ಅರಣ್ಯಕಾಂಡ 9:10 - ಕನ್ನಡ ಸಮಕಾಲಿಕ ಅನುವಾದ10 ನೀನು ಇಸ್ರಾಯೇಲರಿಗೆ, “ನಿಮ್ಮಲ್ಲಿಯೂ, ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಶವದ ಸೋಂಕಿನಿಂದ ಅಶುದ್ಧನಾಗಿದ್ದರೂ, ಇಲ್ಲವೆ ದೂರ ಪ್ರಯಾಣದಲ್ಲಿದ್ದರೂ ಯೆಹೋವ ದೇವರಿಗೆ ಪಸ್ಕಹಬ್ಬವನ್ನು ಆಚರಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನಿಮ್ಮಲ್ಲಿಯಾಗಲಿ, ನಿಮ್ಮ ಸಂತತಿಯವರಲ್ಲಿಯಾಗಲಿ ಶವ ಸೋಂಕಿನಿಂದ ಅಶುದ್ಧರಾದವರೂ ಅಥವಾ ದೂರ ಪ್ರಯಾಣದಲ್ಲಿರುವವರೂ ಯೆಹೋವನ ಆಜ್ಞಾನುಸಾರ ಪಸ್ಕಹಬ್ಬವನ್ನು ಆಚರಿಸಲೇಬೇಕು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ನೀನು ಇಸ್ರಯೇಲರಿಗೆ ಹೀಗೆ ಆಜ್ಞಾಪಿಸು - ‘ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಾಗಲಿ ಶವ ಸೋಂಕಿದುದರಿಂದ ಅಶುದ್ಧರಾದವರು ಮಾತ್ರವಲ್ಲ ದೂರ ಪ್ರಯಾಣದಲ್ಲಿರುವವರು ಕೂಡ ಸರ್ವೇಶ್ವರನ ಆಜ್ಞಾನುಸಾರ ಪಾಸ್ಕ ಹಬ್ಬವನ್ನು ಆಚರಿಸಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಿಯಾಗಲಿ ಶವಸೋಂಕಿದದರಿಂದ ಅಶುದ್ಧರಾದವರೂ ದೂರ ಪ್ರಯಾಣದಲ್ಲಿರುವವರೂ ಕೂಡ ಯೆಹೋವನ ಆಜ್ಞಾನುಸಾರ ಪಸ್ಕಹಬ್ಬವನ್ನು ಆಚರಿಸಲೇಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸು: ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಿಯಾಗಲಿ ಮನುಷ್ಯಶವ ಸೋಂಕಿದ್ದರಿಂದ ಅಶುದ್ಧರಾದವರೂ ದೂರಪ್ರಯಾಣದಲ್ಲಿರುವವರೂ ಸಹ ಯೆಹೋವನ ಪಸ್ಕಹಬ್ಬವನ್ನು ಆಚರಿಸಲೇಬೇಕು. ಅಧ್ಯಾಯವನ್ನು ನೋಡಿ |