Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 8:14 - ಕನ್ನಡ ಸಮಕಾಲಿಕ ಅನುವಾದ

14 ಹೀಗೆ ನೀನು ಲೇವಿಯರನ್ನು ಇಸ್ರಾಯೇಲರೊಳಗಿಂದ ಪ್ರತ್ಯೇಕಿಸಬೇಕು, ಆಗ ಲೇವಿಯರು ನನ್ನವರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೀಗೆ ನೀನು ಲೇವಿಯರನ್ನು ಇಸ್ರಾಯೇಲರಿಂದ ಪ್ರತ್ಯೇಕಿಸಿದಾಗ ಅವರು ನನ್ನ ಸೊತ್ತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಹೀಗೆ ಲೇವಿಯರನ್ನು ಇಸ್ರಯೇಲರಿಂದ ಪ್ರತ್ಯೇಕಿಸಿದಾಗ ಅವರು ನನ್ನ ಸೊತ್ತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹೀಗೆ ನೀನು ಲೇವಿಯರನ್ನು ಇಸ್ರಾಯೇಲ್ಯರಿಂದ ಪ್ರತ್ಯೇಕಿಸಿದಾಗ ಅವರು ನನ್ನ ಸೊತ್ತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀನು ಲೇವಿಯರನ್ನು ಇತರ ಇಸ್ರೇಲರಿಂದ ಪ್ರತ್ಯೇಕಿಸಬೇಕು. ಲೇವಿಯರು ನನ್ನ ಆಸ್ತಿಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 8:14
13 ತಿಳಿವುಗಳ ಹೋಲಿಕೆ  

“ನಾನು ನನ್ನ ಅಮೂಲ್ಯ ಸೊತ್ತನ್ನು ಸೇರಿಸಿಕೊಳ್ಳುವ ಆ ದಿವಸದಲ್ಲಿ ಅವರು ನನ್ನವರಾಗಿರುವರು. ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ, ಅವರನ್ನು ಕನಿಕರಿಸುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನಾನು ನಿಮ್ಮ ಸಹೋದರರಾದ ಲೇವಿಯರನ್ನು ಇಸ್ರಾಯೇಲರೊಳಗಿಂದ ತೆಗೆದುಕೊಂಡಿದ್ದೇನೆ. ದೇವದರ್ಶನ ಗುಡಾರದ ಸೇವೆಯನ್ನು ಮಾಡುವುದಕ್ಕೆ ಅವರು ಯೆಹೋವ ದೇವರಿಗಾಗಿ ನಿಮಗೆ ಕಾಣಿಕೆಯಾಗಿ ಸಮರ್ಪಿತರಾಗಿದ್ದಾರೆ.


“ಇಸ್ರಾಯೇಲರಲ್ಲಿ ಜೇಷ್ಠರಾದವರೆಲ್ಲರಿಗೆ ಬದಲಾಗಿ ಲೇವಿಯರನ್ನು ಮತ್ತು ಅವರ ಚೊಚ್ಚಲಾದ ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನು ತೆಗೆದುಕೋ. ಲೇವಿಯರು ನನ್ನವರಾಗಿರುವರು. ನಾನೇ ಯೆಹೋವ ದೇವರು.


ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರೂ ಗಗನ ಮಂಡಲಗಳಿಗಿಂತ ಉನ್ನತಕ್ಕೇರಿದಾತರೂ ಆಗಿರುವ ಇಂಥಾ ಮಹಾಯಾಜಕ ನಮಗಿದ್ದಾರೆ.


ಆದರೆ ದೇವರು ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತಮ್ಮ ಕೃಪೆಯ ಮೂಲಕ ನನ್ನನ್ನು ಕರೆದು,


ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನಾಗುವುದಕ್ಕೆ ಕರೆಹೊಂದಿದವನೂ ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಗೊಂಡವನೂ ಆಗಿರುವ ಪೌಲನು ಬರೆಯುವ ಪತ್ರ.


ಆ ಕಾಲದಲ್ಲಿ ಯೆಹೋವ ದೇವರು ಲೇವಿ ಗೋತ್ರವನ್ನು ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ಯೆಹೋವ ದೇವರ ಮುಂದೆ ನಿಂತುಕೊಂಡು ಅವರಿಗೆ ಸೇವೆಮಾಡಿ, ಅವರ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದರು. ಅವರು ಈ ದಿನದವರೆಗೂ ಆ ಕೆಲಸವನ್ನು ನಡೆಸುತ್ತಿದ್ದಾರೆ.


ಏಕೆಂದರೆ ಇಸ್ರಾಯೇಲರಲ್ಲಿ ಮನುಷ್ಯರಾದರೂ ಪಶುಗಳಾದರೂ ಜೇಷ್ಠರಾದದ್ದೆಲ್ಲಾ ನನ್ನದೇ. ನಾನು ಈಜಿಪ್ಟ್ ದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ನಾನು ಸಂಹರಿಸಿದಾಗ ಇಸ್ರಾಯೇಲರಲ್ಲಿ ಚೊಚ್ಚಲಾದದ್ದನ್ನು ನನ್ನ ಸ್ವಂತಕ್ಕಾಗಿ ಪ್ರತ್ಯೇಕಿಸಿಕೊಂಡೆನು.


“ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ: ‘ಪುರುಷನಾದರೂ, ಸ್ತ್ರೀಯಾದರೂ ಯೆಹೋವ ದೇವರಿಗೆ ಪ್ರತ್ಯೇಕಿಸಿಕೊಳ್ಳುವ ಹಾಗೆ ನಾಜೀರ ವ್ರತ ಕೈಗೊಂಡರೆ,


“ಪ್ರತಿಯೊಬ್ಬ ಇಸ್ರಾಯೇಲಿನ ಮಹಿಳೆಯ ಜೇಷ್ಠ ಮಗನಿಗೆ ಬದಲಾಗಿ ಇಸ್ರಾಯೇಲರೊಳಗಿಂದ ಲೇವಿಯರನ್ನು ತೆಗೆದುಕೊಂಡಿದ್ದೇನೆ. ಲೇವಿಯರು ನನಗೆ ಸೇರಿದವರು.


ತರುವಾಯ ನೀನು ಲೇವಿಯರನ್ನು ಆರೋನನ ಮುಂದೆಯೂ ಅವನ ಪುತ್ರರ ಮುಂದೆಯೂ ನಿಲ್ಲಿಸಿ, ಅವರನ್ನು ಯೆಹೋವ ದೇವರಿಗೆ ನೈವೇದ್ಯದಂತೆ ಸಮರ್ಪಿಸಬೇಕು.


ಲೇವಿಯರನ್ನು ಆರೋನನಿಗೂ ಅವನ ಪುತ್ರರಿಗೂ ಒಪ್ಪಿಸು. ಇಸ್ರಾಯೇಲರೊಳಗಿಂದ ಅವನಿಗೆ ಪೂರ್ಣವಾಗಿ ಕೊಡಲಾದವರು ಇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು