Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:24 - ಕನ್ನಡ ಸಮಕಾಲಿಕ ಅನುವಾದ

24 ಆ ಸ್ತ್ರೀಗೆ ಶಪಿಸುವಂಥಹ ಕಹಿಯಾದ ನೀರನ್ನು ಕುಡಿಸಬೇಕು. ಆಗ ಶಪಿಸುವ ನೀರು ಅವಳಲ್ಲಿ ಸೇರಿ ಕಹಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಶಾಪವನ್ನುಂಟುಮಾಡುವ ವಿಷಕರವಾದ ನೀರನ್ನು ಆ ಸ್ತ್ರೀಗೆ ಕುಡಿಸಬೇಕು. ಆಗ ಶಪಿಸುವ ನೀರು ಅವಳಲ್ಲಿ ಸೇರಿ ವಿಷಕರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಶಾಪತರುವ ಆ ನೀರನ್ನು ಆಕೆಗೆ ಕುಡಿಸಲಿ; ಆ ನೀರು ಅವಳೊಳಗೆ ಸೇರಿ ವಿಷಕರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆ ವಿಷಕರಜಲದಲ್ಲಿ ಸೇರುವಂತೆ ಒರಸಿ ಶಾಪವನ್ನುಂಟುಮಾಡುವ ಆ ನೀರನ್ನು ಆ ಸ್ತ್ರೀಗೆ ಕುಡಿಸಬೇಕು. ಶಾಪವನ್ನುಂಟುಮಾಡುವ ಆ ನೀರು ಅವಳೊಳಗೆ ಸೇರಿ ವಿಷಕರವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆಮೇಲೆ ಶಾಪವನ್ನು ಬರಮಾಡುವ ಆ ನೀರನ್ನು ಆ ಸ್ತ್ರೀಗೆ ಕುಡಿಸಬೇಕು. ಈ ನೀರು ಅವಳೊಳಗೆ ಸೇರುವುದು. ಅವಳು ದೋಷಿಯಾಗಿದ್ದರೆ ಅವಳಿಗೆ ಮಹಾಸಂಕಟವನ್ನು ಉಂಟುಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:24
4 ತಿಳಿವುಗಳ ಹೋಲಿಕೆ  

“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


“ ‘ಇದಲ್ಲದೆ ಯಾಜಕನು ಈ ಶಾಪವನ್ನು ಪುಸ್ತಕದಲ್ಲಿ ಬರೆದು, ಕಹಿಯಾದ ನೀರಿನಿಂದ ತೊಳೆದು,


ಬಳಿಕ ಯಾಜಕನು ಆ ಸ್ತ್ರೀಯ ಕೈಯಿಂದ ಸಂಶಯ ಸೂಚಕ ಕಾಣಿಕೆಯನ್ನು ತೆಗೆದುಕೊಂಡು, ಆ ಕಾಣಿಕೆಯನ್ನು ಯೆಹೋವ ದೇವರ ಸಮ್ಮುಖದಲ್ಲಿ ನೈವೇದ್ಯ ಮಾಡಿ, ಬಲಿಪೀಠದ ಸಮೀಪಕ್ಕೆ ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು