Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:9 - ಕನ್ನಡ ಸಮಕಾಲಿಕ ಅನುವಾದ

9 “ ‘ಅವರ ಬಳಿಯಲ್ಲಿ ಯಾರಾದರೂ ಆಕಸ್ಮಿಕವಾಗಿ ಸತ್ತದ್ದರಿಂದ ಅವರ ತಲೆಯ ಕೂದಲು ಅಶುದ್ಧವಾದರೆ, ಅವರು ಶುದ್ಧರಾಗುವ ದಿವಸದಲ್ಲಿ ಅಂದರೆ ಏಳನೆಯ ದಿವಸದಲ್ಲಿ ತಮ್ಮ ತಲೆಯನ್ನು ಬೋಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯಾರಾದರೂ ಆಕಸ್ಮಾತ್ತಾಗಿ ಅವನ ಬಳಿಯಲ್ಲೇ ಸತ್ತರೆ, ತಾನು ಪ್ರತಿಷ್ಠಿಸಿಕೊಂಡ ತಲೆಯ ಕೂದಲು ಅಪವಿತ್ರವಾದರೆ ಏಳನೆಯ ದಿನದಲ್ಲಿ ಅಂದರೆ ಶುದ್ಧನಾಗುವ ದಿನದಲ್ಲಿ ತಲೆಯನ್ನು ಕ್ಷೌರಮಾಡಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಕಸ್ಮಿಕವಾಗಿ ಯಾರಾದರೂ ಅವನ ಬಳಿಯಲ್ಲೇ ಸತ್ತು, ಅವನು ಪ್ರತಿಷ್ಠಿಸಿಕೊಂಡಿದ್ದ ತಲೆಕೂದಲು ಅಪವಿತ್ರವಾದರೆ ಏಳನೆಯ ದಿನದಂದು ಅಂದರೆ ಶುದ್ಧೀಕರಣ ದಿನದಂದು ತಲೆಯನ್ನು ಕ್ಷೌರಮಾಡಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯಾವನಾದರೂ ಅಕಸ್ಮಾತ್ತಾಗಿ ಅವನ ಬಳಿಯಲ್ಲೇ ಸತ್ತದರಿಂದ ತಾನು ಪ್ರತಿಷ್ಠಿಸಿಕೊಂಡ ತಲೆಕೂದಲು ಅಪವಿತ್ರವಾದರೆ ಏಳನೆಯ ದಿನದಲ್ಲಿ ಅಂದರೆ ಶುದ್ಧನಾಗುವ ದಿನದಲ್ಲಿ ತಲೆಯನ್ನು ಕ್ಷೌರಮಾಡಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯಾವನಾದರೂ ಇದ್ದಕ್ಕಿದ್ದಂತೆ ಅವನ ಬಳಿಯಲ್ಲೇ ಸತ್ತದ್ದರಿಂದ ತಾನು ಪ್ರತಿಷ್ಠಿಸಿಕೊಂಡ ತಲೆಕೂದಲು ಅಪವಿತ್ರವಾದರೆ ಏಳನೆಯ ದಿನದಲ್ಲಿ ತಲೆಯನ್ನು ಕ್ಷೌರ ಮಾಡಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:9
11 ತಿಳಿವುಗಳ ಹೋಲಿಕೆ  

“ ‘ಇದಲ್ಲದೆ ನಾಜೀರರು ತಮ್ಮ ಸಮರ್ಪಣೆಯನ್ನು ಸಂಕೇತಿಸುವ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಂಡು, ಪ್ರತ್ಯೇಕಿಸಿದ ತಮ್ಮ ತಲೆಗೂದಲನ್ನು ತೆಗೆದುಕೊಂಡು, ಸಮಾಧಾನದ ಬಲಿಗಳ ಬಲಿಯ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.


ಇನ್ನು ಕೆಲವು ದಿನ ಪೌಲನು ಅಲ್ಲಿಯೇ ಉಳಿದುಕೊಂಡನು. ಅನಂತರ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಕೆಂಖ್ರೆಯ ಎಂಬ ಸ್ಥಳದಲ್ಲಿ ತಲೆ ಕೂದಲನ್ನು ಕ್ಷೌರಮಾಡಿಸಿಕೊಂಡು ತಾನು ಹೊತ್ತ ಹರಕೆ ಪೂರೈಸಿದ ಮೇಲೆ ಸಿರಿಯಕ್ಕೆ ನೌಕೆ ಪ್ರಯಾಣಮಾಡಿದನು. ಪ್ರಿಸ್ಕಿಲ್ಲ ಮತ್ತು ಅಕ್ವಿಲರು ಅವನ ಜೊತೆಯಲ್ಲಿ ಹೊರಟರು.


ಆದರೆ ಏಳನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ, ಗಡ್ಡವನ್ನೂ, ತನ್ನ ಕಣ್ಣುಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಬೋಳಿಸಿಕೊಳ್ಳಬೇಕು. ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು.


ಏಳು ದಿನಗಳ ಅವಧಿ ಮುಗಿಯುತ್ತಿದ್ದಾಗ, ಏಷ್ಯಾ ಪ್ರಾಂತದ ಕೆಲವು ಯೆಹೂದ್ಯ ಜನರು ದೇವಾಲಯದಲ್ಲಿ ಪೌಲನನ್ನು ಕಂಡರು. ಅವರು ಇಡೀ ಜನಸಮೂಹವನ್ನು ಉದ್ರೇಕಿಸಿ ಪೌಲನನ್ನು ಹಿಡಿದರು.


“ಶುದ್ಧವಾಗುವುದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ, ತನ್ನ ಎಲ್ಲಾ ಕೂದಲನ್ನು ಬೋಳಿಸಿಕೊಂಡು, ತಾನು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು. ತರುವಾಯ ಅವನು ಪಾಳೆಯದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳವರೆಗೆ ಕಾಯಬೇಕು.


ಅವರ ಸಮರ್ಪಣೆಯ ದಿವಸಗಳಲ್ಲೆಲ್ಲಾ ಅವರು ಯೆಹೋವ ದೇವರಿಗೆ ಮೀಸಲಾಗಿರಬೇಕು.


ಅವಳು ತಲೆ ಕ್ಷೌರಮಾಡಿಸಿಕೊಂಡು, ಉಗುರುಗಳನ್ನು ಕತ್ತರಿಸಿಕೊಂಡು,


ಅವನು ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವುದಕ್ಕೋಸ್ಕರ ಒಳಗಿನ ಅಂಗಳದ ಪರಿಶುದ್ಧ ಸ್ಥಳಕ್ಕೆ ಬರುವ ದಿನದಲ್ಲಿ ತನ್ನ ಪಾಪ ಪರಿಹಾರಕ ಬಲಿಯನ್ನು ಅರ್ಪಿಸಬೇಕೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು