ಅರಣ್ಯಕಾಂಡ 4:7 - ಕನ್ನಡ ಸಮಕಾಲಿಕ ಅನುವಾದ7 “ಸಮ್ಮುಖದ ರೊಟ್ಟಿಯ ಮೇಜಿನ ಮೇಲೆ ಅವರು ನೀಲಿವಸ್ತ್ರವನ್ನು ಹಾಸಿ, ಅದರ ಮೇಲೆ ಪಾತ್ರೆಗಳನ್ನು, ಸೌಟುಗಳನ್ನು, ಬೋಗುಣಿಗಳನ್ನು ಮತ್ತು ಪಾನಾರ್ಪಣೆಯ ಹೂಜಿಗಳನ್ನು ಇಡಬೇಕು. ನಿತ್ಯಾರ್ಪಣೆಯ ರೊಟ್ಟಿಯನ್ನು ಅದರ ಮೇಲೆ ಇಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಬಳಿಕ ಅವರು ಯೆಹೋವನ ಸಮ್ಮುಖದಲ್ಲಿರುವ ಮೇಜಿನ ಮೇಲೆ ನೀಲಿ ಬಟ್ಟೆಯನ್ನು ಹಾಸಿ ಅದರ ಮೇಲೆ ಮೇಜಿಗೆ ಸೇರಿದ ಪಾತ್ರೆಗಳನ್ನೂ, ಧೂಪಾರತಿಗಳನ್ನೂ, ಹೂಜಿಗಳನ್ನೂ, ಪಾನದ್ರವ್ಯಾರ್ಪಣೆಯ ಬಟ್ಟಲುಗಳನ್ನೂ ಇಡಬೇಕು. ಯಾವಾಗಲೂ ಇರಬೇಕಾದ ರೊಟ್ಟಿಗಳು ಅದರ ಮೇಲೆ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ಸನ್ನಿಧಿ ಕಾಣಿಕೆಯ ಮೇಜಿನ ಮೇಲೆ ನೀಲಿಬಟ್ಟೆಯನ್ನು ಹಾಸಿ ಅದರ ಮೇಲೆ ಹರಿವಾಣಗಳನ್ನು, ಧೂಪಾರತಿಗಳನ್ನು, ಹೂಜಿಗಳನ್ನು ಹಾಗೂ ದಾನ್ಯದ್ರವ್ಯಾರ್ಪಣೆಯ ಬಟ್ಟಲುಗಳನ್ನು ಅವರು ಇಡಬೇಕು. ನಿತ್ಯಾರ್ಪಣೆಯ ರೊಟ್ಟಿಗಳನ್ನು ಅದರ ಮೇಲೆ ಇಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಬಳಿಕ ಅವರು ಯೆಹೋವನ ಸಮ್ಮುಖದಲ್ಲಿರುವ ಮೇಜಿನ ಮೇಲೆ ನೀಲಿ ಬಟ್ಟೆಯನ್ನು ಹಾಸಿ ಅದರ ಮೇಲೆ ಮೇಜಿಗೆ ಸೇರಿದ ಹರಿವಾಣಗಳನ್ನೂ ಧೂಪಾರತಿಗಳನ್ನೂ ಹೂಜೆಗಳನ್ನೂ ಪಾನದ್ರವ್ಯಾರ್ಪಣೆಯ ಬಟ್ಟಲುಗಳನ್ನೂ ಇಡಬೇಕು. ಯಾವಾಗಲೂ ಇರಬೇಕಾದ ರೊಟ್ಟಿಗಳೂ ಅದರ ಮೇಲೆ ಇರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ಬಳಿಕ ಅವರು ಪವಿತ್ರ ಮೇಜಿನ ಮೇಲೆ ನೀಲಿಬಟ್ಟೆಯನ್ನು ಹಾಸಬೇಕು. ಪಾನದ್ರವ್ಯಾರ್ಪಣೆಗಳಿಗಾಗಿ ತಟ್ಟೆಗಳನ್ನೂ ಚಮಚಗಳನ್ನೂ ಬಟ್ಟಲುಗಳನ್ನೂ ಹೂಜೆಗಳನ್ನೂ ವಿಶೇಷ ರೊಟ್ಟಿಯನ್ನೂ ಮೇಜಿನ ಮೇಲೆ ಇಡಬೇಕು. ಅಧ್ಯಾಯವನ್ನು ನೋಡಿ |