Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:4 - ಕನ್ನಡ ಸಮಕಾಲಿಕ ಅನುವಾದ

4 ತಮ್ಮ ನಾಜೀರತನದ ದಿವಸಗಳಲ್ಲೆಲ್ಲಾ ದ್ರಾಕ್ಷಿ ಬೀಜ ಮೊದಲುಗೊಂಡು ಸಿಪ್ಪೆಯವರೆಗೂ, ದ್ರಾಕ್ಷಿಬಳ್ಳಿಯಲ್ಲಿ ಬೆಳೆದದ್ದು ಯಾವುದನ್ನಾದರೂ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಹರಕೆಮಾಡಿ ಪ್ರತಿಷ್ಠಿಸಿಕೊಂಡ ದಿನಗಳಲ್ಲೆಲ್ಲಾ ದ್ರಾಕ್ಷಾಲತೆಯಿಂದ ಬೆಳೆದ ಬೀಜವನ್ನಾಗಲಿ, ಸಿಪ್ಪೆಯನ್ನಾಗಲಿ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಂಥವನು ವ್ರತ ಕೈಗೊಂಡು ತನ್ನನ್ನೇ ಪ್ರತಿಷ್ಠಿಸಿಕೊಂಡ ದಿನಗಳಲ್ಲೆಲ್ಲಾ ದ್ರಾಕ್ಷಾಬಳ್ಳಿಯಿಂದ ಉತ್ಪನ್ನವಾದ ಹೀಚನ್ನಾಗಲಿ, ಸಿಪ್ಪೆಯನ್ನಾಗಲಿ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಹರಕೆಮಾಡಿ ಪ್ರತಿಷ್ಠಿಸಿಕೊಂಡ ದಿನಗಳೆಲ್ಲಾ ದ್ರಾಕ್ಷಾಲತೆಯಿಂದ ಉತ್ಪನ್ನವಾದ ಹೀಚನ್ನಾದರೂ ತೃಣವನ್ನಾದರೂ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವನು ಹರಕೆ ಮಾಡಿಕೊಂಡಿರುವ ದಿನಗಳಲ್ಲಿ ದ್ರಾಕ್ಷಾಲತೆಯಿಂದ ಉತ್ಪನ್ನವಾಗುವ ಯಾವದನ್ನೂ ತಿನ್ನಬಾರದು. ಅವನು ದ್ರಾಕ್ಷಿಯ ಬೀಜವನ್ನಾಗಲಿ ಸಿಪ್ಪೆಯನ್ನಾಗಲಿ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:4
7 ತಿಳಿವುಗಳ ಹೋಲಿಕೆ  

“ ‘ಅವರ ನಾಜೀರ ವ್ರತದ ದಿನಗಳಲ್ಲೆಲ್ಲಾ ಕ್ಷೌರಮಾಡಿಸಿಕೊಳ್ಳಬಾರದು. ಅವರು ಯೆಹೋವ ದೇವರಿಗೆ ತಮ್ಮನ್ನು ಪ್ರತ್ಯೇಕಿಸಿಕೊಂಡ ದಿವಸಗಳು ಪೂರ್ತಿಯಾಗುವವರೆಗೆ ಅವರು ಪರಿಶುದ್ಧರಾಗಿರುವರು, ಅವರು ತಮ್ಮ ತಲೆಗೂದಲನ್ನು ಕತ್ತರಿಸದೇ ಬೆಳೆಯಬಿಡಬೇಕು.


“ ‘ಪ್ರಮಾಣ ಮಾಡಿಕೊಂಡ ನಾಜೀರರ ನಿಯಮವು ಇದೇ. ಸಂಬಂಧಪಟ್ಟದ್ದರೊಂದಿಗೆ ತಮ್ಮ ಕೈಲಾದ ಮಟ್ಟಿಗೆ ಅವರು ತಮ್ಮ ಪ್ರತ್ಯೇಕಿಸುವಿಕೆಗಾಗಿ ಯೆಹೋವ ದೇವರಿಗೆ ಕಾಣಿಕೆ ಅರ್ಪಿಸತಕ್ಕದ್ದು. ನಾಜೀರ ವ್ರತದ ಕ್ರಮದ ಪ್ರಕಾರ, ನೀವು ಮಾಡಿದ ಪ್ರಮಾಣಕ್ಕನುಸಾರವಾಗಿ ತಮ್ಮ ವ್ರತದ ಕ್ರಮಗಳನ್ನು ನೆರವೇರಿಸಬೇಕು.’ ”


ದ್ರಾಕ್ಷಾರಸಕ್ಕೂ ಮದ್ಯಪಾನಕ್ಕೂ ದೂರವಾಗಿದ್ದು, ದ್ರಾಕ್ಷಾರಸದ ಹುಳಿಯನ್ನೂ ಮದ್ಯಪಾನದ ಹುಳಿಯನ್ನೂ ಕುಡಿಯದೆ, ದ್ರಾಕ್ಷಿಯಿಂದ ಮಾಡಿದ ಯಾವ ಪಾನವನ್ನಾದರೂ ಕುಡಿಯದೆ ಹಸಿಯದಾಗಲಿ, ಒಣಗಿದ್ದಾಗಲಿ ದ್ರಾಕ್ಷಿಹಣ್ಣನ್ನು ತಿನ್ನದೆ ಇರಬೇಕು.


ದ್ರಾಕ್ಷಿ ಗಿಡದಲ್ಲಿ ಹುಟ್ಟುವ ಒಂದನ್ನೂ ತಿನ್ನದೆ, ದ್ರಾಕ್ಷಾರಸವನ್ನೂ, ಮದ್ಯವನ್ನೂ ಕುಡಿಯದೆ, ಅಶುಚಿಯಾದ ಒಂದನ್ನೂ ತಿನ್ನದೆ ಇದ್ದು, ನಾನು ಅವಳಿಗೆ ಆಜ್ಞಾಪಿಸಿದ್ದೆಲ್ಲಾ ಕೈಗೊಳ್ಳಲಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು