ಗೇರ್ಷೋನ್ಯರ ಗೋತ್ರಕುಟುಂಬಗಳ ಪ್ರಕಾರ ಎಣಿಕೆಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22-23 “ನೀನು ಗೇರ್ಷೋನ್ಯರನ್ನು ಲೆಕ್ಕಿಸಬೇಕು. ಅವರಲ್ಲಿ ಮೂವತ್ತರಿಂದ ಐವತ್ತು ವರ್ಷದವರೆಗೆ ವಯಸ್ಸಾದವರು ಹಾಗೂ ದೇವದರ್ಶನದ ಗುಡಾರದ ಸೇವೆಗೆ ಯೋಗ್ಯರಾದವರನ್ನು ಗೋತ್ರಕುಟುಂಬದ ಪ್ರಕಾರ ಎಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22-23 ನೀನು ಗೇರ್ಷೋನ್ಯರಲ್ಲಿ ಯಾರಾರು ಮೂವತ್ತರಿಂದ ಐವತ್ತು ವರುಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವಕಮಂಡಲಿಗೆ ಸೇರತಕ್ಕವರಾಗಿದ್ದಾರೋ ಅವರನ್ನು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22-23 “ನೀನು ಗೇರ್ಷೋನ್ಯರನ್ನು ಕುಟುಂಬಗಳಿಗನುಸಾರವಾಗಿ ಮತ್ತು ಕುಲಗಳಿಗನುಸಾರವಾಗಿ ಲೆಕ್ಕಿಸು. ಅಲ್ಲದೆ ದೇವದರ್ಶನಗುಡಾರದ ಸೇವೆಯನ್ನು ಮಾಡಲು ಯೋಗ್ಯರಾದ ಗಂಡಸರನ್ನು ಪಟ್ಟಿಮಾಡು. ಅವರ ವಯಸ್ಸು ಮೂವತ್ತರಿಂದ ಐವತ್ತು ವರ್ಷದೊಳಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:22
5 ತಿಳಿವುಗಳ ಹೋಲಿಕೆ  

ಗೇರ್ಷೋನ್ಯರ ಗೋತ್ರಗಳ ಮುಖ್ಯಸ್ಥನು ಲಾಯೇಲನ ಮಗ ಎಲ್ಯಾಸಾಫ್.


ಗೇರ್ಷೋನ್ ವಂಶಕ್ಕೆ ಸೇರಿದ ಲಿಬ್ನೀಯ ಕುಟುಂಬವೂ ಶಿಮ್ಮೀಯ ಕುಟುಂಬದವರೂ ಇದ್ದರು.


ಗೇರ್ಷೋನ್ ಗೋತ್ರದವರು: ಲಿಬ್ನೀ ಹಾಗೂ ಶಿಮ್ಮೀ.


ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,


ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಐವತ್ತು ವರುಷಗಳ ಪ್ರಾಯವುಳ್ಳ ಪುರುಷರನ್ನೂ ದೇವದರ್ಶನ ಗುಡಾರದಲ್ಲಿ ಸೇವೆ ಮಾಡುವುದಕ್ಕೂ, ಅದನ್ನು ಪೂರೈಸುವುದಕ್ಕೂ ಸೇರುವವರೆಲ್ಲರನ್ನೂ ಎಣಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು