Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:13 - ಕನ್ನಡ ಸಮಕಾಲಿಕ ಅನುವಾದ

13 ಅವನ ಅರ್ಪಣೆ ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಚೊಕ್ಕ ಬೆಳ್ಳಿಯ ಒಂದು ತಟ್ಟೆ ಮತ್ತು 70 ಶೆಕೆಲ್ ತೂಕದ ಬೆಳ್ಳಿಯ ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಇವೆರಡು ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ. ಎಪ್ಪತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವನು ತಂದ ಕಾಣಿಕೆಗಳು: ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಬೆಳ್ಳಿಯ ಒಂದು ಹರಿವಾಣ; 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವನ ಕಾಣಿಕೆಯು ಯಾವದಂದರೆ - ದೇವರ ಸೇವೆಗೆ ನೇಮಕವಾದ ರೂಪಾಯಿಯ ತೂಕದ ಮೇರೆಗೆ ನೂರ ಮೂವತ್ತು ರೂಪಾಯಿ ತೂಕದ ಬೆಳ್ಳಿಯ ಹರಿವಾಣವು; ಎಪ್ಪತ್ತು ತೊಲೆ ತೂಕವುಳ್ಳ ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:13
23 ತಿಳಿವುಗಳ ಹೋಲಿಕೆ  

ಲೆಕ್ಕಿತರಾದವರಲ್ಲಿ ಸೇರುವ ಪ್ರತಿಯೊಬ್ಬ ಮನುಷ್ಯನು ಕೊಡಬೇಕಾದದ್ದು ಏನೆಂದರೆ ಶೆಕೆಲಿಗೆ ಇಪ್ಪತ್ತು ಗೇರಾಗಳ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರ್ಧ ಶೆಕೆಲ್ ಕೊಡಬೇಕು. ಅರ್ಧ ಶೆಕೆಲ್ ಯೆಹೋವ ದೇವರಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು.


“ ‘ಯಾರಾದರೂ ಯೆಹೋವ ದೇವರಿಗೆ ಧಾನ್ಯ ಸಮರ್ಪಣೆಯನ್ನು ಸಮರ್ಪಿಸುವುದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಸಬೇಕು, ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.


ಮೇಜಿನ ಮೇಲೆ ಇಡಬೇಕಾದ ಉಪಕರಣಗಳನ್ನು ಅಂದರೆ ಹರಿವಾಣ, ಧೂಪಾರತಿಗಳು, ಹೂಜೆಗಳು, ಪಾನದ್ರವ್ಯಗಳ ಅರ್ಪಣೆಗಾಗಿ ಬೇಕಾಗುವ ಬಟ್ಟಲುಗಳನ್ನು ಶುದ್ಧ ಬಂಗಾರದಿಂದ ಮಾಡಿದರು.


ಇದಲ್ಲದೆ ನೀನು ಪಾತ್ರೆಗಳನ್ನು, ಧೂಪಾರತಿಗಳನ್ನು, ಮುಚ್ಚಳಗಳನ್ನು ಪಾನಾರ್ಪಣೆಗೆ ಹೂಜೆಗಳನ್ನೂ ಬೇಕಾದ ಬಟ್ಟಲುಗಳನ್ನೂ, ಶುದ್ಧ ಬಂಗಾರದಿಂದ ಮಾಡಬೇಕು.


ಇದಲ್ಲದೆ ಅವನ ತಲೆಯನ್ನು ಒಂದು ತಟ್ಟೆಯಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತಂದಳು.


ಅವಳು ತನ್ನ ತಾಯಿಯ ಸಲಹೆ ಪಡೆದು, “ಸ್ನಾನಿಕನಾದ ಯೋಹಾನನ ತಲೆಯನ್ನು ಇಲ್ಲಿಯೇ ಒಂದು ತಟ್ಟೆಯಲ್ಲಿ ನನಗೆ ತರಿಸಿಕೊಡು,” ಎಂದು ಹೇಳಿದಳು.


ಆ ದಿವಸದಲ್ಲಿ, ಕುದುರೆಗಳ ಘಂಟೆಗಳ ಮೇಲೆ ಯೆಹೋವ ದೇವರಿಗೆ ಪರಿಶುದ್ಧವು ಎಂದಿರುವುದು. ಯೆಹೋವ ದೇವರ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವುವು.


ಬೇಲ್ಯಚ್ಚರನು ತನ್ನ ದ್ರಾಕ್ಷಾರಸವನ್ನು ಕುಡಿಯುತ್ತಿರುವಾಗ, ತನ್ನ ತಂದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದೊಳಗಿಂದ ತಂದ ಬೆಳ್ಳಿ ಬಂಗಾರಗಳ ಪಾತ್ರೆಗಳನ್ನು ತಂದು, ಅದರಲ್ಲಿ ಅರಸನು ಮತ್ತು ಪ್ರಧಾನರು, ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವಂತೆ ಆಜ್ಞಾಪಿಸಿದನು.


ಕಾವಲುಗಾರರ ಅಧಿಪತಿಯು ಬೋಗುಣಿಗಳನ್ನೂ, ಅಗ್ನಿ ಪಾತ್ರೆಗಳನ್ನೂ, ಬಟ್ಟಲುಗಳನ್ನೂ ಬೋಗುಣಿಗಳನ್ನೂ, ದೀಪಸ್ತಂಭಗಳನ್ನೂ, ಸೌಟುಗಳನ್ನೂ, ಪಾನಾರ್ಪಣೆಯ ಪಾತ್ರೆ ಬಂಗಾರ ಬೆಳ್ಳಿಗಳಿಂದ ಮಾಡಿದ ಎಲ್ಲವನ್ನೂ ತೆಗೆದುಕೊಂಡನು.


ಅರಸನೂ, ಅವನ ಸಲಹೆಗಾರರೂ, ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ, ಬಂಗಾರವನ್ನೂ, ಸಲಕರಣೆಗಳನ್ನೂ ಅವರಿಗೆ ತೂಕಮಾಡಿ ಕೊಟ್ಟೆನು.


ಪಾತ್ರೆಗಳು, ಸಲಿಕೆಗಳು, ಬೋಗುಣಿಗಳು. ಯೆಹೋವ ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊಮೋನನಿಗೆ ಹೂರಾಮನು ಮಾಡಿದ ಈ ಸಲಕರಣೆಗಳೆಲ್ಲಾ ಹೊಳೆಯುವ ಕಂಚಿನವುಗಳಾಗಿದ್ದವು.


ಹತ್ತು ಪೀಠಗಳು, ಅವುಗಳ ಮೇಲಿರುವ ಹತ್ತು ತೊಟ್ಟಿಗಳು,


ಒಬ್ಬೊಬ್ಬನಿಗೆ ಐದು ಶೆಕೆಲ್ ತೆಗೆದುಕೋ. ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, ಅಂದರೆ ಇಪ್ಪತ್ತು ಗೇರಾ ತೂಕದ ಶೆಕೆಲ್ ಈ ಪ್ರಕಾರವಾಗಿ ಇದನ್ನು ತೆಗೆದುಕೊಳ್ಳಬೇಕು.


ಪವಿತ್ರ ಸ್ಥಳದ ಶೆಕೆಲ್ ಅನುಸಾರವಾಗಿ ನೇಮಿಸುವ ಕ್ರಯವು ಇಪ್ಪತ್ತು ಗೇರಾ ತೂಕದ ಶೆಕೆಲ್ ಮೇರೆಗೆ ನೀವು ಕ್ರಯವನ್ನು ನಿಗದಿಮಾಡಬೇಕು.


ನೀನು ನೇಮಿಸಬೇಕಾದ ಕ್ರಯವು ಯಾವುದೆಂದರೆ, ಇಪ್ಪತ್ತರಿಂದ ಅರವತ್ತು ವಯಸ್ಸುಳ್ಳ ಪುರುಷನಿಗೆ ನೀನು ಪವಿತ್ರ ಸ್ಥಳದ ಶೆಕೆಲ್ ಅನುಸಾರವಾಗಿ ನೇಮಿಸುವ ಕ್ರಯವು ಐವತ್ತು ಶೆಕೆಲ್ ಆಗಿರಬೇಕು.


ಮೊದಲನೆಯ ದಿವಸದಲ್ಲಿ ತನ್ನ ಕಾಣಿಕೆಯನ್ನು ಅರ್ಪಿಸಿದವನು ಯೆಹೂದ ಗೋತ್ರದ ಅಮ್ಮೀನಾದಾಬನ ಮಗ ನಹಶೋನನು.


ಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ,


ಅವನ ಅರ್ಪಣೆಯು ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಬೆಳ್ಳಿಯ ತಟ್ಟೆ, ಪರಿಶುದ್ಧಸ್ಥಳದ ಪ್ರಕಾರ 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.


ಅದರೊಂದಿಗೆ ಯೆಹೋವ ದೇವರಿಗೆ ತನ್ನ ಬಲಿಯನ್ನು ಅರ್ಪಿಸುವಾಗ ಧಾನ್ಯ ಅರ್ಪಣೆಗಾಗಿ ಸುಮಾರು ಒಂದುವರೆ ಕಿಲೋಗ್ರಾಂ ಗೋಧಿ ಹಿಟ್ಟನ್ನು ಒಂದು ಲೀಟರ್ ಓಲಿವ್ ಎಣ್ಣೆಗೆ ಬೆರೆಸಲಾಗುತ್ತದೆ.


ಧಾನ್ಯ ಅರ್ಪಣೆಗಾಗಿ ಸುಮಾರು ಒಂದು ಲೀಟರ್ ಕುಟ್ಟಿ ತೆಗೆದ ಓಲಿವ್ ಎಣ್ಣೆಯನ್ನು ಸುಮಾರು ಒಂದುವರೆ ಕಿಲೋಗ್ರಾಂ ಗೋಧಿಹಿಟ್ಟಿಗೆ ಬೆರೆಸಿ ಸಮರ್ಪಿಸಬೇಕು.


ಇದಲ್ಲದೆ ಪ್ರತಿ ತಿಂಗಳಿನ ಮತ್ತು ನಿತ್ಯವಾದ ದಹನಬಲಿಗಳಿಗೆ ಹೆಚ್ಚುವರಿಯಾಗಿ ಅವುಗಳ ಧಾನ್ಯ ಅರ್ಪಣೆಯನ್ನು ಮತ್ತು ಪಾನ ಅರ್ಪಣೆಗಳನ್ನು ನಿರ್ದಿಷ್ಟಪಡಿಸಿದಂತೆ ಸಮರ್ಪಣೆಯಾಗಬೇಕು, ಅವು ಯೆಹೋವ ದೇವರಿಗೆ ಸುವಾಸನೆಗಾಗಿ ಅರ್ಪಿಸುವ ದಹನಬಲಿಯಾಗಿರುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು