Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 9:22 - ಕನ್ನಡ ಸಮಕಾಲಿಕ ಅನುವಾದ

22 ಆ ಮೇಘವು ಎರಡು ದಿವಸಗಳಾದರೂ, ಒಂದು ತಿಂಗಳಾದರೂ, ಒಂದು ವರ್ಷವಾದರೂ ಗುಡಾರದ ಮೇಲೆ ನೆಲೆಸಿ ತಡಮಾಡಿದರೆ ಇಸ್ರಾಯೇಲರು ಪ್ರಯಾಣ ಮಾಡದೆ ಅಲ್ಲೇ ಇಳಿದುಕೊಳ್ಳುತ್ತಿದ್ದರು. ಅದು ಮೇಲೆ ಎದ್ದಾಗ ಮಾತ್ರ ಅವರು ಪ್ರಯಾಣ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆ ಮೇಘವು ದೇವದರ್ಶನದ ಗುಡಾರದ ಮೇಲೆ ನಿಂತಿರುವುದು ಎರಡು ದಿನವಾದರೂ, ಒಂದು ತಿಂಗಳಾದರೂ, ಒಂದು ವರ್ಷವಾದರೂ ಅಲ್ಲಿಯ ತನಕ ಇಸ್ರಾಯೇಲರು ಪ್ರಯಾಣಮಾಡದೆ ಅಲ್ಲೇ ಇಳಿದುಕೊಂಡಿರುತ್ತಿದ್ದರು. ಮೇಘವು ಏಳುವಾಗ ಅವರು ಹೊರಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ದೇವದರ್ಶನದ ಗುಡಾರದ ಮೇಲೆ ಆ ಮೇಘ ನಿಲ್ಲುವುದು ಎರಡು ದಿನವಾದರೂ ತಿಂಗಳಾದರೂ ಒಂದು ವರ್ಷವಾದರೂ ಸರಿಯೇ ಅಲ್ಲಿಯತನಕ ಇಸ್ರಯೇಲರು ಪ್ರಯಾಣ ಮಾಡದೆ ಅಲ್ಲೇ ಇಳಿದುಕೊಂಡಿರುತ್ತಿದ್ದರು. ಅದು ಮೇಲೆದ್ದಾಗ ಅವರು ಹೊರಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆ ಮೇಘವು ದೇವದರ್ಶನದ ಗುಡಾರದ ಮೇಲೆ ನಿಂತಿರುವದು ಎರಡು ದಿನವಾದರೂ ಒಂದು ತಿಂಗಳಾದರೂ ಒಂದು ವರುಷವಾದರೂ ಸರಿಯೇ, ಆ ಪರ್ಯಂತರವೂ ಇಸ್ರಾಯೇಲ್ಯರು ಪ್ರಯಾಣಮಾಡದೆ ಇಳುಕೊಂಡೇ ಇರುವರು; ಅದು ಎದ್ದಾಗ ಅವರು ಹೊರಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆ ಮೇಘವು ಪವಿತ್ರಗುಡಾರದ ಮೇಲೆ ಎರಡು ದಿನವಾಗಲಿ ಒಂದು ತಿಂಗಳಾಗಲಿ ಒಂದು ವರ್ಷವಾಗಲಿ ನಿಂತರೆ ಅದು ನಿಂತಿರುವ ತನಕ ಇಸ್ರೇಲರು ಪ್ರಯಾಣ ಮಾಡದೆ ಇಳಿದುಕೊಂಡೇ ಇರುವರು. ಅದು ಮೇಲಕ್ಕೆ ಎದ್ದಾಗ ಅವರು ಹೊರಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 9:22
18 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಹೇಳುವುದೇನೆಂದರೆ: ನಾನು ನಿನಗೆ ಬುದ್ಧಿ ಹೇಳಿ, ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಮೆಚ್ಚುಗೆಯಿಂದ ನಿನ್ನನ್ನು ನಡೆಸುವೆನು.


ಒಮ್ಮೆ ಯೇಸು ಶಿಷ್ಯರೊಂದಿಗೆ ಊಟಮಾಡುತ್ತಿದ್ದಾಗ ಶಿಷ್ಯರಿಗೆ, “ನೀವು ಯೆರೂಸಲೇಮನ್ನು ಬಿಟ್ಟು ಹೋಗಬೇಡಿರಿ, ನಾನು ನಿಮಗೆ ತಿಳಿಸಿದಂತೆ ನನ್ನ ತಂದೆ ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ.


ನಿಮ್ಮ ಚಿತ್ತದಂತೆ ಮಾಡುವುದಕ್ಕೆ ನನಗೆ ಬೋಧಿಸಿರಿ, ಏಕೆಂದರೆ ನೀವು ನನ್ನ ದೇವರು; ನಿಮ್ಮ ಒಳ್ಳೆಯ ಆತ್ಮವು ನನ್ನನ್ನು ಸಮಹಾದಿಯಲ್ಲಿ ನಡೆಸಲಿ.


ಜನರು ವಾಸಿಸುವ ಪಟ್ಟಣಕ್ಕೆ ಹೋಗುವಹಾಗೆ, ಜನರನ್ನು ಸರಿಯಾದ ಹಾದಿಯಲ್ಲಿ ನಡೆಸಿದರು.


ಮೋಶೆ ಆರೋನರ ಕೈಯಿಂದ ನಿಮ್ಮ ಜನರನ್ನು ಮಂದೆಯ ಹಾಗೆ ನಡೆಸಿದಿರಿ.


ನಿಮ್ಮ ಆಲೋಚನೆಯಂತೆ ನನ್ನನ್ನು ನಡೆಸಿ, ತರುವಾಯ ಮಹಿಮೆಗೆ ನನ್ನನ್ನು ಸೇರಿಸುವಿರಿ.


ಏಕೆಂದರೆ, ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವರಾಗಿದ್ದಾರೆ; ಅವರು ಅಂತ್ಯದವರೆಗೂ ನಮ್ಮ ಮಾರ್ಗದರ್ಶಿಯಾಗಿರುವರು.


ಆ ಮೇಘವು ಗುಡಾರದ ಮೇಲಿನಿಂದ ಹೋದಾಗ, ಇಸ್ರಾಯೇಲರು ಪ್ರಯಾಣ ಮಾಡುತ್ತಿದ್ದರು, ಮೇಘವು ನೆಲಸಿದ ಸ್ಥಳದಲ್ಲಿ ಇಸ್ರಾಯೇಲರು ತಮ್ಮ ಗುಡಾರಗಳನ್ನು ಹಾಕಿಕೊಳ್ಳುತ್ತಿದ್ದರು.


ಆಗ ಯೆಹೋವ ದೇವರು ಮೋಶೆಗೆ ಲೇವಿಯರ ವಿಷಯದಲ್ಲಿ ಆಜ್ಞಾಪಿಸಿದಂತೆಯೇ ಮೋಶೆಯೂ ಆರೋನನೂ ಮತ್ತು ಇಸ್ರಾಯೇಲರ ಸಮೂಹದವರೆಲ್ಲರೂ ಮಾಡಿದರು.


ಇಸ್ರಾಯೇಲರು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನು ಮಾಡಿದರು.


ಮೋಶೆಯು ಯೆಹೋವ ದೇವರು ತನಗೆ ಆಜ್ಞಾಪಿಸಿದ ಪ್ರಕಾರವೇ ಅವನು ಎಲ್ಲವನ್ನು ಮಾಡಿದನು.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ, ಇಸ್ರಾಯೇಲರು ಈ ಕೆಲಸಗಳನ್ನೆಲ್ಲಾ ಮಾಡಿದರು.


ಮೇಘವು ಸಂಜೆಯಿಂದ ಮುಂಜಾನೆಯವರೆಗೆ ಇದ್ದು, ಬೆಳಿಗ್ಗೆ ಮೇಲಕ್ಕೆ ಎದ್ದಾಗ, ಅವರು ಪ್ರಯಾಣ ಮಾಡುತ್ತಿದ್ದರು, ಹಗಲುರಾತ್ರಿ ಇದ್ದು ಮೇಘವು ಮೇಲಕ್ಕೇರಿದಾಗ ಅವರು ಪ್ರಯಾಣ ಮಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು