ಅರಣ್ಯಕಾಂಡ 7:89 - ಕನ್ನಡ ಸಮಕಾಲಿಕ ಅನುವಾದ89 ಮೋಶೆಯು ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಾಗ, ಅವನು ಒಡಂಬಡಿಕೆಯ ಮಂಜೂಷದ ಮೇಲೆ ಇರುವ ಕರುಣಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವ ಧ್ವನಿಯನ್ನು ಮೋಶೆಯು ಕೇಳಿದನು. ಹೀಗೆ ದೇವರು ಅವನ ಸಂಗಡ ಮಾತನಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201989 ಮೋಶೆ ಯೆಹೋವನ ಸಂಗಡ ಮಾತನಾಡಬೇಕೆಂದು ದೇವದರ್ಶನದ ಗುಡಾರದೊಳಗೆ ಹೋದಾಗ ಆಜ್ಞಾಶಾಸನಗಳ ಮಂಜೂಷದ ಮೇಲಣ ಕೃಪಾಸನದ ಮೇಲಿನಿಂದ ಆ ಎರಡು ಕೆರೂಬಿಗಳ ನಡುವೆಯಿಂದ ತನ್ನ ಸಂಗಡ ಮಾತನಾಡುವ ಯೆಹೋವನ ಸ್ವರವು ಅವನಿಗೆ ಕೇಳಿಸಿತು. ಹೀಗೆ ಯೆಹೋವನು ಮೋಶೆಯ ಸಂಗಡ ಮಾತನಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)89 ಮೋಶೆ ಯೆಹೋವನ ಸಂಗಡ ಮಾತಾಡಬೇಕೆಂದು ದೇವದರ್ಶನದ ಗುಡಾರದೊಳಗೆ ಹೋದಾಗ ಆಜ್ಞಾಶಾಸನಗಳ ಮಂಜೂಷದ ಮೇಲಣ ಕೃಪಾಸನದ ಮೇಲಿನಿಂದ ಆ ಎರಡು ಕೆರೂಬಿಗಳ ನಡುವೆಯಿಂದ ತನ್ನ ಸಂಗಡ ಮಾತಾಡುವ ಯೆಹೋವನ ಸ್ವರವು ಅವನಿಗೆ ಕೇಳಿಸಿತು. ಹೀಗೆ ಆತನು ಅವನ ಸಂಗಡ ಮಾತಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್89 ಮೋಶೆ ಯೆಹೋವನ ಸಂಗಡ ಮಾತಾಡಲು ದೇವದರ್ಶನಗುಡಾರದೊಳಗೆ ಹೋದಾಗ, ಒಡಂಬಡಿಕೆಯ ಪವಿತ್ರ ಪೆಟ್ಟಿಗೆಯ ಹೊದಿಕೆಯ ಮೇಲಿದ್ದ ಎರಡು ಕೆರೂಬಿಗಳ ಮಧ್ಯದಿಂದ ಯೆಹೋವನ ಸ್ವರವು ಮೋಶೆಗೆ ಕೇಳಿಸಿತು. ಹೀಗೆ ಆತನು ಅವನ ಸಂಗಡ ಮಾತಾಡಿದನು. ಅಧ್ಯಾಯವನ್ನು ನೋಡಿ |