Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:29 - ಕನ್ನಡ ಸಮಕಾಲಿಕ ಅನುವಾದ

29 “ ‘ಸಂಶಯ ಪರಿಹಾರದ ನಿಯಮವು ಇದೇ. ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವ ಮಾಡಿ, ಅಶುದ್ಧಳಾಗಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾದರೆ ಇಂತಹ ವ್ಯಭಿಚಾರದ ಸಂಶಯವನ್ನು ಪರಿಹರಿಸುವ ನಿಯಮ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ವ್ಯಭಿಚಾರ ಸಂಶಯವನ್ನು ಪರಿಹರಿಸುವ ವಿಧಿ ಇದುವೆ. ಹೆಂಡತಿಯಾದವಳು ಗಂಡನ ಸ್ವಾಧೀನದಲ್ಲಿದ್ದರೂ ಪಾತಿವ್ರತ್ಯವನ್ನು ತೊರೆದು ಜಾರತ್ವ ಮಾಡಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇದೇ ವ್ಯಭಿಚಾರಸಂಶಯವನ್ನು ಪರಿಹರಿಸುವ ವಿಧಿ. ಹೆಂಡತಿಯಾದವಳು ಗಂಡನ ಸ್ವಾಧೀನದಲ್ಲಿದ್ದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಇದೇ ವ್ಯಭಿಚಾರ ಸಂಶಯವನ್ನು ಪರಿಹರಿಸುವ ವಿಧಿ. ಗಂಡನ ಸ್ವಾಧೀನದಲ್ಲಿರುವ ಹೆಂಡತಿಯು

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:29
12 ತಿಳಿವುಗಳ ಹೋಲಿಕೆ  

ಯಾಜಕನು ಅವಳನ್ನು ಪ್ರಮಾಣ ಮಾಡಿಸಿ, ಸ್ತ್ರೀಗೆ ಹೇಳಬೇಕಾದದ್ದು, “ಮದುವೆಯಾಗಿ ಗಂಡನೊಂದಿಗೆ ಸಂಸಾರ ನಡೆಸುವಾಗ, ಒಬ್ಬ ಪರಪುರುಷನು ನಿನ್ನ ಸಂಗಡ ಮಲಗಿರದಿದ್ದರೆ, ನಿನ್ನ ಗಂಡನನ್ನು ಬಿಟ್ಟು ನೀನು ಜಾರತ್ವ ಮಾಡದೆ ಇದ್ದರೆ, ಶಾಪವನ್ನು ಉಂಟುಮಾಡುವ ಈ ನೀರು ನಿನಗೆ ಯಾವ ಹಾನಿಮಾಡುವುದಿಲ್ಲ.


“ಇಸ್ರಾಯೇಲರಿಗೆ ಹೀಗೆ ಹೇಳು, ‘ಯಾವನ ಹೆಂಡತಿಯಾದರೂ ದಾರಿತಪ್ಪಿ ಅವನಿಗೆ ಅಪನಂಬಿಗಸ್ತಳಾಗಿದ್ದರೆ,


ಆ ಮನುಷ್ಯನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ತರಬೇಕು. ಅವಳಿಗೋಸ್ಕರ ಕಾಣಿಕೆಯಾಗಿ ಒಂದು ಓಮರ್ ಜವೆಗೋಧಿಯ ಹಿಟ್ಟನ್ನು ತರಬೇಕು. ಅದರ ಮೇಲೆ ಎಣ್ಣೆಯನ್ನಾದರೂ ಸಾಂಬ್ರಾಣಿಯನ್ನಾದರೂ ಹಾಕಬಾರದು. ಏಕೆಂದರೆ ಅದು ಸಂಶಯವನ್ನು ಸೂಚಿಸುವುದಕ್ಕೂ ಅಪರಾಧವನ್ನು ಹೊರಪಡಿಸುವುದಕ್ಕೂ ಜ್ಞಾಪಕಕ್ಕೆ ತರುವ ಕಾಣಿಕೆಯೂ ಆಗಿದೆ.


ಉಣ್ಣೆ ಬಟ್ಟೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ, ನೇಯ್ಗೆಯಲ್ಲಾಗಲಿ, ಹಣಿಗೆಯಲ್ಲಾಗಲಿ, ತೊಗಲಿನ ವಸ್ತುವಿನ್ನಾಗಲಿ ಬೂಜು ಹಿಡಿದಿದ್ದರೆ ಪಾಲಿಸತಕ್ಕ ನಿಯಮಗಳಿವು. ಅದನ್ನು ಶುದ್ಧವೆಂದು ಇಲ್ಲವೆ ಅಶುದ್ಧವೆಂದು ನುಡಿಯುವುದಕ್ಕೆ ವಿಧಿಯು ಇಲ್ಲವೆ ಅಶುದ್ಧವೆಂದು ನುಡಿಯುವುದಕ್ಕೆ ವಿಧಿಯು ಇದೇ.


“ ‘ಪ್ರಾಣಿಗಳು, ಪಕ್ಷಿಗಳು, ನೀರಿನಲ್ಲಿರುವ ಮತ್ತು ನೆಲದ ಮೇಲೆ ತೆವಳುವ ಪ್ರತಿಯೊಂದು ಜೀವಿಗಳಿಗೆ ಕುರಿತಾದ ನಿಯಮವು ಇದೇ.


“ ‘ಅವನು ಯೆಹೋವ ದೇವರಿಗೆ ಸಮರ್ಪಿಸಬೇಕಾದ ಸಮಾಧಾನದ ಬಲಿಗಳ ನಿಯಮವು ಇದೇ.


ಆದರೆ ಆ ಸ್ತ್ರೀ ಅಶುದ್ಧಳಲ್ಲದೆ ಶುದ್ಧಳಾಗಿದ್ದರೆ, ಅವಳು ನಿರಪರಾಧಿಯಾಗಿದ್ದು ಸಂತಾನವನ್ನು ಪಡೆಯುವಳು.


ಅಥವಾ ಪುರುಷನು ಸಂಶಯಗೊಂಡು ಅವನು ತನ್ನ ಹೆಂಡತಿ ಮೇಲೆ ರೋಷಗೊಂಡಿದ್ದರೆ, ಅವನು ತನ್ನ ಹೆಂಡತಿಯನ್ನು ಯೆಹೋವ ದೇವರ ಸಮ್ಮುಖದಲ್ಲಿ ನಿಲ್ಲಿಸಲಿ. ಆಗ ಯಾಜಕನು ಅವಳಿಗೆ ಈ ಸಮಸ್ತ ಆಜ್ಞೆಗಳ ಪ್ರಕಾರ ಮಾಡುವನು.


ನೀವು ನಿಮ್ಮ ಖಡ್ಗದ ಮೇಲೆ ಭರವಸೆ ಇಟ್ಟು ಅಸಹ್ಯವಾದ ಕೆಲಸಗಳನ್ನು ಮಾಡುವಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ನಿಮ್ಮ ನೆರೆಯವನ ಹೆಂಡತಿಯನ್ನು ಕೆಡಿಸುವಿರಿ. ಹೀಗಾದರೆ ನೀವು ದೇಶವನ್ನು ಸ್ವಾಧೀನಪಡಿಸಿಕೊಂಡಿರೇನು?’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು