Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:6 - ಕನ್ನಡ ಸಮಕಾಲಿಕ ಅನುವಾದ

6 ಅದರ ಮೇಲೆ ಕಡಲುಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗದಲ್ಲಿ ಪೂರ್ಣವಾದ ನೀಲಿವಸ್ತ್ರವನ್ನು ಹಾಸಿ, ಕೋಲುಗಳನ್ನು ಅದರ ಸ್ಥಳದಲ್ಲಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದರ ಮೇಲೆ ಹಸನಾದ ತೊಗಲನ್ನೂ ಮತ್ತು ನೀಲಿ ಬಟ್ಟೆಯನ್ನೂ ಹೊದಿಸಿ, ಮಂಜೂಷದ ಬಳೆಗಳಲ್ಲಿ ಹೊರುವ ಕೋಲುಗಳನ್ನು ಸೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದರ ಮೇಲೆ ಹಸನಾದ ತೊಗಲನ್ನು ಮತ್ತು ನೀಲಿ ಬಟ್ಟೆಯನ್ನು ಹೊದಿಸಬೇಕು. (ಮಂಜೂಷದ ಬಳೆಗಳಿಗೆ) ಹೊರುವ ಕೋಲುಗಳನ್ನು ಸಿಕ್ಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದರ ಮೇಲೆ ಕಡಲುಹಂದಿಯ ತೊಗಲನ್ನೂ ನೀಲಿಬಟ್ಟೆಯನ್ನೂ ಹೊದಿಸಿ [ಮಂಜೂಷದ ಬಳೆಗಳಲ್ಲಿ] ಹೊರುವ ಕೋಲುಗಳನ್ನು ಸೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬಳಿಕ ಅವರು ಇವುಗಳಿಗೆಲ್ಲ ಶ್ರೇಷ್ಠವಾದ ತೊಗಲಿನಿಂದ ಮಾಡಿದ ಹೊದಿಕೆಯನ್ನು ಹೊದಿಸಬೇಕು. ಆಮೇಲೆ ಅವರು ನೀಲಿಬಟ್ಟೆಯನ್ನು ತೊಗಲಿನ ಮೇಲೆ ಹಾಸಿ ಪವಿತ್ರ ಪೆಟ್ಟಿಗೆಯ ಬಳೆಗಳಲ್ಲಿ ಹೊರುವ ಕೋಲುಗಳನ್ನು ಸೇರಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:6
11 ತಿಳಿವುಗಳ ಹೋಲಿಕೆ  

ಪರಿಶುದ್ಧಸ್ಥಳದ ಸೇವೆಗೋಸ್ಕರ ನೇಯ್ದ ಪರಿಶುದ್ಧ ವಸ್ತ್ರಗಳನ್ನು ಅಂದರೆ ಸೇವೆಮಾಡುವದಕ್ಕೆ ಯಾಜಕನಾದ ಆರೋನನಿಗೆ ಮತ್ತು ಅವನ ಪುತ್ರರಿಗೆ ಯಾಜಕವಸ್ತ್ರಗಳನ್ನು ತಂದರು.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಮೇರೆಗೆ ನೀಲಿ, ಧೂಮ್ರ, ರಕ್ತವರ್ಣದ ದಾರಿನಿಂದ ಪವಿತ್ರ ಆಲಯದ ಸೇವೆ ಮಾಡುವುದಕ್ಕೆ ಕಲಾತ್ಮಕವಾಗಿ ನೇಯ್ದ ಸೇವಾ ವಸ್ತ್ರಗಳನ್ನು ಮತ್ತು ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನು ಮಾಡಿದರು.


ಪರಿಶುದ್ಧಸ್ಥಳದ ಸೇವೆಗೋಸ್ಕರ ನೇಯ್ದ ಪರಿಶುದ್ಧ ವಸ್ತ್ರಗಳನ್ನು ಅಂದರೆ ಸೇವೆಮಾಡುವದಕ್ಕೆ ಯಾಜಕನಾದ ಆರೋನನಿಗೆ ಮತ್ತು ಅವನ ಪುತ್ರರಿಗೆ ಯಾಜಕವಸ್ತ್ರಗಳನ್ನು ಮಾಡಲಿ,” ಎಂದನು.


ಅದರ ಮೇಲೆ ಸೇವೆ ಮಾಡುವ ಎಲ್ಲಾ ಸಲಕರಣೆಗಳನ್ನು, ಅಗ್ನಿ ಪಾತ್ರೆಗಳನ್ನು, ಮುಳ್ಳುಗಳನ್ನು, ಸಲಿಕೆಗಳನ್ನು, ಬೋಗುಣಿಗಳನ್ನು, ಬಲಿಪೀಠದ ಎಲ್ಲಾ ಸಲಕರಣೆಗಳನ್ನು ಅದರ ಮೇಲಿಟ್ಟು, ಕಡಲುಹಂದಿಯ ಚರ್ಮಗಳ ಹೊದಿಕೆಯನ್ನು ಹಾಕಿ, ಹೊರುವ ಕೋಲುಗಳನ್ನು ಇಡಬೇಕು.


ಅವರು ಗುಡಾರದ ಪರದೆಗಳನ್ನೂ ದೇವದರ್ಶನ ಗುಡಾರವನ್ನೂ ಅದರ ಹೊದಿಕೆಯನ್ನೂ ಅದರ ಮೇಲಿರುವ ಕಡಲುಹಂದಿಯ ಚರ್ಮಗಳ ಹೊದಿಕೆಯನ್ನೂ ದೇವದರ್ಶನ ಗುಡಾರದ ಬಾಗಿಲಿನ ಪರದೆಯನ್ನೂ


ಇದಲ್ಲದೆ ಮೋಶೆಯು ಈ ನಿಯಮವನ್ನು ಬರೆದು, ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಪುತ್ರರಾದ ಯಾಜಕರಿಗೂ, ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.


“ಜಾಲಿ ಮರದಿಂದ ಸುಮಾರು ಒಂದು ಮೀಟರ್ ಉದ್ದ ಮತ್ತು ಅರವತ್ತೆಂಟು ಸೆಂಟಿಮೀಟರ್ ಅಗಲ ಮತ್ತು ಅರವತ್ತೆಂಟು ಸೆಂಟಿಮೀಟರ್ ಎತ್ತರವಾಗಿರುವ ಮಂಜೂಷವನ್ನು ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು