Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:85 - ಕನ್ನಡ ಸಮಕಾಲಿಕ ಅನುವಾದ

85 ಬೆಳ್ಳಿಯ ಒಂದೊಂದು ತಟ್ಟೆಗಳ ತೂಕವು 130 ಶೆಕೆಲ್, ಒಂದೊಂದು ಬಟ್ಟಲಿನ ತೂಕವು 70 ಶೆಕೆಲ್. ಬೆಳ್ಳಿಯ ಎಲ್ಲಾ ಸಾಮಗ್ರಿಗಳ ತೂಕ ಪರಿಶುದ್ಧಸ್ಥಳದ ನೇಮದ ಪ್ರಕಾರ 2,400 ಶೆಕೆಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

85 ಒಂದೊಂದು ಬೆಳ್ಳಿಯ ತಟ್ಟೆಯು 120 ಶೆಕೆಲ್ ತೂಕವುಳ್ಳದ್ದು, ಒಂದೊಂದು ಬಟ್ಟಲು 70 ಶೆಕೆಲ್ ತೂಕದ್ದು. ಆ ಬೆಳ್ಳಿಯ ಪಾತ್ರೆಗಳ ಒಟ್ಟು ತೂಕ ದೇವಸ್ಥಾನದ ನಾಣ್ಯ ತೂಕದ ಪ್ರಕಾರ 2,400 ಶೆಕೆಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

85 ಒಂದೊಂದು ಬೆಳ್ಳಿಯ ಹರಿವಾಣ 130 ಶೆಕೆಲ್ ತೂಕವುಳ್ಳದ್ದಾಗಿತ್ತು; ಒಂದೊಂದು ಬೆಳ್ಳಿಯ ಬಟ್ಟಲು 70 ಶೆಕೆಲ್ ತೂಕವುಳ್ಳದ್ದಾಗಿತ್ತು; ಆ ಬೆಳ್ಳಿಯ ಪಾತ್ರೆಗಳ ಒಟ್ಟು ತೂಕ ದೇವಸ್ಥಾನದ ನಾಣ್ಯದ ತೂಕದ ಮೇರೆಗೆ 2400 ಶೆಕೆಲ್ ತೂಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

85 ಒಂದೊಂದು ಬೆಳ್ಳಿಯ ಹರಿವಾಣವು 130 ರೂಪಾಯಿ ತೂಕವುಳ್ಳದ್ದು; ಒಂದೊಂದು ಬಟ್ಟಲು 70 ರೂಪಾಯಿ ತೂಕದ್ದು. ಆ ಬೆಳ್ಳಿಯ ಪಾತ್ರೆಗಳ ಒಟ್ಟು ತೂಕ ದೇವರ ಸೇವೆಗೆ ನೇಮಕವಾದ ರೂಪಾಯಿಯ ಪ್ರಕಾರ 2,400 ರೂಪಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

85 ಪ್ರತಿಯೊಂದು ಬೆಳ್ಳಿಯ ತಟ್ಟೆಯ ತೂಕ ಸುಮಾರು ಮೂರುಕಾಲು ಪೌಂಡುಗಳು, ಪ್ರತಿ ಬಟ್ಟಲು ಸುಮಾರು ಮೂರುಮುಕ್ಕಾಲು ಪೌಂಡು ತೂಕವುಳ್ಳದ್ದಾಗಿದ್ದವು. ಬೆಳ್ಳಿಯ ತಟ್ಟೆಗಳು ಮತ್ತು ಬೆಳ್ಳಿಯ ಬಟ್ಟಲುಗಳು ಒಟ್ಟಿಗೆ ಅಧಿಕೃತ ಅಳತೆಯ ಪ್ರಕಾರ ಅರವತ್ತು ಪೌಂಡುಗಳಷ್ಟು ತೂಕವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:85
7 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಮನೆಯ ಸೇವೆಗೋಸ್ಕರ ಬಂಗಾರವನ್ನೂ 17 0 ಮೆಟ್ರಿಕ್ ಟನ್, ಮತ್ತು 10,000 ಬಂಗಾರದ ನಾಣ್ಯಗಳನ್ನೂ 34 5 ಮೆಟ್ರಿಕ್ ಟನ್ ಬೆಳ್ಳಿಯನ್ನೂ, 61 0 ಮೆಟ್ರಿಕ್ ಟನ್ ಕಂಚನ್ನೂ, 34 50 ಮೆಟ್ರಿಕ್ ಟನ್ ಕಬ್ಬಿಣವನ್ನೂ ಕೊಟ್ಟರು.


ಮನೆಗಳ ಗೋಡೆಗಳನ್ನು ಹೊದಿಸುವುದಕ್ಕೆ ಓಫೀರ್ ಬಂಗಾರದಲ್ಲಿ 100 ಮೆಟ್ರಿಕ್ ಟನ್ ಬಂಗಾರವನ್ನೂ, 240 ಮೆಟ್ರಿಕ್ ಟನ್ ಚೊಕ್ಕ ಬೆಳ್ಳಿಯನ್ನೂ ಕೊಟ್ಟಿದ್ದೇನೆ.


“ಇಗೋ, ಕಷ್ಟಪಟ್ಟು ನಾನು ಯೆಹೋವ ದೇವರ ಆಲಯಕ್ಕೋಸ್ಕರ ಮೂರು ಸಾವಿರದ ನಾನೂರ ಎಪ್ಪತ್ತು ಮೆಟ್ರಿಕ್ ಟನ್ ಬಂಗಾರವನ್ನೂ, ಮೂವತ್ತ ನಾಲ್ಕು ಸಾವಿರದ ಐನೂರು ಮೆಟ್ರಿಕ್ ಟನ್ ಬೆಳ್ಳಿಯನ್ನೂ, ಲೆಕ್ಕವಿಲ್ಲದಷ್ಟು ಕಂಚನ್ನೂ, ಕಬ್ಬಿಣವನ್ನೂ ಮರಗಳನ್ನೂ, ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಸೇರಿಸಬಹುದು.


ಅವಳು ತನ್ನ ತಾಯಿಯ ಸಲಹೆ ಪಡೆದು, “ಸ್ನಾನಿಕನಾದ ಯೋಹಾನನ ತಲೆಯನ್ನು ಇಲ್ಲಿಯೇ ಒಂದು ತಟ್ಟೆಯಲ್ಲಿ ನನಗೆ ತರಿಸಿಕೊಡು,” ಎಂದು ಹೇಳಿದಳು.


ಇದು ಬಲಿಪೀಠದ ಪ್ರತಿಷ್ಠೆಗಾಗಿ ಅದನ್ನು ಅಭಿಷೇಕ ಮಾಡಿದ ದಿನದಲ್ಲಿ ಇಸ್ರಾಯೇಲಿನ ಪ್ರಧಾನರು ಅರ್ಪಿಸಿದ್ದು: ಬೆಳ್ಳಿಯ 12 ತಟ್ಟೆಗಳೂ, ಬೆಳ್ಳಿಯ 12 ಬಟ್ಟಲುಗಳೂ, ಬಂಗಾರದ 12 ಚಮಚಗಳೂ,


ಧೂಪ ತುಂಬಿದ್ದ 12 ಬಂಗಾರದ ಚಮಚಗಳು, ಪರಿಶುದ್ಧಸ್ಥಳದ ಪ್ರಕಾರ ಒಂದೊಂದಕ್ಕೆ 10 ಚಮಚಗಳ ಬಂಗಾರವೆಲ್ಲಾ 120 ಶೆಕೆಲ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು