ಅರಣ್ಯಕಾಂಡ 9:12 - ಕನ್ನಡ ಸಮಕಾಲಿಕ ಅನುವಾದ12 ಅವರು ಅದರಿಂದ ಮರುದಿವಸಕ್ಕೆ ಏನನ್ನೂ ಉಳಿಸಬಾರದು. ಅದರಲ್ಲಿ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು, ಪಸ್ಕದ ಸಮಸ್ತ ಕಟ್ಟಳೆಗಳ ಪ್ರಕಾರವಾಗಿ ಅದನ್ನು ಆಚರಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅದರಲ್ಲಿ ಸ್ವಲ್ಪವನ್ನಾದರೂ ಮರುದಿನದವರೆಗೆ ಉಳಿಸಬಾರದು. ಆ ಪಶುವಿನ ಒಂದು ಎಲುಬನ್ನಾದರೂ ಮುರಿಯಬಾರದು. ಅಂತೂ ಪಸ್ಕಹಬ್ಬದ ವಿಷಯವಾಗಿರುವ ವಿಧಿನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅದರಲ್ಲಿ ಸ್ವಲ್ಪವನ್ನಾದರೂ ಮರುದಿನದವರೆಗೆ ಮಿಗಿಸಬಾರದು. ಅದರ ಒಂದು ಎಲುಬನ್ನಾದರೂ ಮುರಿಯಬಾರದು. ಪಾಸ್ಕ ಹಬ್ಬ ಕುರಿತ ವಿಧಿನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅದರಲ್ಲಿ ಸ್ವಲ್ಪವನ್ನಾದರೂ ಮರುದಿನದವರೆಗೆ ವಿುಗಿಸಬಾರದು; ಆ ಪಶುವಿನ ಒಂದು ಎಲುಬನ್ನಾದರೂ ಮುರಿಯಬಾರದು. ಅಂತೂ ಪಸ್ಕಹಬ್ಬದ ವಿಷಯವಾಗಿ ನೇಮಕವಾಗಿರುವ ಪ್ರಕಾರವೇ ಅದನ್ನು ಆಚರಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅದರಲ್ಲಿ ಯಾವುದನ್ನೂ ಮರುದಿನದವರೆಗೆ ಇಡಬಾರದು. ಅವರು ಅದೆಲ್ಲವನ್ನು ತಿಂದುಬಿಡಬೇಕು. ಆ ಕುರಿಮರಿಯ ಎಲುಬುಗಳನ್ನು ಮುರಿಯಬಾರದು. ಅವರು ಪಸ್ಕಹಬ್ಬದ ವಿಷಯವಾಗಿ ನೇಮಕವಾಗಿರುವ ನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು. ಅಧ್ಯಾಯವನ್ನು ನೋಡಿ |