Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:33 - ಕನ್ನಡ ಸಮಕಾಲಿಕ ಅನುವಾದ

33 ಮೆರಾರೀಯ ಪುತ್ರರ ಕುಟುಂಬಗಳ ಸೇವೆಯೂ, ದೇವದರ್ಶನದ ಗುಡಾರದಲ್ಲಿ ಅವರು ಮಾಡುವ ಸಮಸ್ತ ಸೇವೆಯೂ ಇದೆ. ಅದು ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ದೇವದರ್ಶನದ ಗುಡಾರದ ವಿಷಯದಲ್ಲಿ ಮೆರಾರೀಯರ ಗೋತ್ರಕುಟುಂಬದವರು ಮಾಡಬೇಕಾದ ಕೆಲಸ ಇದೇ. ಅವರು ಮಹಾಯಾಜಕ ಆರೋನನ ಮಗನಾದ ಈತಾಮಾರನ ಅಧೀನದಲ್ಲಿದ್ದು ಕಾರ್ಯಗಳನ್ನು ಮಾಡಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ದೇವದರ್ಶನದ ಗುಡಾರದ ವಿಷಯದಲ್ಲಿ ಮೆರಾರೀಯರು ಮಾಡಬೇಕಾದ ಕೆಲಸ ಇದೇ. ಅವರು ಮಹಾಯಾಜಕ ಆರೋನನ ಮಗ ಈತಮಾರನ ಕೈಕೆಳಗೆ ಇದನ್ನೆಲ್ಲಾ ಮಾಡಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ದೇವದರ್ಶನದ ಗುಡಾರದ ವಿಷಯದಲ್ಲಿ ಮೆರಾರೀಯರು ಮಾಡಬೇಕಾದ ಕೆಲಸ ಇದೇ. ಅವರು ಮಹಾಯಾಜಕ ಆರೋನನ ಮಗನಾದ ಈತಾಮಾರನ ಕೈ ಕೆಳಗೆ ಅದನ್ನು ನಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ದೇವದರ್ಶನಗುಡಾರಕ್ಕೋಸ್ಕರ ಮೆರಾರೀಯರು ಮಾಡತಕ್ಕ ಕೆಲಸ ಇದೇ. ಅವರ ಕೆಲಸವನ್ನು ಮೇಲ್ವಿಚಾರಣೆ ಮಾಡುವುದು ಮಹಾಯಾಜಕ ಆರೋನನ ಮಗನಾದ ಈತಾಮಾರನ ಜವಾಬ್ದಾರಿಯಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:33
7 ತಿಳಿವುಗಳ ಹೋಲಿಕೆ  

ಗೇರ್ಷೋನ್ಯರ ಕುಟುಂಬದವರು ಸಭೆಯ ಗುಡಾರದಲ್ಲಿ ಮಾಡುವ ಸೇವೆಯೂ ಇದೆ. ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರುವುದು ಅವರಿಗೆ ಅಪ್ಪಣೆಯಾಗಿದೆ.


ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿದು ಹೀಗೆ ಹೇಳುವನು, “ನಿನಗೆ ವಸ್ತ್ರವಿದೆ, ನಮ್ಮನ್ನು ನೀನು ಆಳುವವನಾಗು ಮತ್ತು ಈ ಹಾಳಾದ ಪಟ್ಟಣವು ನಿನ್ನ ಕೈಕೆಳಗಿರಲಿ.”


ಆಗ ಯೆಹೋಶುವನು ಯಾಜಕರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹೋಗಿರಿ,” ಎಂದನು. ಹಾಗೆಯೇ ಅವರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದೆ ಹೊರಟರು.


ಸುತ್ತಲಿರುವ ಅಂಗಳದ ಕಂಬಗಳ ಆಧಾರಗಳೂ ಅದರ ಗದ್ದಿಗೇ ಕಲ್ಲುಗಳೂ ಅದರ ಗೂಟಗಳೂ ಅವುಗಳ ಹಗ್ಗಗಳೂ ಅವುಗಳ ಎಲ್ಲಾ ಸಲಕರಣೆಗಳ ಪ್ರಕಾರವಾಗಿಯೂ ಅವುಗಳ ಸಮಸ್ತ ಸೇವೆಯ ಪ್ರಕಾರವಾಗಿಯೂ ಅವರು ಹೊರುವುದಕ್ಕೆ ಕೊಟ್ಟ ಅಪ್ಪಣೆಯ ಸಲಕರಣೆಗಳನ್ನು ನೀವು ಹೆಸರೆಸರಾಗಿ ಎಣಿಸಬೇಕು.


ಮೋಶೆಯೂ, ಆರೋನನೂ, ಸಭೆಯ ಮುಖ್ಯಸ್ಥನೂ, ಕೊಹಾತ್ಯರ ಪುತ್ರರನ್ನು ಅವರ ಕುಲಗಳ ಪ್ರಕಾರವಾಗಿಯೂ, ಅವರ ಕುಟುಂಬಗಳ ಪ್ರಕಾರವಾಗಿಯೂ


ದೇವದರ್ಶನದ ಗುಡಾರಕ್ಕೆ ಅಂದರೆ ಒಡಂಬಡಿಕೆಯ ನಿಯಮದ ಗುಡಾರ ನಿರ್ಮಾಣಕ್ಕೆ ಬಳಸಿದ ವಸ್ತುಗಳ ಲೆಕ್ಕ ಇವು: ಮೋಶೆಯ ಆಜ್ಞೆಯ ಮೇರೆಗೆ ಯಾಜಕನಾದ ಆರೋನನ ಮಗನಾದ ಈತಾಮಾರನ ನಿರ್ದೇಶನದಲ್ಲಿ ಲೇವಿಯರ ಕೈಯಿಂದ ಲೆಕ್ಕ ಮಾಡಿಸಿದ್ದು.


ಯಾಜಕನಾದ ಆರೋನನ ಮಗ ಈತಾಮಾರನ ಕೈಕೆಳಗಿರುವ ನಾಲ್ಕು ಬಂಡಿಗಳನ್ನೂ, ಎಂಟು ಎತ್ತುಗಳನ್ನೂ ಮೆರಾರೀಯ ಪುತ್ರರಿಗೆ ಅವರ ಕೆಲಸಕ್ಕೆ ತಕ್ಕಂತೆ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು