Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:26 - ಕನ್ನಡ ಸಮಕಾಲಿಕ ಅನುವಾದ

26 ಯೆಹೋವ ದೇವರು ತಮ್ಮ ಮುಖವನ್ನು ನಿಮ್ಮ ಕಡೆಗೆ ಎತ್ತಿ, ನಿಮಗೆ ಸಮಾಧಾನ ಅನುಗ್ರಹಿಸಲಿ.” ’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ’ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಸರ್ವೇಶ್ವರ ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:26
24 ತಿಳಿವುಗಳ ಹೋಲಿಕೆ  

ಯೆಹೋವ ದೇವರೇ, “ನಮಗೆ ಒಳ್ಳೆಯದನ್ನು ಮಾಡುವವರು ಯಾರು?” ಎಂದು ಕೇಳುವವರು ಅನೇಕರಿದ್ದಾರೆ. ನಿಮ್ಮ ಮುಖಪ್ರಕಾಶವು ನಮ್ಮ ಮೇಲೆ ಬೆಳಗಲಿ.


ನಮಗೆ ಕರ್ತ ಆಗಿರುವ ಯೇಸು ಈ ಸಮಾಧಾನದಲ್ಲಿ ತಾವೇ ಸದಾಕಾಲದಲ್ಲಿಯೂ ಸಕಲ ವಿಧದಲ್ಲಿಯೂ ನಿಮಗೆ ಸಮಾಧಾನವನ್ನು ದಯಪಾಲಿಸಲಿ. ಕರ್ತದೇವರು ನಿಮ್ಮೆಲ್ಲರೊಂದಿಗೆ ಇರಲಿ.


ಯೆಹೋವ ದೇವರು ತಮ್ಮ ಜನರಿಗೆ ಬಲವನ್ನು ಕೊಡುವರು; ಯೆಹೋವ ದೇವರು ತಮ್ಮ ಜನರನ್ನು ಸಮಾಧಾನದಿಂದ ಆಶೀರ್ವದಿಸುವರು.


ನಿರೀಕ್ಷೆಯ ದೇವರು, ನೀವು ಪವಿತ್ರಾತ್ಮನ ಶಕ್ತಿಯಿಂದ ನಿಮ್ಮ ನಿರೀಕ್ಷೆಯನ್ನು ಹೆಚ್ಚಿಸಿ, ನೀವು ನಿಮ್ಮ ವಿಶ್ವಾಸದಿಂದ ಸಕಲ ಸಂತೋಷದಿಂದಲೂ ಸಮಾಧಾನದಿಂದಲೂ ಪ್ರವಾಹಿಸುವಂತೆ ಮಾಡಲಿ.


“ನನ್ನಲ್ಲಿ ನಿಮಗೆ ಸಮಾಧಾನ ಇರುವಂತೆ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟವಿರುವದು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ,” ಎಂದರು.


ನೀವು ನನಗೆ ಜೀವಮಾರ್ಗಗಳನ್ನು ತಿಳಿಯಪಡಿಸಿರುವಿರಿ; ನಿಮ್ಮ ಸನ್ನಿಧಿಯಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿರಿ.’


ದೃಢ ಮನಸ್ಸುಳ್ಳವರನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವೆ, ಏಕೆಂದರೆ ಅವರಿಗೆ ನಿನ್ನಲ್ಲಿ ಭರವಸವಿದೆ.


ಸಮಾಧಾನದ ದೇವರು ನಿಮ್ಮೆಲ್ಲರೊಂದಿಗಿರಲಿ. ಆಮೆನ್.


ಯೇಸು ತಿರುಗಿ ಅವರಿಗೆ, “ನಿಮಗೆ ಸಮಾಧಾನವಾಗಲಿ, ತಂದೆಯು ನನ್ನನ್ನು ಕಳುಹಿಸಿದಂತೆಯೇ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ,” ಎಂದರು.


ನನ್ನ ಪ್ರಾಣವೇ, ನೀನು ಏಕೆ ಕುಗ್ಗಿ ಹೋಗಿದ್ದೀ? ನನ್ನಲ್ಲಿ ನೀನು ಏಕೆ ವ್ಯಥೆಪಡುತ್ತೀ? ದೇವರನ್ನು ನಿರೀಕ್ಷಿಸು; ಅವರೇ ನನ್ನ ರಕ್ಷಕರೂ ದೇವರೂ ಆಗಿದ್ದಾರೆ. ಹೌದು, ನಾನು ದೇವರನ್ನೇ ಕೊಂಡಾಡುತ್ತಿರುವೆನು.


ಆಗ ಎಲ್ಲಾ ಗ್ರಹಿಕೆಯನ್ನೂ ಮೀರುವ ದೇವರ ಸಮಾಧಾನವು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವುದು.


“ಮಹೋನ್ನತದಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರ ಮೆಚ್ಚುಗೆ, ಮಾನವರಿಗೆ ಸಮಾಧಾನ.”


ನಾನು ತುಟಿಗಳಿಗೆ ಸ್ತೋತ್ರವನ್ನು ಉಂಟುಮಾಡುವೆನು; ದೂರವಾದವನಿಗೂ ಸಮೀಪವಾದವನಿಗೂ ಸಮಾಧಾನವಿರಲಿ, ಸಮಾಧಾನವಿರಲಿ. ನಾನು ಅವರನ್ನು ಸ್ವಸ್ಥ ಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರೇ, ನಮಗೆ ಸಮಾಧಾನವನ್ನು ವಿಧಿಸುವಿರಿ. ಏಕೆಂದರೆ ನೀವು ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದೀರಿ.


ನಿಮ್ಮ ಉತ್ಸಾಹ ಧ್ವನಿಯನ್ನು ಕೇಳಿದ ಜನರು ಧನ್ಯರು. ಯೆಹೋವ ದೇವರೇ, ನಿಮ್ಮ ಸನ್ನಿಧಿಯ ಬೆಳಕಿನಲ್ಲಿ ನಡೆಯುವವರು ಧನ್ಯರು.


ನಿರ್ದೋಷಿಯನ್ನು ಗಮನಿಸು; ಯಥಾರ್ಥನನ್ನು ನೋಡು; ಸಮಾಧಾನ ಹುಡುಕುವವರಿಗೆ ಒಳ್ಳೆಯ ಭವಿಷ್ಯವಿದೆ.


ಸರ್ವಸೃಷ್ಟಿಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಸಮಾಧಾನದ ಶುಭಸಮಾಚಾರ ಹೇಳುತ್ತಾ, ಇಸ್ರಾಯೇಲ್ ಜನರಿಗೆ ದೇವರು ಕಳುಹಿಸಿದ ವಾಕ್ಯವನ್ನು ನೀವು ತಿಳಿದಿದ್ದೀರಿ.


ಎಂಟು ದಿವಸಗಳಾದ ಮೇಲೆ ಯೇಸುವಿನ ಶಿಷ್ಯರು ಪುನಃ ಮನೆಯ ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಿಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು, “ನಿಮಗೆ ಸಮಾಧಾನವಾಗಲಿ!” ಎಂದರು.


ನಾನು ಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ. ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಅಂಜದಿರಲಿ.


ಆತನೇ ಅವರ ಸಮಾಧಾನವಾಗಿರುವನು. ಅಸ್ಸೀರಿಯದವನು ನಮ್ಮ ನಾಡಿಗೆ ಮುತ್ತಿಗೆ ಹಾಕುವಾಗ ನಮ್ಮ ಕೋಟೆಗಳ ಮೂಲಕ ಸೈನ್ಯವಾಗಿ ಹೋಗುವಾಗ ನಾವು ಅವನಿಗೆ ವಿರೋಧವಾಗಿ ಏಳು ಕುರುಬರನ್ನೂ ಎಂಟು ಸೇನಾಪತಿಗಳನ್ನೂ ಎಬ್ಬಿಸುವೆವು.


ನಮ್ಮ ಪಿತೃಗಳು ತಮ್ಮ ಖಡ್ಗದಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರಿಗೆ ಜಯ ತರಲಿಲ್ಲ; ಆದರೆ ನಿಮ್ಮ ಬಲಗೈಯೂ ನಿಮ್ಮ ತೋಳೂ ನಿಮ್ಮ ಮುಖದ ಪ್ರಕಾಶವೇ ಅವರಿಗೆ ಜಯವನ್ನು ತಂದಿತು. ಏಕೆಂದರೆ ಅವರನ್ನು ನೀವು ಪ್ರೀತಿಸಿದಿರಿ.


ತಂದೆಯಾದ ದೇವರಿಂದಲೂ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ಶಾಂತಿಯೂ ಮತ್ತು ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರಿಗೆ ಇರಲಿ.


ಹೀಗಿರುವುದರಿಂದ, ವಿಶ್ವಾಸದ ಮೂಲಕ ನೀತಿವಂತರೆಂಬ ನಿರ್ಣಯ ಹೊಂದಿದ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು