Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:27 - ಕನ್ನಡ ಸಮಕಾಲಿಕ ಅನುವಾದ

27 ಆಕೆಗೆ ಆ ನೀರನ್ನು ಕುಡಿಸಿದ ಮೇಲೆ ಆಕೆಯು ಅಶುದ್ಧಳಾಗಿ ತನ್ನ ಗಂಡನಿಗೆ ಅಪರಾಧ ಮಾಡಿದ್ದಾಗಿದ್ದರೆ, ಶಪಿಸುವ ನೀರು ಆಕೆಯೊಳಗೆ ಸೇರಿ ಕಹಿಯಾಗುವುದು. ಅವಳ ಹೊಟ್ಟೆ ಉಬ್ಬಿ, ಅವಳ ತೊಡೆ ಕ್ಷೀಣವಾಗುವುದು. ಆಗ ಆ ಸ್ತ್ರೀ ತನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳಾಗಿರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವಳು ಅಶುದ್ಧಳಾಗಿ ಗಂಡನಿಗೆ ದ್ರೋಹಮಾಡಿದವಳಾಗಿದ್ದರೆ ಆ ನೀರನ್ನು ಕುಡಿದ ನಂತರ ಆ ನೀರು ಅವಳೊಳಗೆ ಸೇರಿ ವಿಷವಾಗುವುದರಿಂದ ಅವಳ ಹೊಟ್ಟೆ ಉಬ್ಬುವುದು, ಅವಳ ತೊಡೆಗಳು ಕ್ಷೀಣವಾಗಿ ಹೋಗುವವು. ಆಗ ಆ ಸ್ತ್ರೀಯು ತನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳಾಗುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅವಳು ದೋಷಿಯಾಗಿ ಗಂಡನಿಗೆ ದ್ರೋಹವೆಸಗಿದ್ದರೆ ಕುಡಿದ ಶಾಪಕರವಾದ ಆ ನೀರು ಅವಳೊಳಗೆ ಸೇರಿ ವಿಷವಾಗುವುದು. ಈ ಕಾರಣ ಅವಳ ಹೊಟ್ಟೆ ಉಬ್ಬುವುದು. ಅವಳ ಜನನೇಂದ್ರಿಯಗಳು ಬತ್ತಿಹೋಗುವುವು. ಆಕೆ ತನ್ನ ಜನರ ಮಧ್ಯೆ ಶಾಪಗ್ರಸ್ತಳಾಗುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವಳು ದೋಷಿಯಾಗಿ ಗಂಡನಿಗೆ ದ್ರೋಹಮಾಡಿದವಳಾಗಿದ್ದರೆ ಕುಡಿದನಂತರ ಶಾಪಕರವಾದ ಆ ನೀರು ಅವಳೊಳಗೆ ಸೇರಿ ವಿಷವಾಗುವದರಿಂದ ಅವಳ ಹೊಟ್ಟೆ ಉಬ್ಬುವದು, ಅವಳ ತೊಡೆಗಳು ಕ್ಷೀಣವಾಗಿ ಹೋಗುವವು; ಆ ಸ್ತ್ರೀಯು ತನ್ನ ಜನರೊಳಗೆ ಶಾಪಗ್ರಸ್ತಳಾಗುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಅವಳು ಅಶುದ್ಧಳಾಗಿದ್ದರೆ ಮತ್ತು ತನ್ನ ಗಂಡನಿಗೆ ವಿರುದ್ಧವಾಗಿ ಪಾಪಮಾಡಿದ್ದರೆ, ನೀರು ಅವಳಿಗೆ ಹಾನಿಯನ್ನು ಉಂಟುಮಾಡುವುದು, ನೀರು ಅವಳೊಳಗೆ ಹೋಗಿ ಅವಳಿಗೆ ಮಹಾಸಂಕಟವನ್ನು ಉಂಟುಮಾಡುವುದು. ನೀರು ಅವಳನ್ನು ಆ ಕೂಡಲೇ ಬಂಜೆಯನ್ನಾಗಿ ಮಾಡುವುದು. ಅವಳು ತನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳಾಗಿರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:27
18 ತಿಳಿವುಗಳ ಹೋಲಿಕೆ  

ಇಸ್ರಾಯೇಲಿನ ದೇವರೂ, ಸರ್ವಶಕ್ತರೂ ಆದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನನ್ನ ರೌದ್ರ ಕೋಪಾಗ್ನಿಯು ಯೆರೂಸಲೇಮಿನ ಮೇಲೆ ಹೇಗೆ ಸುರಿಯಿತೋ, ಹಾಗೆಯೇ ನೀವು ಈಜಿಪ್ಟಿನಲ್ಲಿ ಕಾಲಿಟ್ಟ ಕೂಡಲೇ, ನನ್ನ ಕೋಪಾಗ್ನಿ ನಿಮ್ಮ ಮೇಲೆಯೂ ಸುರಿಯುವುದು. ನೀವು ಅಪವಾದ, ಅಪಹಾಸ್ಯಕ್ಕೂ, ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವಿರಿ. ಈ ಸ್ಥಳವನ್ನು ನೀವು ಮತ್ತೆ ನೋಡಲಾರಿರಿ.’


ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ಹಿಂಸಿಸಿ, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ಭಯಕ್ಕೂ ಪರಿಹಾಸ್ಯಕ್ಕೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು.


ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ, ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ, ಭಯಪಡಬೇಡಿರಿ, ನಿಮ್ಮ ಕೈಗಳು ಬಲವಾಗಿರಲಿ.


ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ಇಟ್ಟಿರುವ ಯೆಹೂದದಲ್ಲಿ ಉಳಿದಿರುವವರನ್ನು ತೆಗೆದುಕೊಳ್ಳುತ್ತೇನೆ. ಅವರೆಲ್ಲರು ಈಜಿಪ್ಟ್ ದೇಶದಲ್ಲಿ ನಾಶವಾಗುವರು. ಖಡ್ಗದಿಂದಲೂ ಕ್ಷಾಮದಿಂದಲೂ ಅಳಿದುಹೋಗುವರು. ಚಿಕ್ಕವನು ಮೊದಲುಗೊಂಡು ದೊಡ್ಡವನವರೆಗೂ ಖಡ್ಗದಿಂದಲೂ ಕ್ಷಾಮದಿಂದಲೂ ಸಾಯುವರು. ಅಸಹ್ಯವೂ ಭಯವೂ ಶಾಪವೂ ನಿಂದೆಯೂ ಆಗುವುವು.


ಬಾಬಿಲೋನಿನಲ್ಲಿರುವ ಯೆಹೂದದ ಸೆರೆಯವರೆಲ್ಲರು ಅವರಿಂದ ಶಾಪವನ್ನು ತೆಗೆದುಕೊಂಡು, ‘ಬಾಬಿಲೋನಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಹಾಗೆಯೂ, ಅಹಾಬನ ಹಾಗೆಯೂ ಯೆಹೋವ ದೇವರು ನಿನಗೆ ಮಾಡಲಿ,’ ಎಂದು ಹೇಳುವರು.


‘ನಾನು ಅವರನ್ನು ಅಸಹ್ಯಪಡಿಸುತ್ತೇನೆ. ನಿಂದೆಗೂ, ಗಾದೆಗೂ, ಹಾಸ್ಯಕ್ಕೂ, ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.


ನಿಮ್ಮ ಹೆಸರನ್ನು ನಾನು ಆಯ್ದುಕೊಂಡವರಿಗೆ ಶಾಪವಾಗಿ ಉಳಿಸುವಿರಿ. ಹೇಗೆಂದರೆ, ಸಾರ್ವಭೌಮ ಯೆಹೋವ ದೇವರು ಅಪನಂಬಿಗಸ್ತರಾದ ನಿಮ್ಮನ್ನು ಕೊಂದುಹಾಕಿ, ತಮ್ಮ ಸೇವಕರಿಗಾದರೋ ಬೇರೆ ಹೆಸರನ್ನು ನೀಡುವರು.


ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಚೆದರಿಸುವ ಎಲ್ಲಾ ಜನಾಂಗಗಳಲ್ಲಿ ನೀವು ವಿಸ್ಮಯಕ್ಕೂ, ಗಾದೆಗೂ, ಹಾಸ್ಯಕ್ಕೂ ಗುರಿಯಾಗುವಿರಿ.


ಆದರೆ ಮುಖ್ಯವಾಗಿ ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವರು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ. ದುರಹಂಕಾರದಿಂದ ಸ್ವರ್ಗೀಯ ಜೀವಿಗಳನ್ನು ದೂಷಿಸುತ್ತಾರೆ.


ಕೆಲವರಿಗೆ ನಾವು ಮರಣದ ವಾಸನೆಯಾಗಿದ್ದೇವೆ. ಇತರರಿಗೆ ಜೀವವನ್ನು ಹುಟ್ಟಿಸುವ ವಾಸನೆಯಾಗಿರುತ್ತೇವೆ. ಇಂಥ ಸೇವೆಗೆ ಸಮರ್ಥರು ಯಾರು?


ಆದ್ದರಿಂದ ಈಗ ನೀವು ನಾಚಿಕೆ ಪಟ್ಟುಕೊಳ್ಳುತ್ತಿರುವ ಸಂಗತಿಗಳಿಂದ ನಿಮಗಾದ ಲಾಭವೇನು? ಅವು ಮರಣದಲ್ಲಿ ಸಮಾಪ್ತವಾಗುತ್ತವೆ!


ಕೆಟ್ಟ ಹೆಂಗಸಿನ ಹೃದಯವು ಬೋನೂ ಬಲೆಯೂ ಆಗಿರುತ್ತದೆ. ಅವಳ ಕೈ ಸಂಕೋಲೆ ಆಗಿರುತ್ತದೆ. ಇದು ಮರಣಕ್ಕಿಂತಲೂ ಕಠೋರವಾದದ್ದು ಎಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸುವವನು, ಅವಳಿಂದ ತಪ್ಪಿಸಿಕೊಳ್ಳುವನು. ಆದರೆ ಪಾಪಿಯು ಅವಳ ಕೈಗೆ ಸಿಕ್ಕಿಬೀಳುವನು.


ಆದರೆ ನೀನು ನಿನ್ನ ಗಂಡನನ್ನು ಬಿಟ್ಟು, ಜಾರತ್ವ ಮಾಡಿ ಅಶುದ್ಧಳಾಗಿದ್ದರೆ, ನಿನ್ನ ಗಂಡನನ್ನು ಬಿಟ್ಟು, ಮತ್ತೊಬ್ಬನು ನಿನ್ನ ಸಂಗಡ ಮಲಗಿದ್ದರೆ,


ಆದರೆ ಆ ಸ್ತ್ರೀ ಅಶುದ್ಧಳಲ್ಲದೆ ಶುದ್ಧಳಾಗಿದ್ದರೆ, ಅವಳು ನಿರಪರಾಧಿಯಾಗಿದ್ದು ಸಂತಾನವನ್ನು ಪಡೆಯುವಳು.


ಅವನು ತನ್ನ ವಸ್ತ್ರದಂತೆ ಶಾಪವನ್ನು ಹೊದ್ದುಕೊಂಡನು; ಅದು ನೀರಿನಂತೆ ಅವನ ಅಂತರಂಗದಲ್ಲಿಯೂ, ಎಣ್ಣೆಯಂತೆ ಅವನ ಎಲುಬುಗಳಲ್ಲಿಯೂ ಸೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು