ಅರಣ್ಯಕಾಂಡ 8:4 - ಕನ್ನಡ ಸಮಕಾಲಿಕ ಅನುವಾದ4 ದೀಪಸ್ತಂಭವೂ ಅದರ ಬುಡಭಾಗವೂ, ಪುಷ್ಪಾಲಂಕಾರಗಳೂ ಬಂಗಾರದ ನಕಾಸಿ ಕೆಲಸದಿಂದ ಹೊಡೆದು ಮಾಡಲಾಗಿತ್ತು. ಯೆಹೋವ ದೇವರು ಮೋಶೆಗೆ ತೋರಿಸಿದ ಮಾದರಿಯ ಪ್ರಕಾರವೇ ಅವನು ಅದನ್ನು ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ದೀಪಸ್ತಂಭವೂ, ಅದರ ಬುಡದ ಭಾಗವೂ, ಪುಷ್ಪಾಲಂಕಾರಗಳೂ ಬಂಗಾರದ ನಕಾಸಿ ಕೆಲಸದಿಂದ ಮಾಡಲ್ಪಟ್ಟಿತ್ತು. ಯೆಹೋವನು ತೋರಿಸಿದ ಮಾದರಿಯಂತೆ ಮೋಶೆ ಅದನ್ನು ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆ ದೀಪಸ್ತಂಭದ ಬುಡಭಾಗವೂ ಅದರ ಪುಷ್ಪಾಲಂಕಾರಗಳೂ ಚಿನ್ನದ ನಕಾಸಿ ಕೆಲಸದಿಂದ ಮಾಡಲ್ಪಟ್ಟಿದ್ದವು. ಸರ್ವೇಶ್ವರ ತೋರಿಸಿದ್ದ ಮಾದರಿಯಂತೆ ಮೋಶೆ ಅದನ್ನು ಮಾಡಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆ ದೀಪಸ್ತಂಭವು ಅದರ ಬುಡವೂ ಪುಷ್ಪಾಲಂಕಾರಗಳೂ ಚಿನ್ನದ ನಕಾಸಿ ಕೆಲಸದಿಂದ ಮಾಡಲ್ಪಟ್ಟಿತ್ತು. ಯೆಹೋವನು ತೋರಿಸಿದ ಮಾದರಿಯಂತೆ ಮೋಶೆ ಅದನ್ನು ಮಾಡಿಸಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆ ದೀಪಸ್ತಂಭವನ್ನು ಅದರ ಬುಡದಿಂದ ಪುಷ್ಪಾಲಂಕಾರಗಳವರೆಗೂ ಸಂಪೂರ್ಣವಾಗಿ ಚಿನ್ನದ ತಗಡಿನಿಂದ ಮಾಡಲಾಗಿತ್ತು. ಯೆಹೋವನು ಮೋಶೆಗೆ ತೋರಿಸಿದ ಮಾದರಿಯಂತೆ ಅದು ಮಾಡಲ್ಪಟ್ಟಿತ್ತು. ಅಧ್ಯಾಯವನ್ನು ನೋಡಿ |