ಅರಣ್ಯಕಾಂಡ 8:12 - ಕನ್ನಡ ಸಮಕಾಲಿಕ ಅನುವಾದ12 “ಲೇವಿಯರು ತಮ್ಮ ಕೈಗಳನ್ನು ಆ ಹೋರಿಗಳ ತಲೆಗಳ ಮೇಲೆ ಇಡಬೇಕು. ಆಗ ನೀನು ಲೇವಿಯರಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಯೆಹೋವ ದೇವರಿಗೆ ಒಂದು ಹೋರಿಯನ್ನು ದೋಷಪರಿಹಾರಕ ಬಲಿಗಾಗಿಯೂ ಮತ್ತೊಂದು ಹೋರಿಯನ್ನು ದಹನಬಲಿಗಾಗಿಯೂ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. ನಂತರ ನೀನು ಯೆಹೋವನಿಗೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋರಿಯನ್ನೂ, ಸರ್ವಾಂಗಹೋಮವಾಗಿ ಮತ್ತೊಂದು ಹೋರಿಯನ್ನು ಸಮರ್ಪಿಸಬೇಕು. ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ನೀನು ಸರ್ವೇಶ್ವರನಿಗೆ ಪಾಪಪರಿಹಾರಕ ಬಲಿಗಾಗಿ ಒಂದು ಹೋರಿಯನ್ನು, ಹಾಗು ದಹನಬಲಿಗಾಗಿ ಮತ್ತೊಂದು ಹೋರಿಯನ್ನು ಸಮರ್ಪಿಸಿ ಅವರಿಗಾಗಿ ಪಾಪಪರಿಹಾರವನ್ನು ಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ನೀನು ಯೆಹೋವನಿಗೆ ದೋಷಪರಿಹಾರಕಯಜ್ಞವಾಗಿ ಒಂದು ಹೋರಿಯನ್ನೂ ಸರ್ವಾಂಗಹೋಮವಾಗಿ ಮತ್ತೊಂದು ಹೋರಿಯನ್ನೂ ಸಮರ್ಪಿಸಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟ ನಂತರ, ನೀನು ಯೆಹೋವನಿಗೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋರಿಯನ್ನೂ ಸರ್ವಾಂಗಹೋಮವಾಗಿ ಇನ್ನೊಂದು ಹೋರಿಯನ್ನೂ ಸಮರ್ಪಿಸಬೇಕು. ಇವು ಲೇವಿಯರಿಗೆ ನೈವೇದ್ಯದ ಸಮರ್ಪಣೆಗಳಾಗಿವೆ. ಅಧ್ಯಾಯವನ್ನು ನೋಡಿ |