Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:21 - ಕನ್ನಡ ಸಮಕಾಲಿಕ ಅನುವಾದ

21 “ ‘ಪ್ರಮಾಣ ಮಾಡಿಕೊಂಡ ನಾಜೀರರ ನಿಯಮವು ಇದೇ. ಸಂಬಂಧಪಟ್ಟದ್ದರೊಂದಿಗೆ ತಮ್ಮ ಕೈಲಾದ ಮಟ್ಟಿಗೆ ಅವರು ತಮ್ಮ ಪ್ರತ್ಯೇಕಿಸುವಿಕೆಗಾಗಿ ಯೆಹೋವ ದೇವರಿಗೆ ಕಾಣಿಕೆ ಅರ್ಪಿಸತಕ್ಕದ್ದು. ನಾಜೀರ ವ್ರತದ ಕ್ರಮದ ಪ್ರಕಾರ, ನೀವು ಮಾಡಿದ ಪ್ರಮಾಣಕ್ಕನುಸಾರವಾಗಿ ತಮ್ಮ ವ್ರತದ ಕ್ರಮಗಳನ್ನು ನೆರವೇರಿಸಬೇಕು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹರಕೆಮಾಡಿಕೊಂಡ ನಾಜೀರರ ವ್ರತ ನಿಯಮವು ಇದೇ. ಅವರು ತಮ್ಮ ವ್ರತಪೂರ್ತಿಗಾಗಿ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆ ಇದೇ. ಅವರು ತಮ್ಮ ಶಕ್ತಿಗನುಸಾರ ಹೆಚ್ಚಾಗಿಯೂ ಕೊಡಬಹುದು. ಆದರೆ ತಾವು ಕೊಡುತ್ತೆವೆಂದು ಹರಕೆಮಾಡಿದಷ್ಟು ವ್ರತವಿಧಿಗನುಸಾರವಾಗಿ ಕೊಡಲೇಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇದುವೇ ನಾಜೀರ ವ್ರತಸ್ಥರು ಅನುಸರಿಸಬೇಕಾದ ವಿಧಿ. ತಮ್ಮ ವ್ರತಪೂರ್ತಿಗಾಗಿ ಸರ್ವೇಶ್ವರನಿಗೆ ಅವರು ಸಮರ್ಪಿಸಬೇಕಾದ ಕಾಣಿಕೆ. ಅವರು ತಮ್ಮ ಶಕ್ತಿಗನುಸಾರ ಹೆಚ್ಚಾಗಿಯೂ ಕೊಡಬಹುದು. ಆದರೆ ತಾವು ಕೊಡುತ್ತೇವೆಂದು ಹರಕೆ ಮಾಡಿದಷ್ಟನ್ನು ವ್ರತ ವಿಧಿಗನುಸಾರ ಕೊಡಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇದೇ ನಾಜೀರರ ವ್ರತವಿಧಿ. ಅವರು ತಮ್ಮ ವ್ರತಪೂರ್ತಿಗಾಗಿ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆ ಇದೇ. ಅವರು ತಮ್ಮ ಶಕ್ತ್ಯನುಸಾರ ಹೆಚ್ಚಾಗಿಯೂ ಕೊಡಬಹುದು; ಆದರೆ ತಾವು ಕೊಡುತ್ತೇವೆಂದು ಹರಕೆಮಾಡಿದಷ್ಟು ವ್ರತವಿಧಿಗನುಸಾರವಾಗಿ ಕೊಡಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಇದೇ ನಾಜೀರರ ವ್ರತವಿಧಿ. ಅವರು ತಮ್ಮ ವ್ರತ ಪೂರ್ತಿಗಾಗಿ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆ ಇದೇ. ಅವರು ತಮ್ಮ ಶಕ್ತಿಮೀರಿ ಕೊಡಬಹುದು. ಆದರೆ ತಾವು ಕೊಡುತ್ತೇವೆಂದು ಹರಕೆ ಮಾಡಿದಷ್ಟನ್ನು ವ್ರತವಿಧಿಗನುಸಾರವಾಗಿ ಕೊಡಲೇಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:21
7 ತಿಳಿವುಗಳ ಹೋಲಿಕೆ  

ಇದಲ್ಲದೆ ಒಳ್ಳೆಯದನ್ನು ಮಾಡುವುದನ್ನೂ ಪರರೊಡನೆ ಹಂಚಿಕೊಳ್ಳುವುದನ್ನೂ ಮರೆಯಬೇಡಿರಿ. ಏಕೆಂದರೆ ಇಂಥಾ ಯಜ್ಞಗಳನ್ನು ದೇವರು ಮೆಚ್ಚುತ್ತಾರೆ.


ವಾಕ್ಯದಲ್ಲಿ ಉಪದೇಶ ಹೊಂದುವವನು, ಉಪದೇಶ ಮಾಡುವವನೊಂದಿಗೆ ಒಳ್ಳೆಯದನ್ನೆಲ್ಲಾ ಹಂಚಿಕೊಳ್ಳಲಿ.


ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸಕ್ಕಾಗಿ ಬೊಕ್ಕಸಕ್ಕೆ 400 ಕಿಲೋಗ್ರಾಂ ಬಂಗಾರವನ್ನೂ, 2,800 ಕಿಲೋಗ್ರಾಂ ಬೆಳ್ಳಿಯನ್ನೂ, ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು.


“ ‘ಸಂಶಯ ಪರಿಹಾರದ ನಿಯಮವು ಇದೇ. ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವ ಮಾಡಿ, ಅಶುದ್ಧಳಾಗಿದ್ದರೆ,


“ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ: ‘ಪುರುಷನಾದರೂ, ಸ್ತ್ರೀಯಾದರೂ ಯೆಹೋವ ದೇವರಿಗೆ ಪ್ರತ್ಯೇಕಿಸಿಕೊಳ್ಳುವ ಹಾಗೆ ನಾಜೀರ ವ್ರತ ಕೈಗೊಂಡರೆ,


ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸುವ ಅರ್ಪಣೆಗಾಗಿ ಯೆಹೋವ ದೇವರ ಎದುರಿನಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಸಂಗಡ ಅದು ಯಾಜಕನಿಗೆ ಪರಿಶುದ್ಧವಾಗಿದೆ. ಆಮೇಲೆ ನಾಜೀರರು ದ್ರಾಕ್ಷಾರಸವನ್ನು ಕುಡಿಯಬಹುದು.


ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು