Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:37 - ಕನ್ನಡ ಸಮಕಾಲಿಕ ಅನುವಾದ

37 ಮೋಶೆಗೆ ಯೆಹೋವ ದೇವರು ಅಪ್ಪಣೆ ಮಾಡಿದ ಹಾಗೆ ಮೋಶೆಯೂ, ಆರೋನನೂ ಎಣಿಸಿದ ಕೊಹಾತ್ಯರ ಕುಟುಂಬಗಳಲ್ಲಿ ಎಣಿಕೆಯಾದವರೂ, ದೇವದರ್ಶನ ಗುಡಾರದಲ್ಲಿ ಸೇವೆ ಮಾಡುವವರೆಲ್ಲರೂ ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಯೆಹೋವನು ಮೋಶೆಗೆ ಕೊಟ್ಟ ಅಪ್ಪಣೆಯ ಮೇರೆಗೆ ಮೋಶೆ ಆರೋನರು ಕೆಹಾತ್ಯರ ಗೋತ್ರಕುಟುಂಬವನ್ನು ಲೆಕ್ಕಿಸಲಾಗಿ ಅವರಲ್ಲಿ ದೇವದರ್ಶನದ ಗುಡಾರದ ಕೆಲಸವನ್ನು ಮಾಡತಕ್ಕವರು ಇಷ್ಟೇ ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಸರ್ವೇಶ್ವರ ಮೋಶೆಗೆ ಕೊಟ್ಟ ಆಜ್ಞೆಯಂತೆ ಕೆಹಾತ್ಯರನ್ನು ಮೋಶೆ - ಆರೋನರು ಎಣಿಕೆಮಾಡಿದಾಗ ದೇವದರ್ಶನದ ಗುಡಾರದ ಸೇವೆಗೆ ಯೋಗ್ಯರಾಗಿದ್ದವರು ಇಷ್ಟೇ ಜನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಯೆಹೋವನು ಮೋಶೆಗೆ ಕೊಟ್ಟ ಅಪ್ಪಣೆಯ ಮೇರೆಗೆ ಮೋಶೆ ಆರೋನರು ಕೆಹಾತ್ಯರನ್ನು ಲೆಕ್ಕಿಸಲಾಗಿ ಅವರಲ್ಲಿ ದೇವದರ್ಶನದ ಗುಡಾರದ ಕೆಲಸವನ್ನು ಮಾಡತಕ್ಕವರು ಇಷ್ಟೇ ಜನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮೋಶೆ ಆರೋನರು ಕೆಹಾತ್ಯರನ್ನು ಲೆಕ್ಕಿಸಲಾಗಿ ಅವರಲ್ಲಿ ದೇವದರ್ಶನಗುಡಾರಕ್ಕೆ ಸಂಬಂಧಪಟ್ಟ ಕೆಲಸವನ್ನು ಮಾಡತಕ್ಕವರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:37
7 ತಿಳಿವುಗಳ ಹೋಲಿಕೆ  

ಅಮ್ರಾಮಿಯರು, ಇಚ್ಹಾರರು, ಹೆಬ್ರೋನಿಯರು, ಉಜ್ಜೀಯೇಲರು; ಇವು ಕೊಹಾತನ ಕುಟುಂಬಗಳು.


ಕುಲಗಳ ಪ್ರಕಾರ ಅವರಲ್ಲಿ ಎಣಿಕೆಯಾದವರು 2,750 ಮಂದಿಯಾಗಿದ್ದರು.


ಗೇರ್ಷೋನನ ಪುತ್ರರಲ್ಲಿ ಅವರ ಕುಲಗಳ ಪ್ರಕಾರವಾಗಿಯೂ, ಅವರ ಕುಟುಂಬಗಳ ಪ್ರಕಾರವಾಗಿಯೂ ಎಣಿಕೆಯಾದರು.


ಯೆಹೋವ ದೇವರು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ, ಇಸ್ರಾಯೇಲರಿಗೂ ಮಧ್ಯದಲ್ಲಿ ಇಟ್ಟ ನಿಯಮಗಳೂ, ನ್ಯಾಯಗಳೂ, ಆಜ್ಞಾವಿಧಿಗಳೂ ಇವೇ.


ಆಗ ಮೋಶೆಯು, ಯೆಹೋವ ದೇವರು ತನಗೆ ಆಜ್ಞಾಪಿಸಿದ ಮಾತಿನ ಪ್ರಕಾರವಾಗಿ ಎಣಿಸಿದನು.


ದೇವದರ್ಶನ ಗುಡಾರದಲ್ಲಿ ಕೆಲಸ ಮಾಡುವುದಕ್ಕಾಗಿಯೂ, ಹೊರುವುದಕ್ಕಾಗಿಯೂ ಬರುವವರೆಲ್ಲರೂ ಎಂದರೆ, ಅವರಲ್ಲಿ ಮೂವತ್ತು ವರ್ಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರನ್ನೂ ಎಂದರೆ, ಐವತ್ತು ವರ್ಷಗಳವರೆಗೆ


ಯೆಹೋವ ದೇವರು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ, ಹೊರುವುದಕ್ಕಾಗಿಯೂ ಜವಾಬ್ದಾರಿಕೆ ಕೊಡಲಾಯಿತು. ಹೀಗೆ ಯೆಹೋವ ದೇವರು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಎಣಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು