Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 9:17 - ಕನ್ನಡ ಸಮಕಾಲಿಕ ಅನುವಾದ

17 ಆ ಮೇಘವು ಗುಡಾರದ ಮೇಲಿನಿಂದ ಹೋದಾಗ, ಇಸ್ರಾಯೇಲರು ಪ್ರಯಾಣ ಮಾಡುತ್ತಿದ್ದರು, ಮೇಘವು ನೆಲಸಿದ ಸ್ಥಳದಲ್ಲಿ ಇಸ್ರಾಯೇಲರು ತಮ್ಮ ಗುಡಾರಗಳನ್ನು ಹಾಕಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ಮೇಘವು ಗುಡಾರದಿಂದ ಮೇಲಕ್ಕೆ ಎದ್ದಾಗ ಇಸ್ರಾಯೇಲರು ಮುಂದಕ್ಕೆ ಪ್ರಯಾಣಮಾಡುತ್ತಿದ್ದರು. ಆ ಮೇಘವು ಎಲ್ಲಿ ನಿಲ್ಲುವುದೋ ಅಲ್ಲಿ ಇಸ್ರಾಯೇಲರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅದು ಗುಡಾರದಿಂದ ಮೇಲಕ್ಕೆ ಎದ್ದಾಗ ಇಸ್ರಯೇಲರು ಮುಂದಕ್ಕೆ ಪ್ರಯಾಣ ಮಾಡುತ್ತಿದ್ದರು. ಆ ಮೇಘ ಎಲ್ಲಿ ನಿಲ್ಲುತ್ತಿತ್ತೋ ಅಲ್ಲೇ ಇಸ್ರಯೇಲರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆ ಮೇಘವು ಗುಡಾರದಿಂದ ಮೇಲಕ್ಕೆ ಎದ್ದಾಗ ಇಸ್ರಾಯೇಲ್ಯರು ಮುಂದಕ್ಕೆ ಪ್ರಯಾಣಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆ ಮೇಘವು ಪವಿತ್ರ ಗುಡಾರದಿಂದ ಮೇಲಕ್ಕೆ ಎದ್ದಾಗಲೆಲ್ಲಾ ಇಸ್ರೇಲರು ಮುಂದಕ್ಕೆ ಪ್ರಯಾಣಮಾಡುವರು. ಆ ಮೇಘವು ನಿಂತಲ್ಲೆಲ್ಲಾ ಇಸ್ರೇಲರು ಪಾಳೆಯ ಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 9:17
12 ತಿಳಿವುಗಳ ಹೋಲಿಕೆ  

ನಾನೇ ಬಾಗಿಲು; ನನ್ನ ಮೂಲಕವಾಗಿ ಯಾರು ಪ್ರವೇಶಿಸುವರೋ ಅವರೇ ಸುರಕ್ಷಿತವಾಗಿರುವರು. ಇದಲ್ಲದೆ ಅವರು ಒಳಗೆ ಹೋಗುವರು, ಹೊರಗೆ ಬರುವರು ಮತ್ತು ಮೇವನ್ನು ಕಂಡುಕೊಳ್ಳುವರು.


ನಿಮ್ಮ ಆಲೋಚನೆಯಂತೆ ನನ್ನನ್ನು ನಡೆಸಿ, ತರುವಾಯ ಮಹಿಮೆಗೆ ನನ್ನನ್ನು ಸೇರಿಸುವಿರಿ.


ಯೆಹೋವ ದೇವರು ಹೇಳುವುದೇನೆಂದರೆ: ನಾನು ನಿನಗೆ ಬುದ್ಧಿ ಹೇಳಿ, ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಮೆಚ್ಚುಗೆಯಿಂದ ನಿನ್ನನ್ನು ನಡೆಸುವೆನು.


ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಇರದು. ಝಳವೂ, ಬಿಸಿಲೂ ಬಡಿಯದು. ಏಕೆಂದರೆ ಅವರನ್ನು ಕರುಣಿಸುವ ದೇವರು ಅವರನ್ನು ನಡೆಸುತ್ತಾ, ನೀರುಕ್ಕುವ ಒರತೆಗಳ ಬಳಿಗೆ ತರುವರು.


ಇಸ್ರಾಯೇಲ್ ಸಮೂಹವೆಲ್ಲಾ ಯೆಹೋವ ದೇವರ ಅಪ್ಪಣೆಯ ಪ್ರಕಾರ ಅವರವರು ಹೊರಡುವ ಕ್ರಮದಂತೆ ಸೀನ್ ಮರುಭೂಮಿಯಿಂದ ಹೊರಟು ರೆಫೀದೀಮಿನಲ್ಲಿ ತಂಗಿದರು. ಅಲ್ಲಿ ಜನರಿಗೆ ಕುಡಿಯುವುದಕ್ಕೆ ನೀರು ಇರಲಿಲ್ಲ.


ಆ ಮೇಘವು ಎರಡು ದಿವಸಗಳಾದರೂ, ಒಂದು ತಿಂಗಳಾದರೂ, ಒಂದು ವರ್ಷವಾದರೂ ಗುಡಾರದ ಮೇಲೆ ನೆಲೆಸಿ ತಡಮಾಡಿದರೆ ಇಸ್ರಾಯೇಲರು ಪ್ರಯಾಣ ಮಾಡದೆ ಅಲ್ಲೇ ಇಳಿದುಕೊಳ್ಳುತ್ತಿದ್ದರು. ಅದು ಮೇಲೆ ಎದ್ದಾಗ ಮಾತ್ರ ಅವರು ಪ್ರಯಾಣ ಮಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು