Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:16 - ಕನ್ನಡ ಸಮಕಾಲಿಕ ಅನುವಾದ

16 “ ‘ಯಾಜಕನು ಅವಳನ್ನು ಸಮೀಪಕ್ಕೆ ಕರೆದು, ಯೆಹೋವ ದೇವರ ಸಮ್ಮುಖದಲ್ಲಿ ನಿಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “‘ಯಾಜಕನು ಅವಳನ್ನು ಕರೆದು ಯೆಹೋವನ ಸಮ್ಮುಖದಲ್ಲಿ ನಿಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಯಾಜಕನು ಅವಳನ್ನು ಕರೆದು ಸರ್ವೇಶ್ವರನ ಸಮ್ಮುಖದಲ್ಲಿ ನಿಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯಾಜಕನು ಅವಳನ್ನು ಕರೆದು ಯೆಹೋವನ ಎದುರಿನಲ್ಲಿ ನಿಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಯಾಜಕನು ಅವಳನ್ನು ತಂದು ಯೆಹೋವನ ಎದುರಿನಲ್ಲಿ ನಿಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:16
6 ತಿಳಿವುಗಳ ಹೋಲಿಕೆ  

ಎಲ್ಲರೂ ವಿವಾಹವನ್ನು ಗೌರವಿಸಬೇಕು ಮತ್ತು ದಾಂಪತ್ಯ ಜೀವನವು ಪರಿಶುದ್ಧವಾದದ್ದಾಗಿರಬೇಕು. ಏಕೆಂದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವರು.


“ಯೆಹೋವ ದೇವರಾದ ನಾನೇ ಹೃದಯವನ್ನು ಪರೀಕ್ಷಿಸುತ್ತೇನೆ. ಅಂತರಿಂದ್ರಿಯಗಳನ್ನು ಶೋಧಿಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ, ಅವನ ಕ್ರಿಯೆಗಳ ಫಲದ ಪ್ರಕಾರವೂ ಪ್ರತಿಫಲ ಕೊಡುತ್ತೇನೆ.”


“ ‘ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ, ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಯೆಹೋವ ದೇವರಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.


ಆ ಮನುಷ್ಯನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ತರಬೇಕು. ಅವಳಿಗೋಸ್ಕರ ಕಾಣಿಕೆಯಾಗಿ ಒಂದು ಓಮರ್ ಜವೆಗೋಧಿಯ ಹಿಟ್ಟನ್ನು ತರಬೇಕು. ಅದರ ಮೇಲೆ ಎಣ್ಣೆಯನ್ನಾದರೂ ಸಾಂಬ್ರಾಣಿಯನ್ನಾದರೂ ಹಾಕಬಾರದು. ಏಕೆಂದರೆ ಅದು ಸಂಶಯವನ್ನು ಸೂಚಿಸುವುದಕ್ಕೂ ಅಪರಾಧವನ್ನು ಹೊರಪಡಿಸುವುದಕ್ಕೂ ಜ್ಞಾಪಕಕ್ಕೆ ತರುವ ಕಾಣಿಕೆಯೂ ಆಗಿದೆ.


ಆಗ ಯಾಜಕನು ಪವಿತ್ರ ನೀರನ್ನು ಮಣ್ಣಿನ ಗಡಿಗೆಗಳಲ್ಲಿ ತೆಗೆದುಕೊಳ್ಳಬೇಕು. ಗುಡಾರದ ನೆಲದಲ್ಲಿರುವ ಧೂಳನ್ನು ಯಾಜಕನು ತೆಗೆದುಕೊಂಡು, ಆ ನೀರಿನೊಳಗೆ ಹಾಕಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು