Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:19 - ಕನ್ನಡ ಸಮಕಾಲಿಕ ಅನುವಾದ

19 ಅವನ ಅರ್ಪಣೆ ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಒಂದು ಬೆಳಿಯ್ಳ ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆಯು; ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ; 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವನ ಕಾಣಿಕೆ ಯಾವದಂದರೆ - ದೇವರ ಸೇವೆಗೆ ನೇಮಕವಾದ ರೂಪಾಯಿಯ ತೂಕದ ಮೇರೆಗೆ ನೂರ ಮೂವತ್ತು ರೂಪಾಯಿ ತೂಕದ ಬೆಳ್ಳಿಯ ಹರಿವಾಣವು; ಎಪ್ಪತ್ತು ತೊಲೆ ತೂಕವುಳ್ಳ ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:19
10 ತಿಳಿವುಗಳ ಹೋಲಿಕೆ  

ಅವಳು ತನ್ನ ತಾಯಿಯ ಸಲಹೆ ಪಡೆದು, “ಸ್ನಾನಿಕನಾದ ಯೋಹಾನನ ತಲೆಯನ್ನು ಇಲ್ಲಿಯೇ ಒಂದು ತಟ್ಟೆಯಲ್ಲಿ ನನಗೆ ತರಿಸಿಕೊಡು,” ಎಂದು ಹೇಳಿದಳು.


ಎರಡನೆಯ ದಿವಸದಲ್ಲಿ ಇಸ್ಸಾಕಾರನ ಗೋತ್ರದ ಪ್ರಧಾನನಾಗಿರುವ ಚೂವಾರನ ಮಗ ನೆತನೆಯೇಲ್ ಅರ್ಪಿಸಿದನು.


ಧೂಪದಿಂದ ತುಂಬಿದ್ದ ಹತ್ತು ಶೆಕೆಲ್ ತೂಕದ ಬಂಗಾರದ ಒಂದು ಚಮಚ,


ಇದಲ್ಲದೆ ನೀನು ಪಾತ್ರೆಗಳನ್ನು, ಧೂಪಾರತಿಗಳನ್ನು, ಮುಚ್ಚಳಗಳನ್ನು ಪಾನಾರ್ಪಣೆಗೆ ಹೂಜೆಗಳನ್ನೂ ಬೇಕಾದ ಬಟ್ಟಲುಗಳನ್ನೂ, ಶುದ್ಧ ಬಂಗಾರದಿಂದ ಮಾಡಬೇಕು.


“ ‘ಯಾರಾದರೂ ಯೆಹೋವ ದೇವರಿಗೆ ಧಾನ್ಯ ಸಮರ್ಪಣೆಯನ್ನು ಸಮರ್ಪಿಸುವುದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಸಬೇಕು, ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.


“ ‘ಆದರೆ ಅವರು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ ತರುವುದಕ್ಕೆ ಅಶಕ್ತರಾಗಿದ್ದರೆ, ಪಾಪಮಾಡಿದವರು ತಮ್ಮ ಬಲಿಗಾಗಿ, ಮೂರು ಸೇರು ಗೋಧಿ ಹಿಟ್ಟನ್ನು ಪಾಪ ಪರಿಹಾರದ ಬಲಿಯಾಗಿ ತರಬೇಕು. ಅವರು ಅದರ ಮೇಲೆ ಎಣ್ಣೆಯನ್ನು ಇಲ್ಲವೆ ಸಾಂಬ್ರಾಣಿಯನ್ನು ಹಾಕಬಾರದು. ಏಕೆಂದರೆ ಅದು ದೋಷಪರಿಹಾರ ಬಲಿಯಾಗಿದೆ.


ಅವುಗಳ ಲೆಕ್ಕವು ಹೀಗಿವೆ: ಬಂಗಾರದ 30 ತಟ್ಟೆಗಳು. ಬೆಳ್ಳಿಯ 1,000 ತಟ್ಟೆಗಳು. ಬೆಳ್ಳಿಯ 29 ಪಾತ್ರೆಗಳು.


ಇದಲ್ಲದೆ ಅವರು ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಸಾಂಬ್ರಾಣಿಕಳಸ ಮತ್ತು ಸಮಸ್ತ ಕಂಚಿನ ಸಲಕರಣೆಗಳನ್ನೂ ತೆಗೆದುಕೊಂಡು ಹೋದರು.


ಆ ದಿವಸದಲ್ಲಿ, ಕುದುರೆಗಳ ಘಂಟೆಗಳ ಮೇಲೆ ಯೆಹೋವ ದೇವರಿಗೆ ಪರಿಶುದ್ಧವು ಎಂದಿರುವುದು. ಯೆಹೋವ ದೇವರ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವುವು.


ಕೂಡಲೇ ಆ ಹುಡುಗಿ ಅವಸರವಾಗಿ ರಾಜನ ಮುಂದೆ ಬಂದು, “ನನಗೆ ಈಗಲೇ ಸ್ನಾನಿಕನಾದ ಯೋಹಾನನ ತಲೆಯನ್ನು ಒಂದು ತಟ್ಟೆಯಲ್ಲಿ ತರಿಸಿ ಕೊಡಬೇಕು,” ಎಂದು ಕೇಳಿಕೊಂಡಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು