Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:9 - ಕನ್ನಡ ಸಮಕಾಲಿಕ ಅನುವಾದ

9 ಇಸ್ರಾಯೇಲರು ತರುವ ಸಕಲ ಪರಿಶುದ್ಧವಾದ ಕಾಣಿಕೆಗಳೆಲ್ಲಾ ಯಾಜಕನಿಗೇ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇಸ್ರಾಯೇಲರು ಪರಿಶುದ್ಧವಾದ ವಸ್ತುಗಳಿಂದ ಪ್ರತ್ಯೇಕಿಸಿ ತರುವ ಕಾಣಿಕೆಗಳೆಲ್ಲಾ ಯಾಜಕನಿಗೇ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇಸ್ರಯೇಲಿನ ಜನರು ಪ್ರತ್ಯೇಕಿಸಿ ಯಾಜಕನಿಗೆ ಒಪ್ಪಿಸುವ ಪವಿತ್ರ ವಸ್ತುಗಳೆಲ್ಲವೂ ಯಾಜಕನವುಗಳಾಗಿಯೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇಸ್ರಾಯೇಲ್ಯರು ಪ್ರತ್ಯೇಕಿಸಿ ಯಾಜಕನಿಗೆ ಒಪ್ಪಿಸುವ ದೇವರ ವಸ್ತುಗಳೆಲ್ಲಾ ಯಾಜಕನವುಗಳಾಗಿಯೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9-10 “ಒಬ್ಬನು ದೇವರಿಗೆ ವಿಶೇಷ ಕಾಣಿಕೆಯನ್ನು ಅರ್ಪಿಸಿದರೆ, ಅದನ್ನು ಸ್ವೀಕರಿಸುವ ಯಾಜಕನು ತನಗಾಗಿ ಅದನ್ನು ಇಟ್ಟುಕೊಳ್ಳಬಹುದು. ಅದು ಅವನದಾಗಿರುತ್ತದೆ. ಒಬ್ಬನು ಈ ವಿಶೇಷ ಕಾಣಿಕೆಗಳನ್ನು ಕೊಡಬೇಕಾಗಿಲ್ಲ. ಆದರೆ ಅವನು ಅವುಗಳನ್ನು ಕೊಟ್ಟರೆ ಅವು ಯಾಜಕನಿಗೆ ಸೇರುತ್ತವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:9
19 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಯೆಹೋವ ದೇವರಿಗೆ ನೈವೇದ್ಯ ಮಾಡುವ ಪರಿಶುದ್ಧವಾದ ಬಲಿಗಳನ್ನೆಲ್ಲಾ ನಿನಗೂ ನಿನ್ನ ಪುತ್ರಪುತ್ರಿಯರಿಗೂ ಕ್ರಮ ಪ್ರಕಾರವಾದ ಭಾಗವಾಗಿ ಕೊಟ್ಟಿದ್ದೇನೆ. ಇದು ಯೆಹೋವ ದೇವರ ಮುಂದೆ ನಿನಗೂ ನಿನ್ನ ಸಂಗಡ ಇರುವ ನಿನ್ನ ಸಂತತಿಗೂ ಶಾಶ್ವತವಾದ ಉಪ್ಪಿನ ಒಡಂಬಡಿಕೆಯಾಗಿರಬೇಕು,” ಎಂದರು.


ಅದು ಆರೋನನಿಗೂ ಅವನ ಪುತ್ರರಿಗೂ ಇಸ್ರಾಯೇಲರ ಕಡೆಯಿಂದ ನಿತ್ಯವಾಗಿ ಕೊಡುವ ಭಾಗವಾಗಿರಬೇಕು. ಏಕೆಂದರೆ ಅದು ನೈವೇದ್ಯವಾಗಿದೆ. ಇಸ್ರಾಯೇಲರ ಸಮಾಧಾನದ ಬಲಿಗಳ ಅರ್ಪಣೆಗಳಿಂದ ಅವರು ಯೆಹೋವ ದೇವರಿಗೆ ನೈವೇದ್ಯ ಮಾಡುವಂಥದ್ದು ಆಗಿರಬೇಕು.


ನೀವು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ದಹನ ಮಾಡಿದ ಯೆಹೋವ ದೇವರ ಯಜ್ಞಗಳಲ್ಲಿ ಇವು ನಿನಗೂ ನಿನ್ನ ಪುತ್ರರಿಗೂ ಸಲ್ಲತಕ್ಕವುಗಳು. ಏಕೆಂದರೆ ಹಾಗೆ ನನಗೆ ಆಜ್ಞೆಯಾಗಿದೆ.


ಪಾಪ ಪರಿಹಾರದ ಬಲಿಯನ್ನು ಮಾಡುವ ಯಾಜಕನು ಅದನ್ನು ತಿನ್ನಬೇಕು. ಅದನ್ನು ಸಭೆಯ ದೇವದರ್ಶನದ ಗುಡಾರದ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು.


ಬಲಭುಜವನ್ನು ನೀವು ಯಾಜಕನಿಗೆ ಸಮಾಧಾನದ ಬಲಿಯಾಗಿ ಕೊಡಬೇಕು.


ಏಕೆಂದರೆ ನೈವೇದ್ಯ ಮಾಡಿದ ಎದೆಯನ್ನು ಮತ್ತು ನಿವಾಳಿಸುವ ಭುಜವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಬಲಿಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಯಾಜಕನಾದ ಆರೋನನಿಗೂ, ಅವನ ಪುತ್ರರಿಗೂ ಇಸ್ರಾಯೇಲರಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಅವರಿಗೆ ಕೊಟ್ಟಿದ್ದೇನೆ.’ ”


ನೀನೂ, ನಿನ್ನೊಂದಿಗೆ ನಿನ್ನ ಪುತ್ರರೂ ನಿನ್ನ ಪುತ್ರಿಯರೂ ನೈವೇದ್ಯ ಮಾಡಿದ ಎದೆಯ ಭಾಗವನ್ನೂ, ಅರ್ಪಿಸುವ ತೊಡೆಯ ಭಾಗವನ್ನೂ ಶುದ್ಧ ಸ್ಥಳದಲ್ಲಿ ತಿನ್ನಬೇಕು. ಏಕೆಂದರೆ ಅದು ಇಸ್ರಾಯೇಲರ ಸಮಾಧಾನದ ಬಲಿಗಳಲ್ಲಿ ನಿನಗೂ ನಿನ್ನ ಪುತ್ರರಿಗೂ ಸಲ್ಲುವಂಥವುಗಳಾಗಿವೆ.


ನೈವೇದ್ಯವಾಗಿ ಅರ್ಪಿಸುವ ಎದೆಯನ್ನೂ ತೊಡೆಯನ್ನೂ ಅವರು ಬೆಂಕಿಯಿಂದ ಮಾಡಿದ ಕೊಬ್ಬಿನ ಸಮರ್ಪಣೆಗಳನ್ನು ನೈವೇದ್ಯವಾಗಿ ನಿವಾಳಿಸುವುದಕ್ಕೆ ಯೆಹೋವ ದೇವರ ಸನ್ನಿಧಿಯಲ್ಲಿ ತರಬೇಕು. ಯೆಹೋವ ದೇವರು ಆಜ್ಞಾಪಿಸಿದ ಹಾಗೆ ಅದು ನಿನಗೂ, ನಿನ್ನೊಂದಿಗೆ ನಿನ್ನ ಪುತ್ರರಿಗೂ ನಿತ್ಯ ಕಟ್ಟಳೆಯಾಗಿ ಸಿಕ್ಕಬೇಕು,” ಎಂದು ಹೇಳಿದನು.


ಆದರೆ ಅಪರಾಧಕ್ಕೆ ಬದಲು ಕೊಡುವುದಕ್ಕೆ ಆ ಮನುಷ್ಯನಿಗೆ ಸಂಬಂಧಿಕನು ಇಲ್ಲದಿದ್ದರೆ ಅದು ಯೆಹೋವ ದೇವರಿಗೆ ಸೇರಬೇಕು. ಅದು ದೋಷಪರಿಹಾರಕ್ಕಾಗಿ ಅರ್ಪಿಸಲಾಗುವ ಪ್ರಾಯಶ್ಚಿತ್ತದ ಟಗರು, ಇವೆರಡೂ ಯಾಜಕನಿಗೆ ಸೇರಬೇಕು.


ಮೋಶೆಯು ಯೆಹೋವ ದೇವರಿಗೆ ಪಡೆಯುವ ಕಪ್ಪವನ್ನು ಯಾಜಕನಾದ ಎಲಿಯಾಜರನಿಗೆ ಯೆಹೋವ ದೇವರು ಆಜ್ಞಾಪಿಸಿದ ಪ್ರಕಾರ ಕೊಟ್ಟನು.


ನಿಮಗಿರುವ ಪರಿಶುದ್ಧವಾದವುಗಳನ್ನೂ ಹರಕೆಮಾಡಿದ್ದನ್ನೂ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಬರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು