Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 8:8 - ಕನ್ನಡ ಸಮಕಾಲಿಕ ಅನುವಾದ

8 ಅವರು ದಹನಬಲಿಗಾಗಿ ಒಂದು ಎಳೆಯ ಹೋರಿಯನ್ನು, ಅದರೊಂದಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನು ತೆಗೆದುಕೊಳ್ಳಬೇಕು. ದೋಷಪರಿಹಾರಕ ಬಲಿಗಾಗಿ ಮತ್ತೊಂದು ಹೋರಿಯನ್ನೂ ನೀನು ತೆಗೆದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ತರುವಾಯ ಅವರು ಸರ್ವಾಂಗಹೊಮಕ್ಕಾಗಿ ಒಂದು ಹೋರಿಯನ್ನೂ ಅದರೊಡನೆ ಸಮರ್ಪಿಸಬೇಕಾದ ಧಾನ್ಯನೈವೇದ್ಯ ಅಂದರೆ ಎಣ್ಣೆ ಬೆರೆಸಿದ ಗೋದಿಯ ಹಿಟ್ಟನ್ನೂ ದೋಷಪರಿಹಾರಕ ಯಜ್ಞಕ್ಕಾಗಿ ಮತ್ತೊಂದು ಹೋರಿಯನ್ನು ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಬಳಿಕ ಅವರು ದಹನಬಲಿಗಾಗಿ ಒಂದು ಹೋರಿಯನ್ನೂ ಅದರೊಡನೆ ಸಮರ್ಪಿಸಬೇಕಾದ ಧಾನ್ಯನೈವೇದ್ಯವನ್ನೂ, ಅಂದರೆ ಎಣ್ಣೆಬೆರೆಸಿದ ಗೋದಿಯ ಹಿಟ್ಟನ್ನೂ ಮತ್ತು ಪಾಪಪರಿಹಾರಕ ಬಲಿಗಾಗಿ ಮತ್ತೊಂದು ಹೋರಿಯನ್ನೂ ತೆಗೆದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ತರುವಾಯ ಅವರು [ಸರ್ವಾಂಗಹೋಮಕ್ಕಾಗಿ] ಒಂದು ಹೋರಿಯನ್ನೂ ಅದರೊಡನೆ ಸಮರ್ಪಿಸಬೇಕಾದ ಧಾನ್ಯನೈವೇದ್ಯ ಅಂದರೆ ಎಣ್ಣೆಬೆರಸಿದ ಗೋದಿಯ ಹಿಟ್ಟನ್ನೂ ದೋಷಪರಿಹಾರಕ ಯಜ್ಞಕ್ಕಾಗಿ ಮತ್ತೊಂದು ಹೋರಿಯನ್ನೂ ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ತರುವಾಯ ಲೇವಿಯರು ಸರ್ವಾಂಗಹೋಮಕ್ಕಾಗಿ ಒಂದು ಎಳೆಹೋರಿಯನ್ನು ಮತ್ತು ಅದರೊಡನೆ ಸಮರ್ಪಿಸಬೇಕಾದ ಧಾನ್ಯಸಮರ್ಪಣೆಗಾಗಿ ಎಣ್ಣೆ ಬೆರೆಸಿದ ಗೋಧಿಯಹಿಟ್ಟನ್ನು ತೆಗೆದುಕೊಂಡು ಬರಬೇಕು; ನೀನು ಅವರಿಂದ ದೋಷಪರಿಹಾರಕ ಯಜ್ಞಕ್ಕಾಗಿ ಮತ್ತೊಂದು ಎಳೆಹೋರಿಯನ್ನು ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 8:8
12 ತಿಳಿವುಗಳ ಹೋಲಿಕೆ  

“ ‘ಯಾರಾದರೂ ಯೆಹೋವ ದೇವರಿಗೆ ಧಾನ್ಯ ಸಮರ್ಪಣೆಯನ್ನು ಸಮರ್ಪಿಸುವುದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಸಬೇಕು, ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು.


ಆದರೂ ಆತನನ್ನು ಜಜ್ಜುವುದು ಯೆಹೋವ ದೇವರ ಚಿತ್ತವಾಗಿತ್ತು. ಯೆಹೋವ ದೇವರು ಆತನನ್ನು ಸಂಕಟಕ್ಕೆ ಒಳಪಡಿಸಿದನು. ಯೆಹೋವ ದೇವರು ಆತನ ಪ್ರಾಣವನ್ನು ದೋಷಪರಿಹಾರದ ಬಲಿಯನ್ನಾಗಿ ಮಾಡುವಾಗ, ಆತನು ತನ್ನ ಸಂತಾನವನ್ನು ಕಾಣುವನು. ಆತನು ತನ್ನ ದಿವಸಗಳನ್ನು ಉದ್ದ ಮಾಡಿದ ಮೇಲೆ ಮತ್ತು ಯೆಹೋವ ದೇವರ ಚಿತ್ತವು ಆತನ ಕೈಯಲ್ಲಿ ಸಫಲವಾಗುವುದು.


“ಈ ಸೂಚನೆಗಳನ್ನು ಸಂಪೂರ್ಣವಾಗಿ ಅನುಸರಿಸಿದ ನಂತರವೇ ಆರೋನನು ಮಹಾಪರಿಶುದ್ಧ ಸ್ಥಳಕ್ಕೆ ಪ್ರವೇಶಿಸಬೇಕು: ಪಾಪ ಪರಿಹಾರದ ಬಲಿಗಾಗಿ ಒಂದು ಹೋರಿಯನ್ನು ಮತ್ತು ದಹನಬಲಿಗಾಗಿ ಒಂದು ಟಗರನ್ನು ತೆಗೆದುಕೊಂಡು ಬರಬೇಕು.


“ಆರೋನನನ್ನೂ, ಅವನೊಂದಿಗೆ ಅವನ ಪುತ್ರರನ್ನೂ, ಉಡುಪುಗಳನ್ನೂ, ಅಭಿಷೇಕ ತೈಲವನ್ನೂ, ಪಾಪ ಪರಿಹಾರದ ಬಲಿಗಾಗಿ ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನೂ ತೆಗೆದುಕೋ.


ಅವರು ಮಾಡಿದ ಪಾಪವು ಗೊತ್ತಾದಾಗ, ಆ ಪಾಪಕ್ಕಾಗಿ ಸಮಾಜವು ಒಂದು ಎಳೆಯ ಹೋರಿಯನ್ನು ದೇವದರ್ಶನದ ಗುಡಾರದ ಮುಂದೆ ಪಾಪ ಪರಿಹಾರದ ಬಲಿಯಾಗಿ ತರಬೇಕು.


“ ‘ಅಭಿಷಿಕ್ತನಾದ ಯಾಜಕನು ಪಾಪಮಾಡಿ ಜನರ ಮೇಲೆ ಅಪರಾಧವನ್ನು ತಂದರೆ, ತಾನು ಮಾಡಿದ ಪಾಪಕ್ಕಾಗಿ ಕಳಂಕರಹಿತವಾದ ಒಂದು ಎಳೆಯ ಹೋರಿಯನ್ನು ದೋಷಪರಿಹಾರಕ ಬಲಿಯಾಗಿ ಯೆಹೋವ ದೇವರಿಗೆ ಸಮರ್ಪಿಸಬೇಕು.


“ ‘ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ, ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಯೆಹೋವ ದೇವರಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.


ಇವುಗಳನ್ನು ಒಂದೇ ಬುಟ್ಟಿಯಲ್ಲಿ ಇಟ್ಟುಕೊಂಡು ಹೋರಿ ಮತ್ತು ಎರಡು ಟಗರುಗಳ ಸಂಗಡ ತೆಗೆದುಕೊಂಡು ಬರಬೇಕು.


“ಅವರು ನನಗೆ ಯಾಜಕ ಸೇವೆಮಾಡುವಂತೆ ನೀನು ಅವರನ್ನು ಶುದ್ಧ ಮಾಡಲು ಮಾಡಬೇಕಾದದ್ದೇನೆಂದರೆ: ದೋಷವಿಲ್ಲದ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು