ಅರಣ್ಯಕಾಂಡ 9:13 - ಕನ್ನಡ ಸಮಕಾಲಿಕ ಅನುವಾದ13 ಆದರೆ ಒಬ್ಬ ಮನುಷ್ಯನೂ ಆಚಾರವಾಗಿ ಶುದ್ಧನಾದವನು, ಪ್ರಯಾಣ ಮಾಡದವನಾಗಿದ್ದು ಪಸ್ಕವನ್ನು ಆಚರಿಸಲು ತಪ್ಪಿದರೆ, ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು. ಅವನು ಯೆಹೋವ ದೇವರ ಅರ್ಪಣೆಯನ್ನು ಅದರ ಸಮಯದಲ್ಲಿ ತರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದರೆ ಯಾವನಾದರೂ ಶುದ್ಧನಾಗದೆ, ಪ್ರಯಾಣಮಾಡದೆ ಇದ್ದು ಪಸ್ಕಹಬ್ಬವನ್ನು ಆಚರಿಸಲು ತಪ್ಪಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು. ಅವನು ಯೆಹೋವನಿಂದ ನೇಮಿತವಾದ ಯಜ್ಞವನ್ನು ನೇಮಕವಾದ ಕಾಲದಲ್ಲಿ ಸಮರ್ಪಿಸದೆ ಹೋದುದರಿಂದ ತನ್ನ ದೋಷಫಲವನ್ನು ಅನುಭವಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಒಬ್ಬನು ತಾನು ಶುದ್ಧನಾಗಿದ್ದರೂ ಪ್ರಯಾಣದಲ್ಲಿಲ್ಲದಿದ್ದರೂ ಪಾಸ್ಕ ಹಬ್ಬವನ್ನು ಆಚರಿಸಲು ತಪ್ಪಿದ್ದೇ ಆದರೆ ಅಂಥವನನ್ನು ಕುಲದಿಂದ ಹೊರಗೆ ಹಾಕಬೇಕು. ಅವನು ಸರ್ವೇಶ್ವರನಿಂದ ನಿಯಮಿತವಾದ ಬಲಿಯನ್ನು ಸಕಾಲದಲ್ಲಿ ಸಮರ್ಪಿಸದೆ ಹೋದುದರಿಂದ ತನ್ನ ಪಾಪಫಲವನ್ನು ಅನುಭವಿಸಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆದರೆ ಯಾವನಾದರೂ ಶುದ್ಧನಾಗಿಯೂ ಪ್ರಯಾಣಮಾಡದೆಯೂ ಇದ್ದು ಪಸ್ಕಹಬ್ಬವನ್ನು ಆಚರಿಸದೆ ತಪ್ಪಿದರೆ ಅವನು ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು. ಅವನು ಯೆಹೋವನಿಂದ ನೇವಿುತವಾದ ಯಜ್ಞವನ್ನು ಗೊತ್ತಾದ ಕಾಲದಲ್ಲಿ ಸಮರ್ಪಿಸದೆ ಹೋದದರಿಂದ ತನ್ನ ದೋಷಫಲವನ್ನು ಅನುಭವಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದರೆ ಯಾವನಾದರೂ ಶುದ್ಧನಾಗಿದ್ದರೂ ಪ್ರಯಾಣದಲ್ಲಿಲ್ಲದಿದ್ದರೂ ಪಸ್ಕಹಬ್ಬವನ್ನು ಆಚರಿಸದಿದ್ದರೆ, ಅವನನ್ನು ಅವನ ಜನರಿಂದ ಬಹಿಷ್ಕರಿಸಬೇಕು. ಅವನು ಯೆಹೋವನಿಂದ ನೇಮಕವಾದ ಯಜ್ಞವನ್ನು ಸರಿಯಾದ ಕಾಲದಲ್ಲಿ ಸಮರ್ಪಿಸದೆ ಹೋದದ್ದರಿಂದ ಅವನು ದೋಷಿಯಾಗಿದ್ದಾನೆ ಮತ್ತು ಅವನಿಗೆ ಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿ |