Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:18 - ಕನ್ನಡ ಸಮಕಾಲಿಕ ಅನುವಾದ

18 “ ‘ಇದಲ್ಲದೆ ನಾಜೀರರು ತಮ್ಮ ಸಮರ್ಪಣೆಯನ್ನು ಸಂಕೇತಿಸುವ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಂಡು, ಪ್ರತ್ಯೇಕಿಸಿದ ತಮ್ಮ ತಲೆಗೂದಲನ್ನು ತೆಗೆದುಕೊಂಡು, ಸಮಾಧಾನದ ಬಲಿಗಳ ಬಲಿಯ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ನಾಜೀರನು ತನ್ನ ಸಮರ್ಪಣೆಯ ದೀಕ್ಷೆಯನ್ನು ಸೂಚಿಸುವ ತಲೆಯ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಂಡು, ಆ ಕೂದಲನ್ನು ಸಮಾಧಾನಯಜ್ಞದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಬಳಿಕ ನಾಜೀರ ವ್ರತಸ್ಥನು ತನ್ನ ದೀಕ್ಷೆಯನ್ನು ಸೂಚಿಸುವ ತಲೆಯ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಳ್ಳಬೇಕು. ಆ ಕೂದಲನ್ನು ಸಮಾಧಾನ ಬಲಿಯ ದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಗ ನಾಜೀರನು ತನ್ನ ದೀಕ್ಷೆಯನ್ನು ಸೂಚಿಸುವ ತಲೆಯಕೂದಲನ್ನು ದೇವದರ್ಶನದ ಗುಡಾರದ ಬಾಗಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಂಡು ಆ ಕೂದಲನ್ನು ಸಮಾಧಾನಯಜ್ಞದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ನಾಜೀರವ್ರತವನ್ನು ಆಚರಿಸುತ್ತಿರುವವನು ಯೆಹೋವನಿಗಾಗಿ ಪ್ರತಿಷ್ಠಿಸಿದ್ದ ತಲೆಯ ಕೂದಲನ್ನು ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿ ಕ್ಷೌರಮಾಡಿಸಿಕೊಳ್ಳಬೇಕು. ಆ ಕೂದಲನ್ನು ಸಮಾಧಾನಯಜ್ಞದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:18
9 ತಿಳಿವುಗಳ ಹೋಲಿಕೆ  

ನೀನು ಇವರನ್ನು ಕರೆದುಕೊಂಡು ಹೋಗಿ, ಅವರೊಂದಿಗೆ ನಿನ್ನನ್ನು ಶುದ್ಧಿಮಾಡಿಕೊಂಡು, ಅವರು ತಮ್ಮ ಕ್ಷೌರ ಮಾಡಿಸಿಕೊಳ್ಳುವ ಖರ್ಚನ್ನು ನೀನೇ ಪೂರೈಸು. ಆಗ ನಿನ್ನ ವಿಷಯದಲ್ಲಿ ಕೇಳಿರುವ ಸಂಗತಿಗಳು ನಿಜವಲ್ಲ ಮತ್ತು ನೀನು ಮೋಶೆಯ ನಿಯಮಕ್ಕನುಸಾರವಾಗಿ ನಡೆದುಕೊಳ್ಳುತ್ತೀ ಎಂದು ಎಲ್ಲರಿಗೂ ತಿಳಿದುಬರುವುದು.


“ ‘ಅವರ ಬಳಿಯಲ್ಲಿ ಯಾರಾದರೂ ಆಕಸ್ಮಿಕವಾಗಿ ಸತ್ತದ್ದರಿಂದ ಅವರ ತಲೆಯ ಕೂದಲು ಅಶುದ್ಧವಾದರೆ, ಅವರು ಶುದ್ಧರಾಗುವ ದಿವಸದಲ್ಲಿ ಅಂದರೆ ಏಳನೆಯ ದಿವಸದಲ್ಲಿ ತಮ್ಮ ತಲೆಯನ್ನು ಬೋಳಿಸಬೇಕು.


ಇನ್ನು ಕೆಲವು ದಿನ ಪೌಲನು ಅಲ್ಲಿಯೇ ಉಳಿದುಕೊಂಡನು. ಅನಂತರ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಕೆಂಖ್ರೆಯ ಎಂಬ ಸ್ಥಳದಲ್ಲಿ ತಲೆ ಕೂದಲನ್ನು ಕ್ಷೌರಮಾಡಿಸಿಕೊಂಡು ತಾನು ಹೊತ್ತ ಹರಕೆ ಪೂರೈಸಿದ ಮೇಲೆ ಸಿರಿಯಕ್ಕೆ ನೌಕೆ ಪ್ರಯಾಣಮಾಡಿದನು. ಪ್ರಿಸ್ಕಿಲ್ಲ ಮತ್ತು ಅಕ್ವಿಲರು ಅವನ ಜೊತೆಯಲ್ಲಿ ಹೊರಟರು.


ತಮ್ಮ ಕೃಪಾ ಮಹಿಮೆಯ ಸ್ತುತಿಗಾಗಿಯೇ ಇವುಗಳನ್ನು ದೇವರು ತಾವು ಪ್ರೀತಿಸುವ ಕ್ರಿಸ್ತನಲ್ಲಿ ನಮಗೆ ಉಚಿತವಾಗಿ ದಯಪಾಲಿಸಿದ್ದಾರೆ.


ಮರುದಿನ ಪೌಲನು ಆ ನಾಲ್ವರೊಂದಿಗೆ ತನ್ನನ್ನು ಶುದ್ಧೀಕರಿಸಿಕೊಂಡನು. ಅನಂತರ ಶುದ್ಧಾಚಾರ ಮುಗಿಯುವ ದಿನಗಳ ಬಗ್ಗೆ ತಿಳಿಸುವುದಕ್ಕಾಗಿ ದೇವಾಲಯಕ್ಕೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಅರ್ಪಣೆಯು ಆಗಬೇಕೆಂಬುದರ ಬಗ್ಗೆಯೂ ಸೂಚಿಸಿದನು.


ಅದೇ ರೀತಿಯಾಗಿ, ನಿಮಗೆ ಆಜ್ಞಾಪಿಸಿದವುಗಳನ್ನೆಲ್ಲಾ ನೀವು ಮಾಡಿದ ಮೇಲೆ, ‘ನಾವು ಅಯೋಗ್ಯರಾದ ಆಳುಗಳಷ್ಟೇ, ನಾವು ಮಾಡಬೇಕಾದ ಕರ್ತವ್ಯವನ್ನೇ ಮಾಡಿದ್ದೇವೆ ಎಂದು ನೀವು ಹೇಳಿರಿ,’ ” ಎಂದು ಹೇಳಿದರು.


“ ‘ಅವರ ನಾಜೀರ ವ್ರತದ ದಿನಗಳಲ್ಲೆಲ್ಲಾ ಕ್ಷೌರಮಾಡಿಸಿಕೊಳ್ಳಬಾರದು. ಅವರು ಯೆಹೋವ ದೇವರಿಗೆ ತಮ್ಮನ್ನು ಪ್ರತ್ಯೇಕಿಸಿಕೊಂಡ ದಿವಸಗಳು ಪೂರ್ತಿಯಾಗುವವರೆಗೆ ಅವರು ಪರಿಶುದ್ಧರಾಗಿರುವರು, ಅವರು ತಮ್ಮ ತಲೆಗೂದಲನ್ನು ಕತ್ತರಿಸದೇ ಬೆಳೆಯಬಿಡಬೇಕು.


ಆದ್ದರಿಂದ ನಾವು ನಿನಗೆ ಹೇಳುವಂತೆ ಮಾಡು, ಹರಕೆ ಹೊತ್ತ ನಾಲ್ವರು ನಮ್ಮಲ್ಲಿ ಇದ್ದಾರೆ.


ಆ ಟಗರನ್ನು ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯ ಸಂಗಡ ಯೆಹೋವ ದೇವರಿಗೆ ಸಮಾಧಾನದ ಬಲಿಯಾಗಿ ಅರ್ಪಿಸಬೇಕು. ಇದಲ್ಲದೆ ಯಾಜಕನು ಅವರ ಧಾನ್ಯವನ್ನೂ, ಪಾನದ್ರವ್ಯವನ್ನೂ ಅರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು