ಅರಣ್ಯಕಾಂಡ 9:18 - ಕನ್ನಡ ಸಮಕಾಲಿಕ ಅನುವಾದ18 ಯೆಹೋವ ದೇವರ ಆಜ್ಞೆಯ ಪ್ರಕಾರ ಇಸ್ರಾಯೇಲರು ಪ್ರಯಾಣಮಾಡಿದರು. ಯೆಹೋವ ದೇವರ ಆಜ್ಞೆಯ ಪ್ರಕಾರ ಗುಡಾರಗಳನ್ನು ಹಾಕಿದರು. ಮೇಘವು ಗುಡಾರದ ಮೇಲೆ ನೆಲಸಿರುವ ಕಾಲವೆಲ್ಲಾ ಅವರು ತಮ್ಮ ಗುಡಾರಗಳಲ್ಲಿ ವಾಸಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರಾಯೇಲರು ಪ್ರಯಾಣಮಾಡುತ್ತಿದ್ದರು, ಯೆಹೋವನ ಅಪ್ಪಣೆಯನ್ನು ಹೊಂದಿ ಅವರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಆ ಮೇಘವು ದೇವದರ್ಶನದ ಗುಡಾರದ ಮೇಲಿರುವ ತನಕ ಅವರು ಇದ್ದ ಸ್ಥಳದಲ್ಲೇ ಇರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸರ್ವೇಶ್ವರನ ಅಪ್ಪಣೆಯನ್ನು ಹೊಂದಿಯೇ ಅವರು ಪ್ರಯಾಣ ಮಾಡುತ್ತಿದ್ದರು. ಸರ್ವೇಶ್ವರನ ಅಪ್ಪಣೆಯನ್ನು ಪಡೆದು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಆ ಮೇಘವು ದೇವದರ್ಶನದ ಗುಡಾರದ ಮೇಲಿರುವ ತನಕ ಅವರು ಇದ್ದ ಸ್ಥಳದಲ್ಲೇ ಇರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆ ಮೇಘವು ಎಲ್ಲಿ ನಿಲ್ಲುವದೋ ಅಲ್ಲಿ ಇಸ್ರಾಯೇಲ್ಯರು ತಮ್ಮ ಡೇರೆಗಳನ್ನು ಹಾಕಿಕೊಳ್ಳುವರು. ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರಾಯೇಲ್ಯರು ಪ್ರಯಾಣಮಾಡುವರು; ಯೆಹೋವನ ಅಪ್ಪಣೆಯನ್ನು ಹೊಂದಿ ಅವರು ತಮ್ಮ ಡೇರೆಗಳನ್ನು ಹಾಕಿಕೊಳ್ಳುವರು. ಆ ಮೇಘವು ದೇವದರ್ಶನದ ಗುಡಾರದ ಮೇಲಿರುವ ತನಕ ಅವರು ಇದ್ದ ಸ್ಥಳದಲ್ಲೇ ಇರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಇಸ್ರೇಲರು ಯೆಹೋವನ ಸೂಚನೆಯನ್ನು ಹೊಂದಿದ ಮೇಲೆ ಪ್ರಯಾಣಮಾಡುವರು. ಆ ಮೋಡವು ಪವಿತ್ರಗುಡಾರದ ಮೇಲಿರುವ ತನಕ ಅವರು ತಾವಿರುವಲ್ಲಿಯೇ ಇರುವರು. ಅಧ್ಯಾಯವನ್ನು ನೋಡಿ |