Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:15 - ಕನ್ನಡ ಸಮಕಾಲಿಕ ಅನುವಾದ

15 ಆ ಮನುಷ್ಯನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ತರಬೇಕು. ಅವಳಿಗೋಸ್ಕರ ಕಾಣಿಕೆಯಾಗಿ ಒಂದು ಓಮರ್ ಜವೆಗೋಧಿಯ ಹಿಟ್ಟನ್ನು ತರಬೇಕು. ಅದರ ಮೇಲೆ ಎಣ್ಣೆಯನ್ನಾದರೂ ಸಾಂಬ್ರಾಣಿಯನ್ನಾದರೂ ಹಾಕಬಾರದು. ಏಕೆಂದರೆ ಅದು ಸಂಶಯವನ್ನು ಸೂಚಿಸುವುದಕ್ಕೂ ಅಪರಾಧವನ್ನು ಹೊರಪಡಿಸುವುದಕ್ಕೂ ಜ್ಞಾಪಕಕ್ಕೆ ತರುವ ಕಾಣಿಕೆಯೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಅವನು ಮಾಡಬೇಕಾದದ್ದೇನೆಂದರೆ, ಆ ಪುರುಷನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು ಮತ್ತು ಅವಳ ಸಂಗತಿಯನ್ನು ವಿಚಾರಿಸುವುದಕ್ಕಾಗಿ ಅವನು ಯಾಜಕನಿಗೆ ಮೂರು ಸೇರು ಜವೆಗೋದಿಯ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರ ಸಂಶಯವನ್ನು ಸೂಚಿಸುವುದಕ್ಕೂ ಮತ್ತು ಪಾಪವನ್ನು ಹೊರಪಡಿಸುವುದಕ್ಕೂ ಯೆಹೋವನಿಗೆ ನೈವೇದ್ಯವಾದ ಕಾಣಿಕೆಯಾದುದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯ್ಯಲೂಬಾರದು, ಧೂಪವನ್ನು ಇಡಲೂಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈ ಎರಡು ಸಂದರ್ಭಗಳಲ್ಲೂ ಆ ಗಂಡನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು. ಅವಳ ಸಂಗತಿಯನ್ನು ವಿಚಾರಿಸುವುದಕ್ಕಾಗಿ, ಅವನು ಯಾಜಕನಿಗೆ ಮೂರು ಸೇರು ಜವೆಗೋದಿ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರ ಸಂಶಯವನ್ನು ಸೂಚಿಸುವುದಕ್ಕೂ ಪಾಪವನ್ನು ಹೊರಪಡಿಸುವುದಕ್ಕೂ, ಸರ್ವೇಶ್ವರನಿಗೆ ನೈವೇದ್ಯವಾದ ಕಾಣಿಕೆ. ಆದ್ದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹುಯ್ಯಬಾರದು, ಸಾಂಬ್ರಾಣಿಯನ್ನು ಹಾಕಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ಪುರುಷನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರಕೊಂಡು ಬರಬೇಕು. ಮತ್ತು ಅವಳ ಸಂಗತಿಯನ್ನು ವಿಚಾರಿಸುವದಕ್ಕಾಗಿ ಅವನು ಯಾಜಕನಿಗೆ ಮೂರು ಸೇರು ಜವೆಗೋದಿಯ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರಸಂಶಯವನ್ನು ಸೂಚಿಸುವದಕ್ಕೂ ಪಾಪವನ್ನು ಹೊರಪಡಿಸುವದಕ್ಕೂ ಯೆಹೋವನಿಗೆ ನೈವೇದ್ಯವಾದ ಕಾಣಿಕೆಯಾದದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯ್ಯಲೂಬಾರದು, ಧೂಪವನ್ನು ಇಡಲೂಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವನು ಅವಳನ್ನು ಯಾಜಕನ ಬಳಿಗೆ ಕರೆದುಕೊಂಡು ಹೋಗಬೇಕು. ಅಲ್ಲದೆ ಅವನು ಮೂರು ಸೇರು ಗೋಧಿಹಿಟ್ಟನ್ನು ಕಾಣಿಕೆಯಾಗಿ ಯಾಜಕನಿಗೆ ತಂದು ಕೊಡಬೇಕು. ಅವನು ಅದರ ಮೇಲೆ ಎಣ್ಣೆ ಹಾಕಬಾರದು; ಅವನು ಅದರ ಮೇಲೆ ಧೂಪಹಾಕಬಾರದು; ಯಾಕೆಂದರೆ ಇದು ಈರ್ಷೆಯುಳ್ಳ ಗಂಡನ ಧಾನ್ಯಸಮರ್ಪಣೆಯಾಗಿದೆ. ಆಕೆಯ ದೋಷವನ್ನು ಹೊರಪಡಿಸಲು ಕೊಟ್ಟಂಥ ಧಾನ್ಯಸಮರ್ಪಣೆ ಇದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:15
9 ತಿಳಿವುಗಳ ಹೋಲಿಕೆ  

ಇನ್ನು ಅದು ಇಸ್ರಾಯೇಲ್ ವಂಶದವರ ಭರವಸೆಯಾಗದೆ, ಇವರು ಅವರ ಕಡೆಗೆ ನೋಡಿದಾಗ ಪಾಪವನ್ನು ಜ್ಞಾಪಕಕ್ಕೆ ತರುವರು. ಆಗ ನಾನೇ ಸಾರ್ವಭೌಮ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ”


ಆಗ ಅವಳು ಎಲೀಯನಿಗೆ, “ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವುದಕ್ಕೂ, ನನ್ನ ಮಗನು ಸಾಯುವುದಕ್ಕೂ ನನ್ನ ಬಳಿಗೆ ಬಂದಿಯೋ?” ಎಂದಳು.


“ ‘ಆದರೆ ಅವರು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ ತರುವುದಕ್ಕೆ ಅಶಕ್ತರಾಗಿದ್ದರೆ, ಪಾಪಮಾಡಿದವರು ತಮ್ಮ ಬಲಿಗಾಗಿ, ಮೂರು ಸೇರು ಗೋಧಿ ಹಿಟ್ಟನ್ನು ಪಾಪ ಪರಿಹಾರದ ಬಲಿಯಾಗಿ ತರಬೇಕು. ಅವರು ಅದರ ಮೇಲೆ ಎಣ್ಣೆಯನ್ನು ಇಲ್ಲವೆ ಸಾಂಬ್ರಾಣಿಯನ್ನು ಹಾಕಬಾರದು. ಏಕೆಂದರೆ ಅದು ದೋಷಪರಿಹಾರ ಬಲಿಯಾಗಿದೆ.


ಆ ಯಜ್ಞಗಳು ಪ್ರತಿವರ್ಷವೂ ಪಾಪಗಳ ಜ್ಞಾಪಕವನ್ನು ಉಂಟುಮಾಡುತ್ತಿತ್ತು.


ಅಂತೆಯೇ ನಾನು ಅವಳನ್ನು ನನಗಾಗಿ ಹದಿನೈದು ಶೆಕೆಲ್ ಬೆಳ್ಳಿ ಮತ್ತು ಸುಮಾರು ಒಂದು ಹೋಮೆರ್ ಹಾಗೂ ಒಂದು ಲೆಥೆಕ ಜವೆಗೋಧಿಗೂ ಕೊಂಡುಕೊಂಡೆನು.


“ ‘ಯಾರಾದರೂ ಯೆಹೋವ ದೇವರಿಗೆ ಧಾನ್ಯ ಸಮರ್ಪಣೆಯನ್ನು ಸಮರ್ಪಿಸುವುದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಸಬೇಕು, ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.


“ ‘ಯಾಜಕನು ಅವಳನ್ನು ಸಮೀಪಕ್ಕೆ ಕರೆದು, ಯೆಹೋವ ದೇವರ ಸಮ್ಮುಖದಲ್ಲಿ ನಿಲ್ಲಿಸಬೇಕು.


ಆದರೆ ಅವರು ತಾವು ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ನಂಬಿಕೆ ಇಟ್ಟಿದ್ದರಿಂದ, ಅವರಿಗೆ ಸುಳ್ಳು ಶಕುನದ ಹಾಗೆ ಕಾಣುವುದು. ಆದರೆ ಅವನು ಅವರ ಅಕ್ರಮವನ್ನು ಜ್ಞಾಪಕಪಡಿಸಿ, ಅವರನ್ನು ಸೆರೆಯಾಗಿ ಒಯ್ಯುವನು.


ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನಂದರೆ: “ ‘ನಿಮ್ಮಲ್ಲಿ ಯಾರಾದರೂ ಯೆಹೋವ ದೇವರಿಗೆ ಒಂದು ಪ್ರಾಣಿಯನ್ನು ಕಾಣಿಕೆಯಾಗಿ ಸಮರ್ಪಿಸಲು ಆಶಿಸಿದರೆ, ಅದನ್ನು ದನಕರುಗಳಿಂದಾಗಲಿ, ಆಡು ಕುರಿಗಳಿಂದಾಗಲಿ ಆಯ್ದುಕೊಂಡು ಸಮರ್ಪಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು