ಅರಣ್ಯಕಾಂಡ 5:19 - ಕನ್ನಡ ಸಮಕಾಲಿಕ ಅನುವಾದ19 ಯಾಜಕನು ಅವಳನ್ನು ಪ್ರಮಾಣ ಮಾಡಿಸಿ, ಸ್ತ್ರೀಗೆ ಹೇಳಬೇಕಾದದ್ದು, “ಮದುವೆಯಾಗಿ ಗಂಡನೊಂದಿಗೆ ಸಂಸಾರ ನಡೆಸುವಾಗ, ಒಬ್ಬ ಪರಪುರುಷನು ನಿನ್ನ ಸಂಗಡ ಮಲಗಿರದಿದ್ದರೆ, ನಿನ್ನ ಗಂಡನನ್ನು ಬಿಟ್ಟು ನೀನು ಜಾರತ್ವ ಮಾಡದೆ ಇದ್ದರೆ, ಶಾಪವನ್ನು ಉಂಟುಮಾಡುವ ಈ ನೀರು ನಿನಗೆ ಯಾವ ಹಾನಿಮಾಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯಾಜಕನೂ ಅವಳಿಂದ ಪ್ರಮಾಣಮಾಡಿಸಿ ಹೀಗೆ ಹೇಳಬೇಕು, “ಒಬ್ಬ ಪರಪುರುಷನ ಸಂಗಮಮಾಡದಿದ್ದರೆ, ನಿನ್ನ ಗಂಡನನ್ನು ಬಿಟ್ಟು ನೀನು ಜಾರತ್ವ ಮಾಡದೇ ನಿರಪರಾಧಿಯಾಗಿದ್ದರೆ ಶಪಿಸಲ್ಪಟ್ಟ ವಿಷಕರವಾದ ಈ ನೀರು ನಿನಗೆ ಯಾವ ಹಾನಿಯನ್ನು ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅದೇ ಯಾಜಕನು ಅವಳಿಂದ ಶಪಥಪೂರ್ವಕ ಪ್ರಮಾಣ ಮಾಡಿಸುತ್ತಾ ಅವಳಿಗೆ - “ನೀನು ನಿನ್ನ ಗಂಡನ ಅಧೀನದಲ್ಲಿದ್ದು ಪಾತಿವ್ರತ್ಯವನ್ನು ಬಿಡದೆ, ಪರಪುರುಷನನ್ನು ಕೂಡದೆ, ಅಶುದ್ಧಳಾಗದೆ ಇರುವವಳಾದರೆ ಶಾಪ ತರುವ ಈ ವಿಷಕರವಾದ ನೀರಿನಿಂದ ನಿನಗೆ ಹಾನಿಯಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯಾಜಕನು ಅವಳಿಂದ ಶಪಥಪೂರ್ವಕವಾದ ಪ್ರಮಾಣವಾಕ್ಯವನ್ನು ನುಡಿಸುವವನಾಗಿ ಹೀಗನ್ನಬೇಕು - ನೀನು ಪರಪುರುಷನ ಸಂಗಮಾಡದೆ ಗಂಡನ ಅಧೀನದಲ್ಲಿದ್ದು ಪಾತಿವ್ರತ್ಯವನ್ನು ಬಿಡದೆ ದುಷ್ಕಾರ್ಯವನ್ನು ಮಾಡದೆ ಇರುವವಳಾದರೆ ಶಾಪವನ್ನುಂಟು ಮಾಡುವ ವಿಷಕರವಾದ ನೀರಿನಿಂದ ನಿನಗೆ ಹಾನಿಯಾಗಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ಬಳಿಕ ಯಾಜಕನು ಸ್ತ್ರೀಗೆ ಸುಳ್ಳಾಡದೆ ಸತ್ಯವನ್ನೇ ಹೇಳಬೇಕೆಂದು ಪ್ರಮಾಣ ಮಾಡಿಸುವನು. ಯಾಜಕನು ಅವಳಿಗೆ ಹೀಗೆನ್ನಬೇಕು: ‘ನೀನು ಪರಪುರುಷನ ಸಂಗ ಮಾಡದೆ ಗಂಡನ ಅಧೀನದಲ್ಲಿದ್ದು ಪಾತಿವ್ರತ್ಯವನ್ನು ಬಿಡದೆ ದುಷ್ಕೃತ್ಯವನ್ನು ಮಾಡದೆ ಇರುವವಳಾದರೆ, ಶಾಪವನ್ನು ಉಂಟುಮಾಡುವ ಕಹಿನೀರಿನಿಂದ ನಿನಗೆ ಹಾನಿಯಾಗಬಾರದು. ಅಧ್ಯಾಯವನ್ನು ನೋಡಿ |