Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:3 - ಕನ್ನಡ ಸಮಕಾಲಿಕ ಅನುವಾದ

3 ದ್ರಾಕ್ಷಾರಸಕ್ಕೂ ಮದ್ಯಪಾನಕ್ಕೂ ದೂರವಾಗಿದ್ದು, ದ್ರಾಕ್ಷಾರಸದ ಹುಳಿಯನ್ನೂ ಮದ್ಯಪಾನದ ಹುಳಿಯನ್ನೂ ಕುಡಿಯದೆ, ದ್ರಾಕ್ಷಿಯಿಂದ ಮಾಡಿದ ಯಾವ ಪಾನವನ್ನಾದರೂ ಕುಡಿಯದೆ ಹಸಿಯದಾಗಲಿ, ಒಣಗಿದ್ದಾಗಲಿ ದ್ರಾಕ್ಷಿಹಣ್ಣನ್ನು ತಿನ್ನದೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ವಿಶೇಷವಾದ ಹರಕೆಯನ್ನು ಮಾಡಿದಾಗ ದ್ರಾಕ್ಷಾರಸವನ್ನೂ ಮತ್ತು ಮದ್ಯಪಾನವನ್ನೂ ಮುಟ್ಟಬಾರದು. ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯಪಾನದ ಹುಳಿಯನ್ನಾಗಲಿ ಕುಡಿಯಬಾರದು. ದ್ರಾಕ್ಷಿ ಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು. ಹಸಿ ಅಥವಾ ಒಣಗಿದ ದ್ರಾಕ್ಷಿ ಹಣ್ಣನ್ನೂ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದ್ರಾಕ್ಷಾರಸವನ್ನು ಹಾಗೂ ಮದ್ಯಪಾನವನ್ನು ಮುಟ್ಟಬಾರದು; ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯದ ಹುಳಿಯನ್ನಾಗಲಿ ಕುಡಿಯಬಾರದು. ದ್ರಾಕ್ಷಿಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು; ಹಸಿ ಅಥವಾ ಒಣಗಿದ ದ್ರಾಕ್ಷಿಹಣ್ಣನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ವಿಶೇಷವಾದ ಹರಕೆಯನ್ನು ಮಾಡಿದಾಗ ದ್ರಾಕ್ಷಾರಸವನ್ನೂ ಮದ್ಯವನ್ನೂ ಮುಟ್ಟಬಾರದು; ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯದ ಹುಳಿಯನ್ನಾಗಲಿ ಕುಡಿಯಬಾರದು; ದ್ರಾಕ್ಷೇ ಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು; ಹಸಿದಾಗಲಿ ಒಣಗಿದ್ದಾಗಲಿ ದ್ರಾಕ್ಷೇ ಹಣ್ಣನ್ನು ತಿನ್ನಬಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ಸಮಯದಲ್ಲಿ ಅವನು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಮುಟ್ಟಬಾರದು; ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯದ ಹುಳಿಯನ್ನಾಗಲಿ ಕುಡಿಯಬಾರದು; ದ್ರಾಕ್ಷಿಯ ಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು; ಹಸಿ ಅಥವಾ ಒಣ ದ್ರಾಕ್ಷಿಯನ್ನು ಸಹ ತಿನ್ನಬಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:3
15 ತಿಳಿವುಗಳ ಹೋಲಿಕೆ  

ಅವನು ಕರ್ತದೇವರ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಕುಡಿಯುವುದಿಲ್ಲ, ಅವನು ತಾಯಿಯ ಗರ್ಭದಿಂದಲೇ ಪವಿತ್ರಾತ್ಮ ಭರಿತನಾಗಿರುವನು.


ನೀರನ್ನು ಮಾತ್ರ ಕುಡಿಯದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾಗುವ ಬಲಹೀನತೆಗಳಿಗಾಗಿಯೂ ಸ್ವಲ್ಪ ದ್ರಾಕ್ಷಾರಸವನ್ನು ಉಪಯೋಗಿಸು.


ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದು ದುಷ್ಟತನಕ್ಕೆ ಎಡೆಮಾಡುತ್ತದೆ. ಆದರೆ ಪವಿತ್ರಾತ್ಮರಿಂದ ತುಂಬಿದವರಾಗಿದ್ದು,


“ಆದರೆ ನೀವು ನಾಜೀರರಿಗೆ ಕುಡಿಯಲು ದ್ರಾಕ್ಷಾರಸವನ್ನು ಕೊಟ್ಟಿರಿ. ಪ್ರವಾದಿಗಳಿಗೆ ಪ್ರವಾದಿಸಬೇಡಿರಿ ಎಂದು ಆಜ್ಞಾಪಿಸಿದಿರಿ.


ದ್ರಾಕ್ಷಿ ಗಿಡದಲ್ಲಿ ಹುಟ್ಟುವ ಒಂದನ್ನೂ ತಿನ್ನದೆ, ದ್ರಾಕ್ಷಾರಸವನ್ನೂ, ಮದ್ಯವನ್ನೂ ಕುಡಿಯದೆ, ಅಶುಚಿಯಾದ ಒಂದನ್ನೂ ತಿನ್ನದೆ ಇದ್ದು, ನಾನು ಅವಳಿಗೆ ಆಜ್ಞಾಪಿಸಿದ್ದೆಲ್ಲಾ ಕೈಗೊಳ್ಳಲಿ,” ಎಂದನು.


“ನೀನು ಸಾಯದಂತೆ ದೇವದರ್ಶನದ ಗುಡಾರಕ್ಕೆ ಬರುವಾಗ ನೀನೂ ಇಲ್ಲವೆ ನಿನ್ನ ಪುತ್ರರೂ ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಕುಡಿಯಬಾರದು. ಇದು ನಿಮ್ಮ ವಂಶಾವಳಿಯು ಇರುವವರೆಗೂ ಶಾಶ್ವತವಾಗಿರುವ ಕಟ್ಟಳೆಯಾಗಿದೆ.


ಸಕಲ ವಿಧವಾದ ಕೆಟ್ಟತನಗಳಿಗೆ ದೂರವಾಗಿರಿ.


“ನಿಮ್ಮ ಮೇಲೆ ಆ ದಿನವು ಉರುಲಿನಂತೆ ಫಕ್ಕನೆ ಬಾರದಂತೆ ನೀವು ಅತಿಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ, ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ.


ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳಲ್ಲಿಯೂ ಮುಂತಾದ ಬಾಹ್ಯಾಚಾರದ ಕ್ರಮಗಳಾಗಿದ್ದವು. ಅವು ಹೊಸ ಕ್ರಮಕಾಲದವರೆಗೆ ಮಾತ್ರ ನೇಮಕವಾಗಿದ್ದವು.


ತಮ್ಮ ನಾಜೀರತನದ ದಿವಸಗಳಲ್ಲೆಲ್ಲಾ ದ್ರಾಕ್ಷಿ ಬೀಜ ಮೊದಲುಗೊಂಡು ಸಿಪ್ಪೆಯವರೆಗೂ, ದ್ರಾಕ್ಷಿಬಳ್ಳಿಯಲ್ಲಿ ಬೆಳೆದದ್ದು ಯಾವುದನ್ನಾದರೂ ತಿನ್ನಬಾರದು.


ಆದ್ದರಿಂದ ನೀನು ದ್ರಾಕ್ಷಾರಸವನ್ನೂ ಮದ್ಯಪಾನವನ್ನೂ ಕುಡಿಯದೆ, ಅಶುಚಿಯಾದ ಒಂದನ್ನಾದರೂ ತಿನ್ನದೆ, ಎಚ್ಚರಿಕೆಯಾಗಿರಬೇಕು.


“ನಾನು ನಿಮ್ಮ ಪುತ್ರರಲ್ಲಿ ಪ್ರವಾದಿಗಳನ್ನೂ ನಿಮ್ಮ ಯೌವನಸ್ಥರಲ್ಲಿ ನಾಜೀರರನ್ನೂ ಎಬ್ಬಿಸಿದೆನು. ಇಸ್ರಾಯೇಲಿನ ಜನರೇ, ಇದು ಸರಿಯಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು