Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:26 - ಕನ್ನಡ ಸಮಕಾಲಿಕ ಅನುವಾದ

26 ಆಗ ಯಾಜಕನು ಜ್ಞಾಪಕಾರ್ಥವಾಗಿ ಕಾಣಿಕೆಯಿಂದ ಒಂದು ಹಿಡಿ ತೆಗೆದುಕೊಂಡು, ಬಲಿಪೀಠದ ಮೇಲೆ ಸುಟ್ಟು, ಸ್ತ್ರೀಗೆ ಆ ನೀರನ್ನು ಕುಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ಯಾಜಕನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಕಾಣಿಕೆಯಿಂದ ಒಂದು ಹಿಡಿಯನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಟ್ಟು ಆ ನೀರನ್ನು ಸ್ತ್ರೀಗೆ ಕುಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನೈವೇದ್ಯವಾದುದನ್ನು ಸೂಚಿಸುವುದಕ್ಕಾಗಿ ಆ ಹಿಟ್ಟಿನಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಅವನು ಹೋಮಮಾಡಬೇಕು. ಕೊನೆಗೆ ಯಾಜಕನು ಆ ನೀರನ್ನು ಆಕೆಗೆ ಕುಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯಾಜಕನು ನೈವೇದ್ಯವಾದದ್ದನ್ನು ಸೂಚಿಸುವದಕ್ಕಾಗಿ ಆ ಹಿಟ್ಟಿನಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ತರುವಾಯ ಅವನು ಆ ನೀರನ್ನು ಸ್ತ್ರೀಗೆ ಕುಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯಾಜಕನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಆ ಹಿಟ್ಟಿನಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಯಜ್ಞವೇದಿಕೆಯ ಮೇಲೆ ಹೋಮಮಾಡಬೇಕು. ತರುವಾಯ ಅವನು ಆ ನೀರನ್ನು ಕುಡಿಯಲು ಸ್ತ್ರೀಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:26
5 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಪುತ್ರರ ಬಳಿಗೆ ತರಬೇಕು. ಅವನು ಹಿಟ್ಟಿನಲ್ಲಿಯೂ, ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜಕನು ಅದನ್ನು ಜ್ಞಾಪಕಾರ್ಥವಾಗಿ ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು.


ತರುವಾಯ ಅವರು ಅದನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಜ್ಞಾಪಕಾರ್ಥವಾಗಿ ಅದರಿಂದ ತನ್ನ ಹಿಡಿಯಷ್ಟು ತೆಗೆದುಕೊಂಡು, ಬಲಿಪೀಠದ ಮೇಲೆ ಬೆಂಕಿಯ ಅರ್ಪಣೆಗಳಿಗನುಸಾರವಾಗಿ ಯೆಹೋವ ದೇವರಿಗಾಗಿ ಸುಡಬೇಕು. ಅದು ಪಾಪ ಪರಿಹಾರದ ಬಲಿಯಾಗಿರುವುದು.


ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾಗಿ ಧಾನ್ಯ ಸಮರ್ಪಣೆಯನ್ನಾಗಿ ತೆಗೆದುಕೊಂಡು ಅದನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು, ಯೆಹೋವ ದೇವರಿಗೆ ಸುವಾಸನೆಯ ಸಮರ್ಪಣೆಯಾಗಿರುವುದು.


ಯಾಜಕನು ಧಾನ್ಯ ಸಮರ್ಪಣೆಯ ಹಿಟ್ಟಿನಲ್ಲಿ ಒಂದು ಹಿಡಿ ಹಿಟ್ಟನ್ನೂ, ಧಾನ್ಯ ಸಮರ್ಪಣೆಯ ಮೇಲಿರುವ ಅದರ ಎಣ್ಣೆಯನ್ನೂ, ಅದರ ಎಲ್ಲಾ ಸಾಂಬ್ರಾಣಿಯನ್ನೂ ತೆಗೆದುಕೊಂಡು ಜ್ಞಾಪಕಾರ್ಥವಾಗಿ ಯೆಹೋವ ದೇವರಿಗೆ ಬಲಿಪೀಠದ ಮೇಲೆ ಸುವಾಸನೆಗಾಗಿ ಅದನ್ನು ಸುಡಬೇಕು.


ಬಳಿಕ ಯಾಜಕನು ಆ ಸ್ತ್ರೀಯ ಕೈಯಿಂದ ಸಂಶಯ ಸೂಚಕ ಕಾಣಿಕೆಯನ್ನು ತೆಗೆದುಕೊಂಡು, ಆ ಕಾಣಿಕೆಯನ್ನು ಯೆಹೋವ ದೇವರ ಸಮ್ಮುಖದಲ್ಲಿ ನೈವೇದ್ಯ ಮಾಡಿ, ಬಲಿಪೀಠದ ಸಮೀಪಕ್ಕೆ ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು